ಬೆಂಗಳೂರು, ಫೆ. 24: ಇಂದು ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಕೃತಿಕಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಇದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಇಂದು ಕೃತಿಕಾ ನಕ್ಷತ್ರ ಇದ್ದು ಅಧಿಪತಿ ರವಿ ಆಗಿದ್ದಾನೆ. ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂದು ಮೇಷ ರಾಶಿಯವರ ಮೇಲೆ ಅತಿಯಾದ ಒತ್ತಡ ಬೀರಲಿದೆ. ಹಾಗಾಗಿ ಇದನ್ನು ಸರಿಯಾಗಿ ನಿಭಾಯಿಸಬೇಕಾಗುತ್ತದೆ.
ವೃಷಭ ರಾಶಿ: ಇಂದು ವೃಷಭ ರಾಶಿಯವರ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಎಲ್ಲ ತೊಂದರೆ ಮಾಯಾವಾಗುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಕಷ್ಟದ ದಿನವಾಗಲಿದೆ. ನಿಮ್ಮ ಪ್ರೀತಿ ಪಾತ್ರರಿಂದ ಯಾವುದೇ ಸಹಕಾರ ನಿಮಗೆ ಸಿಗದೇ ಇರಬಹುದು.
ಕಟಕ ರಾಶಿ: ಕಟಕ ರಾಶಿಯವರಿಗೆ ಅತೀ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ಧಿ, ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಸಂತೋಷದಿಂದ ಈ ದಿನವನ್ನು ಕಳೆಯುತ್ತೀರಿ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆದರೂ ಹೆಚ್ಚಿನ ಭಾವುಕತೆಯಿಂದ ಸಮಯ ಕಳೆಯುತ್ತೀರಿ.
ಮನೆ ಗುಡಿಸುವುದಕ್ಕೆ ಮಾತ್ರವಲ್ಲ ಒರೆಸುವುದಕ್ಕೂ ಇದೆ ವಾಸ್ತು ನಿಯಮ!
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮುಖ್ಯವಾದ ವಿಚಾರದಲ್ಲಿ ಎಲ್ಲ ರೀತಿಯ ಸಹಕಾರ ನಿಮಗೆ ಸಿಗಬಹುದು.
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಬೇಡ. ಯಾವುದೇ ಕೆಲಸಗಳು ಇಂದು ನಿಮ್ಮ ಪರವಾಗಿ ನಡೆಯುವುದಿಲ್ಲ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪ್ರೀತಿ ಪಾತ್ರರಿಂದ ಸಂಪೂರ್ಣ ನೆಮ್ಮದಿ ಸಿಗುತ್ತದೆ. ಕಾರ್ಯಕ್ಷೇತ್ರದಲ್ಲಿ ಕೂಡ ಯಶಸ್ಸು ಕಾಣುತ್ತೀರಿ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಯಾವುದೇ ರೀತಿಯ ಯಶಸ್ಸು ಇಂದು ನಿಮಗೆ ಸಿಗುವುದಿಲ್ಲ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ತಾಯಿಯ ಆರೋಗ್ಯ, ಆಸ್ತಿ ಪಾಸ್ತಿ ವಿಚಾರವಾಗಿ ತೊಂದರೆಯಾಗಬಹುದು. ಕೋರ್ಟ್ ವ್ಯವಹಾರದಲ್ಲಿ ಕಷ್ಟ ಎದುರಾಗಲಿದೆ.
ಕುಂಭರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ನಿಮ್ಮ ಆತ್ಮವಿಶ್ವಾಸ ಚೆನ್ನಾಗಿ ಇರುತ್ತದೆ. ಬಂಧು ಬಂಧವರಿಂದ ಸಹಕಾರ ಸಿಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಮಾಧ್ಯಮದಲ್ಲಿ ಇರುವವರಿಗೆ ಲಾಭದಾಯಕವಾಗಲಿದೆ.