ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಮೇ 10, 2026: ಇಂದು ಈ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ!

Horoscope Today May 10th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣಪಕ್ಷದ, ಅಷ್ಟಮಿ ತಿಥಿ , ದನಿಷ್ಠ ನಕ್ಷತ್ರದ ಮೇ 10 ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷದ, ಅಷ್ಟಮಿ ತಿಥಿ, ದನಿಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ದನಿಷ್ಠ ನಕ್ಷತ್ರದ ಅಧಿಪತಿ ಕುಜ ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮೇಷ ರಾಶಿಗೆ ಇಂದು ಉತ್ತಮವಾದ ದಿನವಾಗಿದ್ದು ಧನ ಆಗಮನವಾಗುವ ದಿನವಾಗಿದೆ.

ವೃಷಭ ರಾಶಿ: ಈ ರಾಶಿಗೆ ಇಂದು ಭಾಗ್ಯೋದಯವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ. ಮನೆಯಲ್ಲೂ ಖುಷಿಯಾದ ದಿನವನ್ನು ಕಳೆಯಲಿದ್ದೀರಿ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಉತ್ತಮ ವಾದ ದಿನವಾಗಿದ್ದು ಭಾಗ್ಯೋದಯವಾಗುತ್ತದೆ. ಹಿರಿಯರ ಆಸ್ತಿ, ಉಡುಗೊರೆ ಪ್ರಾಪ್ತಿಯಾಗುವ ಸಾಧ್ಯತೆ ಇರುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರ ಮಾಡಲು ಹೋಗಬೇಡಿ. ಯಾವುದೇ ಕೆಲಸ ಕಾರ್ಯಗಳು ಇಂದು ನಿಮ್ಮ ಪರವಾಗಿ ನಡೆಯುವುದಿಲ್ಲ. ಮನಸ್ಸಿಗೆ ಹೆಚ್ಚಿನ ಬೇಸರ ನಿಮಗೆ ಉಂಟಾಗುವ ಸಾಧ್ಯತೆ ಇರುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮವಾದ ದಿನ ವಾಗಿದೆ. ದಾಂಪತ್ಯ ದಲ್ಲಿ ನೆಮ್ಮದಿ ಸಿಗಲಿದ್ದು ಬಿಸೆನೆಸ್ ವ್ಯವಹಾರದಲ್ಲೂ ಯಶಸ್ಸು ಸಿಗುತ್ತದೆ.

Vastu Tips: ಹಾಸಿಗೆಯ ಕೆಳಗೆ ಈ ವಸ್ತುಗಳನ್ನು ಇಟ್ಟರೆ ಈ ಸಮಸ್ಯೆಗಳು ಎದುರಾಗಬಹುದು

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಶತ್ರುಗಳು ಹಿಮ್ಮೆಟ್ಟ ಬಹುದು‌. ಕೆಲಸ ಕಾರ್ಯದಲ್ಲೂ ಯಶಸ್ಸು ಸಿಗಲಿದ್ದು ಸಾಮಾಜಿಕ ಚಟುವಟಿಕೆಯಲ್ಲೂ ಪ್ರತಿಷ್ಠೆ ಗಳಿಸುತ್ತೀರಿ.

ತುಲಾ ರಾಶಿ: ತುಲಾ ಅವರಿಗೆ ಕಷ್ಟಕರವಾದ ದಿನವಾಗಿದೆ. ಆದರೆ ಮಿತ್ರರ ಬಗ್ಗೆ ಒಡಕು ಉಂಟಾಗುವ ಸಾಧ್ಯತೆ ಇರುತ್ತದೆ‌. ಪ್ರೇಮ ಪ್ರೀತಿ ಪ್ರಕರಣದಲ್ಲಿ ಸೋಲು ಉಂಟಾಗಬಹುದು. ಹಣಕಾಸಿನ ವಿಚಾರದಲ್ಲಿ ಯಾವುದೇ ಮುಖ್ಯ ನಿರ್ಧಾರ ಇಂದು ಮಾಡಲು ಹೋಗಬೇಡಿ‌

ವೃಶ್ಚಿಕ ರಾಶಿ: ಈ ರಾಶಿಗೆ ಮನೆಯ ವಿಚಾರವಾಗಿ ಹಾಗೂ ಆಸ್ತಿ ಪಾಸ್ತಿ ವಿಚಾರವಾಗಿ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ‌. ಕೋರ್ಟ್,ಕಛೇರಿ ವ್ಯವಹಾರದಲ್ಲಿ ಹೆಚ್ಚಿನ ತೊಂದರೆ ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗಲಿದ್ದು ಆತ್ಮವಿಶ್ವಾಸ ತುಂಬಾ ಚೆನ್ನಾಗಿ ಇರುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೂ ಅತೀ ಉತ್ತಮವಾಗಿದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನೆಯಲ್ಲಿ ನೆಮ್ಮದಿ ಇದ್ದು ಶುಭ ಸಮಾರಂಭಗಳು ನಡೆಯುವ ಸಾಧ್ಯತೆ ಇರುತ್ತದೆ .ಅದೇ ರೀತಿ ಕುಟುಂಬದಲ್ಲೂ ನೆಮ್ಮದಿ ಇರುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನ ವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಧನ ಆಗಮನವಾಗುತ್ತದೆ. ಅದೇ ರೀತಿ ಹಿಂದಿನ ದಿನದಲ್ಲಿ ಇದ್ದ ಸಮಸ್ಯೆ ಎಲ್ಲವೂ ಬಗೆಹರಿಯುತ್ತದೆ.

ಮೀನ ರಾಶಿ: ಮೀನ ರಾಶಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅದೇ ರೀತಿ ಮುಖ್ಯವಾದ ಯಾವುದೇ ವಿಚಾರದಲ್ಲಿ ನಿರ್ಧಾರಗಳು ಬೇಡ.