ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ ಫೆಬ್ರವರಿ 28: ಈ 7 ರಾಶಿಯವರಿಗೆ ಇಂದು ಶುಭ ಫಲ

Horoscope Today February 28: ಇಂದು ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಶರದೃತು ಫಾಲ್ಗುಣ ಮಾಸೆ, ಶುಕ್ಷ ಪಕ್ಷ, ತ್ರಯೋದಶಿ ತಿಥಿ, ಪುಷ್ಯ ನಕ್ಷತ್ರದ ಫೆಬ್ರವರಿ 28ನೇ ತಾರೀಖಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಈ ರಾಶಿಯವರಿಗೆ ಇಂದು ಪ್ರತಿಷ್ಠೆ- ಗೌರವ ಹೆಚ್ಚಿಸುವ ದಿನ

ಇಂಟರ್‌ನೆಟ್ ಚಿತ್ರ -

Profile
Pushpa Kumari Feb 28, 2026 6:00 AM

ಬೆಂಗಳೂರು, ಫೆ. 28: ಇಂದು ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಪುಷ್ಯ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಇಂದು ಪುಷ್ಯ ನಕ್ಷತ್ರ ಇದ್ದು, ಶುಕ್ರ ಮೀನ‌ ರಾಶಿಯನ್ನು ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂದು ಮೇಷ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮಿತ್ರರಿಂದ, ಪ್ರೀತಿಪಾತ್ರರಿಂದ ಯಾವುದೇ ಸಹಕಾರ ಸಿಗುವುದಿಲ್ಲ. ಹಾಗಾಗಿ ಯಾವುದೇ ಮುಖ್ಯ ನಿರ್ಧಾರಗಳನ್ನು ಮಾಡಲು ಹೋಗಬೇಡಿ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಅತ್ಯುತ್ತಮ ಫಲ ಸಿಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಗುಂಪು ಕೆಲಸಗಳಲ್ಲಿ ಇರುವವರಿಗೆ ಅದೃಷ್ಟದ ದಿನವಾಗಲಿದೆ.

ಮಿಥುನ ರಾಶಿ: ಈ ರಾಶಿಯಲ್ಲಿರುವವರಿಗೆ ಕಾರ್ಯ ಕ್ಷೇತ್ರದಲ್ಲಿ ತುಂಬಾನೇ ಶ್ರಮ ಪಡಬೇಕಾಗಿ ಬರಬಹುದು. ಪುರುಷರಿಗೆ ಹೆಣ್ಣು ಮಕ್ಕಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಹಾಗಾಗಿ ಮಿತವಾಗಿ ಮಾತನಾಡಬೇಕು.

ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದ್ದು, ಅದೃಷ್ಟ ತರಲಿದೆ. ಸಮಾಜದಲ್ಲಿ ನಿಮಗೆ ಗೌರವ ಜಾಸ್ತಿ ಆಗುವ ಸಾಧ್ಯತೆ ಇದೆ. ಇಂದು ನಿಮ್ಮ ಪ್ರತಿಷ್ಠೆ ಜಾಸ್ತಿಯಾಗಲಿದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮ ದಿನವಾಗಲಿದೆ.‌ ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ನೋವು, ತೊಂದರೆಗಳಿಗೆ ಪರಿಹಾರ ದೊರೆಯಲಿದೆ. ಇತರರಿಂದ ಗೌರವ ಹೆಚ್ಚಾಗುವ ದಿನವಾಲಿದೆ.

ಲಕ್ಷ್ಮೀ ದೇವಿಯ ವಾಹನ ಗೂಬೆ: ಮನೆಯಲ್ಲಿ ವಿಗ್ರಹ ಇಟ್ಟರೆ ಶುಭವೇ? ವಾಸ್ತು ಹೇಳುವುದು ಏನು?

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಬೇರೆಯವರ ಜತೆ ಮಾತುಕತೆ ಕಡಿಮೆ ಮಾಡಬೇಕು. ನಿಮ್ಮ ಪ್ರೀತಿ ಪಾತ್ರರ ಜತೆ ವೈಮನಸ್ಸು ಆಗುವ ಸಾಧ್ಯತೆ ಇದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟ ಗೋಚರವಾಗಲಿದೆ. ಕೆಲಸ ಕಾರ್ಯದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇದೆ. ಬೇರೆಯವರಿಂದ ತೊಂದರೆ ಜಾಸ್ತಿಯಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಉತ್ತಮ ಫಲ ಗೋಚರವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮಕ್ಕಳಿಂದ ಖುಷಿ ಸಿಗುತ್ತದೆ.‌ ನಿಮ್ಮ ಬುದ್ಧಿವಂತಿಕೆ ಮೂಲಕ ಇಂದು ಲಾಭವಾಗುವ ಸಾಧ್ಯತೆ ಇದೆ.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಕಷ್ಟದ ದಿನವಾಗಲಿದೆ. ಆಸ್ತಿಪಾಸ್ತಿ ವಿಚಾರವಾಗಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ತಾಯಿಯ ಆರೋಗ್ಯ ಬಗ್ಗೆ ಗಮನ ಹರಿಸಬೇಕಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಅತ್ಯುತ್ತಮ ಫಲ ಗೋಚರವಾಗಲಿದೆ. ಮನಸ್ಸಿಗೆ ನೆಮ್ಮದಿ ಇರಲಿದ್ದು, ನಿಮ್ಮ ಪ್ರೀತಿ ಪಾತ್ರರ ಜತೆ ಖುಷಿಯಿಂದ ಸಮಯ ಕಳೆಯುತ್ತೀರಿ.

ಕುಂಭರಾಶಿ: ಈ ರಾಶಿಯವರಿಗೆ ನೆಮ್ಮದಿ ಇದ್ದು, ಧನಾಗಮನ ಪ್ರಾಪ್ತಿಯಾಗುತ್ತದೆ. ಸಂಸಾರದಲ್ಲಿ ನೆಮ್ಮದಿ ಇರುತ್ತದೆ.

ಮೀನ ರಾಶಿ: ಮೀನ ರಾಶಿಗೆ ಇಂದು ಉತ್ತಮವಾಗಲಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ನೋವೆಲ್ಲ ಮಾಯವಾಗಲಿದೆ. ಎಲ್ಲ ಕೆಲಸ ಕಾರ್ಯದಲ್ಲಿ ಜಯ ಸಿಗುತ್ತದೆ.