ಮೇಷ ರಾಶಿ: ಇಂದು ನಿಮ್ಮ ಪಾಲಿಗೆ ಉತ್ತಮ ದಿನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಲಿದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ಸಿಗುವ ಸಾಧ್ಯತೆಯಿದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಒಂದು ಒಳ್ಳೆಯ ಸುದ್ದಿ ಸಿಗಲಿದೆ.
ವೃಷಭ ರಾಶಿ: ಕೆಲಸ ಕಾರ್ಯಗಳಲ್ಲಿ ಯಶಸ್ಸು. ಬಹುದಿನಗಳಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ. ಖುಷಿಯ ದಿನ.
ಮಿಥುನ ರಾಶಿ: ಇಂದು ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಗಳಿಸುವಿರಿ. ವ್ಯಾಪಾರಿಗಳಿಗೆ ಉತ್ತಮ ದಿನ. ಸ್ನೇಹಿತರ ಸಹಕಾರ ದೊರೆಯಲಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ನಿಮ್ಮ ರಾಶಿಯ ಅಧಿಪತಿ ಬುಧ. ಹೀಗಾಗಿ ಇಂದು ನಿಮ್ಮದೇ ದಿನ. ಇಂಟರ್ವ್ಯೂ ಇದ್ದರೆ ಯಶಸ್ಸು ಸಿಗಲಿದೆ.
ಕಟಕ ರಾಶಿ: ಇಂದು ಕೆಲವು ಸವಾಲುಗಳು ಎದುರಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರ ಸಲಹೆ ಸಹಕಾರಿ. ಆರೋಗ್ಯದ ಕಡೆ ಗಮನ ಹರಿಸಿ. ಹಣಕಾಸಿನ ವಿಚಾರದಲ್ಲಿ ಒಳ್ಳೆಯ ದಿನ.
ಸಿಂಹ ರಾಶಿ: ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಉತ್ತಮ ದಿನ. ಸಮಾಜದಲ್ಲಿ ಗೌರವ ಹೆಚ್ಚಾಗಬಹುದು. ದಾಂಪತ್ಯ ಜೀವನದಲ್ಲಿ ಸಂತೋಷ ನೆಲೆಸಲಿದೆ. ಇಂದು ನೀವು ತುಂಬಾ ಬ್ಯುಸಿ ಆಗಿರ್ತೀರಿ.
ಬುಧವಾರ ಗಣೇಶನ ಪೂಜೆಗೂ ಮುನ್ನ ಈ 5 ಕೆಲಸ ಮಾಡಿ; ಹಣಕಾಸಿನ ಸಮಸ್ಯೆ ದೂರವಾಗುತ್ತೆ
ಕನ್ಯಾ ರಾಶಿ: ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಬಹುದು. ತಾಳ್ಮೆಯಿಂದ ಕಾರ್ಯನಿರ್ವಹಿಸಿದರೆ ಯಶಸ್ಸು ನಿಮ್ಮದಾಗಲಿದೆ. ಆರ್ಥಿಕವಾಗಿ ಉತ್ತಮ ಬೆಳವಣಿಗೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆಯಿದೆ. ಪರೀಕ್ಷೆ, ಕೆಲಸ ಎಲ್ಲದರಲ್ಲೂ ಯಶಸ್ಸು.
ತುಲಾ ರಾಶಿ: ಇಂದು ನಿಮ್ಮ ಪಾಲಿಗೆ ಉತ್ತಮ ದಿನ. ವ್ಯಾಪಾರದಲ್ಲಿ ಲಾಭ ಗಳಿಸುವ ಅವಕಾಶವಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರಿಗೆ ಉತ್ತಮ ಸುದ್ದಿ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ ದೊರೆಯಲಿದೆ. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದಿರಿ. ಹೊಸ ಪರಿಚಯಗಳು ಭವಿಷ್ಯದಲ್ಲಿ ಅನುಕೂಲವಾಗಬಹುದು. ಕುಟುಂಬದ ಸಮಸ್ಯೆಗಳು ಮಾತುಕತೆಯಿಂದ ಬಗೆಹರಿಯಲಿವೆ. ಆರೋಗ್ಯದಲ್ಲಿ ಎಚ್ಚರಿಕೆ.
ಧನು ರಾಶಿ: ಅದೃಷ್ಟ ನಿಮ್ಮ ಕೈಹಿಡಿಯುವ ದಿನ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ದೂರ ಪ್ರಯಾಣದ ಯೋಗವಿದೆ. ಆರ್ಥಿಕವಾಗಿ ಉತ್ತಮ ಬೆಳವಣಿಗೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಉತ್ತಮ ಫಲಿತಾಂಶ ದೊರೆಯಬಹುದು. ಒಂದು ಸರ್ಪ್ರೈಸ್ ಪಾರ್ಟಿ ಇರಲಿದೆ.
ಮಕರ ರಾಶಿ: ಇಂದು ಕೆಲಸದ ಒತ್ತಡ ಹೆಚ್ಚಾಗಬಹುದು. ಆದರೂ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಹೊಸ ಯೋಜನೆ ರೂಪಿಸುವಿರಿ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಕುಂಭ ರಾಶಿ: ಹೊಸ ಆಲೋಚನೆಗಳು ಕಾರ್ಯರೂಪಕ್ಕೆ ಬರಲಿವೆ. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ದೊರೆಯಬಹುದು. ಸ್ನೇಹಿತರಿಂದ ಸಹಾಯ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಅನಗತ್ಯ ವಾದ ವಿವಾದಗಳಿಂದ ದೂರವಿರಿ.
ಮೀನ ರಾಶಿ: ಇಂದು ಶುಭ ಫಲಗಳು ದೊರೆಯುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ವ್ಯಾಪಾರದಲ್ಲಿ ಲಾಭವಾಗಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸಿ. ಸಂಜೆ ಹೊತ್ತಿಗೆ ಮನಸ್ಸು ತುಂಬಾ ಶಾಂತವಾಗುತ್ತೆ.