ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು, ಮಘೆ ಮಾಸೆ, ಕೃಷ್ಣೆ ಪಕ್ಷದ, ವಿಶಾಖ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ವಿಶಾಖ ನಕ್ಷತ್ರ ಇದ್ದು ಅಧಿಪತಿ ವಕ್ರಿ ಗುರು ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದೆ. ಆದರೆ ಪ್ರೀತಿ ಪಾತ್ರರ ಜೊತೆ ಸಂಯಮದಿಂದ ಇರಬೇಕಾಗುತ್ತದೆ.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಉತ್ತಮವಾದ ದಿನವಾಗಿದ್ದು ನೆಮ್ಮದಿ ಇರುತ್ತದೆ. ಯಾರು ವಿರೋಧಿಗಳಿದ್ದರೋ ಅವರಿಗೆ ಜಾಣತನದ ಪ್ರತಿಕ್ರಿಯೆಗಳನ್ನು ಇಂದು ನೀವು ನೀಡಬಹುದು.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಷ್ಟಕರವಾದ ದಿನವಾಗಿದೆ. ಪ್ರೇಮ ,ಪ್ರೀತಿಯಲ್ಲಿ ಇದ್ದವರಿಗೆ ಸಂಗಾತಿ ಟೀಕೆ ಮಾಡಬಹುದು. ಹಾಗಾಗಿ ಬೇಸರ ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ.
ವಿಡಿಯೋ ನೋಡಿ:
ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮದ ದಿನವಾಗಿದೆ. ತಾಯಿಯ ಆರೋಗ್ಯದ ಬಗ್ಗೆ ಹೆಚ್ಚು ತಲೆಕಡೆಸಿಕೊಳ್ಳುವ ದಿನವಾಗಬಹುದು. ಕೋರ್ಟ್, ಕಛೇರಿ ಯಾವುದೇ ವ್ಯವಹಾರದಲ್ಲಿ ಇಂದು ಜಾಸ್ತಿ ತಲೆಕೆಡಿಸಿಕೊಳ್ಳುವ ದಿನವಾಗುತ್ತದೆ.
Vastu Tips: Vastu Tips: ಈ ವಾಸ್ತು ನಿಯಮಗಳನ್ನು ಪಾಲಿಸಿದ್ರೆ ಮನೆಯಲ್ಲಿ ಅತ್ತೆ-ಸೊಸೆ ಜಗಳವೇ ಇರೊಲ್ಲ!
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮಾಧ್ಯಮ, ಮಾರ್ಕೆಟಿಂಗ್ ವ್ಯವಹಾರದಲ್ಲಿ ಲಾಭದಾಯಕವಾಗಲಿದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ನಿಮ್ಮ ಕುಟುಂಬದ ವಿಚಾರಗಳ ಸಮಸ್ಯೆ ಹೆಚ್ಚಾಗಬಹುದು. ಆದರೂ ಕೂಡ ಎಲ್ಲವನ್ನು ನಿಭಾಯಿಸಿಕೊಂಡು ಹೋಗುವ ದಿನ ನಿಮ್ಮದು ಆಗುತ್ತದೆ.
ತುಲಾ ರಾಶಿ: ತುಲಾ ರಾಶಿಗೆ ಉತ್ತಮವಾದ ದಿನವಾಗಿದ್ದು ಮನ ನೆಮ್ಮದಿ ಸಿಗುತ್ತದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಇಂದು ಬಗೆಹರಿಯುತ್ತದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯ ನಿರ್ಧಾರಗಳು ಯಾವುದೇ ಬೇಡ. ಯಾರ ಸಹಕಾರಗಳು ಕೂಡ ನಿಮಗೆ ಸಿಗುವುದಿಲ್ಲ.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮಿತ್ರರಿಂದ ಧನ ಆಗಮನ ವಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ಬಹಳಷ್ಟು ನೆಮ್ಮದಿ ಇದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಕಾಣುತ್ತೀರಿ. ಮನಸ್ಸಿಗೆ ಅತೀ ಹೆಚ್ಚಿನ ಖುಷಿ ಇಂದು ಸಿಗುತ್ತದೆ
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಸಿಗುತ್ತದೆ.ನಿಮ್ಮ ಗೌರವ ಇಂದು ಜಾಸ್ತಿ ಯಾಗುತ್ತದೆ.
ಮೀನ ರಾಶಿ: ಮೀನ ರಾಶಿ ಅವರಿಗೆ ಉತ್ತಮ ದಿನವಾಗಿದೆ. ಹಿಂದಿನ ದಿನದಲ್ಲಿ ಇದ್ದ ತೊಂದರೆಗಳು ಇಂದು ಬಗೆಹರಿಯುವ ದಿನವಾಗಿದೆ.