ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ ನವೆಂಬರ್ 17, 2026: ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಮೆಚ್ಚುಗೆ

Horoscope Today November 17, 2026: ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಮಂಗಳವಾರದ ಈ ದಿನ ಶ್ರೀ ಆಂಜನೇಯ ಸ್ವಾಮಿಯ ಆರಾಧನೆಗೆ ವಿಶೇಷ ಮಹತ್ವವಿದೆ. ಭಕ್ತರು ಹನುಮಾನ್ ಚಾಲೀಸಾ ಪಠಿಸಬೇಕು. ದೇವಸ್ಥಾನ ದರ್ಶನ ಮಾಡಬಹುದು.

ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Nov 17, 2026 6:00 AM

ಬೆಂಗಳೂರು: ಚಂದ್ರ ಕುಂಭ ರಾಶಿಗೆ ಪ್ರವೇಶಿಸುವ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.

ಮೇಷ ರಾಶಿ: ಇಂದು ನಿಮ್ಮ ಪಾಲಿಗೆ ಉತ್ತಮ ದಿನವಾಗಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ದೊರೆಯುವ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಣ್ಣ ವಿಷಯಕ್ಕೆ ಜಗಳ ಆಗಬಹುದು. ಹೀಗಾಗಿ ನಿಮ್ಮ ಕೋಪವನ್ನು ಕಂಟ್ರೋಲ್ ಮಾಡಿ.

ವೃಷಭ ರಾಶಿ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಬಹುದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಮನಸ್ಸಿಗೆ ತುಂಬಾ ಖುಷಿಯಾಗಲಿದೆ.

ಮಿಥುನ ರಾಶಿ: ಇಂದು ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಪಡೆಯುವಿರಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿದರೆ ಉತ್ತಮ. ಕೆಲಸದಲ್ಲಿ ಒಂದು ದೊಡ್ಡ ಅವಕಾಶ ಸಿಗಲಿದೆ. ಅದನ್ನು ಬಿಟ್ಟುಕೊಡಬೇಡಿ. ಬಾಸ್ ನಿಮ್ಮನ್ನು ನಂಬ್ತಾರೆ.

ಕರ್ಕಾಟಕ ರಾಶಿ: ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿ ಇರಲಿದೆ. ಕುಟುಂಬದ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರು ಉಂಟಾಗಬಹುದು. ಮನೆಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ.

ಸಿಂಹ ರಾಶಿ: ಆತ್ಮವಿಶ್ವಾಸದಿಂದ ಮುನ್ನಡೆಯುವಿರಿ. ಹೊಸ ಕೆಲಸಗಳನ್ನು ಆರಂಭಿಸಲು ಉತ್ತಮ ದಿನ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಸ್ನೇಹಿತರಿಂದ ಸಹಕಾರ ದೊರೆಯಲಿದೆ. ಕೋಪ ಮತ್ತು ಆತುರದ ನಿರ್ಧಾರಗಳನ್ನು ತಪ್ಪಿಸಿ.

ಮಂಗಳ ದೋಷ ನಿವಾರಣೆಗೆ ಮಂಗಳವಾರ ಈ ಕೆಲಸ ಮಾಡಿ

ಕನ್ಯಾ ರಾಶಿ: ಕೆಲಸದ ಒತ್ತಡ ಹೆಚ್ಚಾಗಬಹುದು. ಆದರೂ ತಾಳ್ಮೆಯಿಂದ ಕಾರ್ಯನಿರ್ವಹಿಸಿದರೆ ಯಶಸ್ಸು ನಿಮ್ಮದಾಗಲಿದೆ. ಹಳೆಯ ಹೂಡಿಕೆಯಿಂದ ಲಾಭ ದೊರೆಯುವ ಸಾಧ್ಯತೆ ಇದೆ. ಕುಟುಂಬದ ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಹಣದ ವಿಷಯದಲ್ಲಿ ಎಚ್ಚರಿಕೆ. ಯಾರಿಗೂ ಸಾಲ ಕೊಡಬೇಡಿ.

ತುಲಾ ರಾಶಿ: ಇಂದು ಅದೃಷ್ಟ ನಿಮ್ಮ ಕೈಹಿಡಿಯಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆ ಹೆಚ್ಚಾಗಲಿದೆ. ಹೊಸ ವ್ಯಕ್ತಿಗಳ ಪರಿಚಯದಿಂದ ಭವಿಷ್ಯದಲ್ಲಿ ಅನುಕೂಲವಾಗಬಹುದು.

ವೃಶ್ಚಿಕ ರಾಶಿ: ಕೆಲವು ಸವಾಲುಗಳು ಎದುರಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಿ. ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಇರಲಿ. ಕುಟುಂಬದವರ ಬೆಂಬಲ ನಿಮಗೆ ಧೈರ್ಯ ನೀಡಲಿದೆ. ಆರೋಗ್ಯದ ಕಡೆ ಗಮನ ಹರಿಸಿ. ನಿಮ್ಮ ರಾಶಿಯ ಅಧಿಪತಿ ಮಂಗಳ. ನಾಳೆ ನಿಮ್ಮ ದಿನ. ನೀವು ಅಂದುಕೊಂಡಿದ್ದು ನಡೆಯುತ್ತೆ.

ಧನು ರಾಶಿ: ಇಂದು ಶುಭ ಫಲಗಳು ದೊರೆಯಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರಿಗೆ ಉತ್ತಮ ಸುದ್ದಿ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಒಪ್ಪಂದಗಳು ಲಾಭ ತರಬಹುದು.

ಮಕರ ರಾಶಿ: ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಬಹುದು. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ನಡೆಯಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಕೆಲಸದಲ್ಲಿ ಸ್ವಲ್ಪ ಒತ್ತಡ ಇರಲಿದೆ.

ಕುಂಭ ರಾಶಿ: ಹೊಸ ಯೋಜನೆಗಳನ್ನು ರೂಪಿಸಲು ಉತ್ತಮ ದಿನ. ಸ್ನೇಹಿತರು ಮತ್ತು ಸಹೋದ್ಯೋಗಿಗಳಿಂದ ಸಹಕಾರ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವಿರಿ. ನಿಮ್ಮ ರಾಶಿಗೆ ಚಂದ್ರ ಬಂದಿದ್ದಾನೆ. ಯಾರಿಗೂ ಬೇಜಾರು ಮಾಡಬೇಡಿ.

ಮೀನ ರಾಶಿ: ಇಂದು ನಿಮ್ಮ ಮನಸ್ಸಿನ ಆಸೆಗಳು ಈಡೇರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ ಕಂಡುಬರಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಆರ್ಥಿಕ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಿ. ಇಂದು ಒಂದು ಹಳೆಯ ಸ್ನೇಹಿತ ಸಿಗ್ತಾನೆ.