ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ ನವೆಂಬರ್ 14, 2026: ಉದ್ಯೋಗದಲ್ಲಿ ಉತ್ತಮ ಅವಕಾಶ, ಆರ್ಥಿಕ ಪರಿಸ್ಥಿತಿ ಸುಧಾರಣೆ

Horoscope Today November 14, 2026: ಸ್ವಸ್ತಿ ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ ಶುಕ್ಲ ಪಕ್ಷದ ಪಂಚಮಿ ತಿಥಿಯ ಪೂರ್ವಾಷಾಢ ನಕ್ಷತ್ರದ ಶನಿವಾರದ ಈ ದಿನ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ವಿವರ ಇಲ್ಲಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ನವೆಂಬರ್‌ 14ರ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ಭವಿಷ್ಯ ಇಂತಿದೆ.

ಮೇಷ ರಾಶಿ: ಇಂದು ನಿಮ್ಮಲ್ಲಿ ಉತ್ಸಾಹ ಮತ್ತು ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದವರೊಂದಿಗೆ ಸಂತೋಷದ ಸಮಯ ಕಳೆಯುವಿರಿ. ನಿಮ್ಮ ತಾಳ್ಮೆಗೆ ಪರೀಕ್ಷೆ. ಮನೆಯಲ್ಲಿ ಸಣ್ಣ ವಿಷಯಕ್ಕೆ ಜಗಳ ಆಗಬಹುದು.

ವೃಷಭ ರಾಶಿ: ಇಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಬಹುದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಿಮ್ಮ ಮಕ್ಕಳು / ತಮ್ಮ-ತಂಗಿ ಜತೆ ಒಳ್ಳೆಯ ಸಮಯ ಕಳೆಯುತ್ತೀರಿ.

ಮಿಥುನ ರಾಶಿ: ಇಂದು ಶುಭ ಸುದ್ದಿಗಳನ್ನು ಕೇಳುವ ಸಾಧ್ಯತೆ ಇದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಸ್ನೇಹಿತರ ಸಹಕಾರ ದೊರೆಯಲಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.

ಕಟಕ ರಾಶಿ: ಇಂದು ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಕೆಲಸದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹೊಸ ಹೂಡಿಕೆ ಮಾಡುವ ಮುನ್ನ ಯೋಚಿಸಿ. ಆರೋಗ್ಯದಲ್ಲಿ ಸುಧಾರಣೆ.

ಸಿಂಹ ರಾಶಿ: ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಪಡೆಯುವಿರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆಯಿದೆ. ಕೋಪ ಮತ್ತು ಆತುರದ ನಿರ್ಧಾರಗಳನ್ನು ನಿಯಂತ್ರಿಸಿ. ಇಂದು ನೀವು ತುಂಬಾ ಕೂಲ್ ಆಗಿರ್ತೀರಿ.

ಶನಿ ದೋಷದ ಪರಿಹಾರಕ್ಕೆ ಶನಿವಾರ ಏನು ಮಾಡಬೇಕು? ಇಲ್ಲಿದೆ ಸಲಹೆ

ಕನ್ಯಾ ರಾಶಿ: ಇಂದು ಸ್ವಲ್ಪ ಹೆಚ್ಚಿನ ಜವಾಬ್ದಾರಿ ಎದುರಾಗಬಹುದು. ತಾಳ್ಮೆಯಿಂದ ಕೆಲಸ ಮಾಡಿದರೆ ಯಶಸ್ಸು ನಿಮ್ಮದಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರ ಸಲಹೆ ಸಹಕಾರಿಯಾಗಲಿದೆ. ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಲಿದೆ.

ತುಲಾ ರಾಶಿ: ಇಂದು ಅದೃಷ್ಟ ನಿಮ್ಮ ಕೈಹಿಡಿಯಲಿದೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯುವ ಸಾಧ್ಯತೆ. ವ್ಯಾಪಾರದಲ್ಲಿ ಉತ್ತಮ ಬೆಳವಣಿಗೆ ಕಂಡುಬರಲಿದೆ. ದಾಂಪತ್ಯ ಜೀವನದಲ್ಲಿ ಸಂತಸ.

ವೃಶ್ಚಿಕ ರಾಶಿ: ಇಂದು ನಿಮ್ಮ ಯೋಜನೆಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಆರ್ಥಿಕವಾಗಿ ಲಾಭದಾಯಕ ದಿನವಾಗಲಿದೆ. ಹಳೆಯ ಸ್ನೇಹಿತರ ಭೇಟಿ ಸಂತಸ ತರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಕಾಲು ನೋವು, ಬೆನ್ನು ನೋವು ಬರಬಹುದು. ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ.

ಧನು ರಾಶಿ: ಇಂದು ಹೊಸ ಕೆಲಸಗಳನ್ನು ಆರಂಭಿಸಲು ಉತ್ಸಾಹ ಮೂಡಲಿದೆ. ಉದ್ಯೋಗದಲ್ಲಿ ಪ್ರಗತಿಯ ಸೂಚನೆಗಳಿವೆ. ದೂರ ಪ್ರಯಾಣದ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ನಿಮ್ಮ ರಾಶಿಗೆ ಚಂದ್ರ ಬಂದಿದ್ದಾನೆ. ನಾಳೆ ನಿಮ್ಮ ದಿನ. ನೀವು ಅಂದುಕೊಂಡಿದ್ದು ನಡೆಯುತ್ತೆ. ಶನಿ ದೇವರ ದರ್ಶನ ಮಾಡಿ.

ಮಕರ ರಾಶಿ: ಇಂದು ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯ ಸಾಬೀತುಪಡಿಸುವ ಅವಕಾಶ ಸಿಗಲಿದೆ. ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಖರ್ಚಿನ ಮೇಲೆ ನಿಯಂತ್ರಣ ಇರಲಿ.

ಕುಂಭ ರಾಶಿ: ಇಂದು ನಿಮ್ಮ ಜೀವನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳು ಕಂಡುಬರಬಹುದು. ಹೊಸ ಯೋಜನೆಗಳಿಗೆ ಚಾಲನೆ ನೀಡುವಿರಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿದೆ. ಆತ್ಮೀಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸ್ನೇಹಿತರಿಂದ ಸರ್‌ಪ್ರೈಸ್‌ ಸಿಗಲಿದೆ.

ಮೀನ ರಾಶಿ: ಇಂದು ಉತ್ತಮ ದಿನವಾಗಿರಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಬೆಳವಣಿಗೆ. ಕುಟುಂಬದವರ ಪ್ರೀತಿ ಮತ್ತು ಬೆಂಬಲ ದೊರೆಯಲಿದೆ.

Ramesh Ballamoole

View all posts by this author