ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ ನವೆಂಬರ್ 20, 2026: ಶುಕ್ರ ದೆಸೆಯಿಂದ ಪರಿಶ್ರಮಕ್ಕ ತಕ್ಕ ಫಲ

Horoscope Today November 20, 2026: ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಶುಕ್ರವಾರ ನಿಮ್ಮ ಭವಿಷ್ಯ ಹೇಗಿದೆ? ಯಾರಿಗೆ ಶುಭ ಫಲ? ಯಾರು ಜಾಗರೂಕರಾಗಿರಬೇಕು ಎನ್ನುವ ವಿವರ ಇಲ್ಲಿದೆ.

ಚಾಟ್‌ಜಿಪಿಟಿ ರಚಿತ ಚಿತ್ರ

ಬೆಂಗಳೂರು: ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ:

ಮೇಷ ರಾಶಿ: ಉದ್ಯೋಗದಲ್ಲಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಒದಗಿಬರಲಿವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆತುರದ ನಿರ್ಧಾರ ತಪ್ಪಿಸಿ. ನಿಮ್ಮ ರಾಶಿಗೆ ಚಂದ್ರ ಬಂದಿದ್ದಾನೆ. ನೀವು ತುಂಬಾ ಎನರ್ಜಿಟಿಕ್ ಆಗಿರ್ತೀರಿ.

ವೃಷಭ ರಾಶಿ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯದ ಕಡೆ ಗಮನ ಕೊಡಿ. ನಿಮ್ಮ ರಾಶಿಯ ಅಧಿಪತಿ ಶುಕ್ರ.

ಮಿಥುನ ರಾಶಿ: ಇಂದು ಶುಭ ಫಲ ದೊರೆಯುವ ದಿನ. ವ್ಯಾಪಾರದಲ್ಲಿ ಲಾಭದ ಸಾಧ್ಯತೆ. ಸ್ನೇಹಿತರ ಭೇಟಿಯಿಂದ ಸಂತೋಷವಾಗಲಿದೆ. ಹೊಸ ಯೋಜನೆ ಆರಂಭಿಸಲು ಉತ್ತಮ ದಿನ.

ಕರ್ಕಾಟಕ ರಾಶಿ: ಕೆಲಸದಲ್ಲಿ ಕೆಲವು ಸವಾಲುಗಳು ಎದುರಾಗಬಹುದು. ತಾಳ್ಮೆಯಿಂದ ವರ್ತಿಸುವುದು ಉತ್ತಮ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದ ಹಿರಿಯರ ಸಲಹೆ ಪಡೆಯಿರಿ. ಮನೆಗೆ ಒಳ್ಳೆಯ ಸುದ್ದಿ ಬರುತ್ತೆ.

ಸಿಂಹ ರಾಶಿ: ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಪ್ರಗತಿಯ ಸೂಚನೆಗಳಿವೆ. ಆರ್ಥಿಕವಾಗಿ ಉತ್ತಮ ದಿನ. ಸಮಾಜದಲ್ಲಿ ಗೌರವ ಮತ್ತು ಮನ್ನಣೆ ದೊರೆಯಲಿದೆ. ಕೆಲಸದಲ್ಲಿ ಯಶಸ್ಸು ಸಿಗುತ್ತೆ.

ಶುಕ್ರವಾರ ಲಕ್ಷ್ಮಿ ಪೂಜೆ ವೇಳೆ ಕುಂಕುಮದಿಂದ ಈ 5 ಕೆಲಸ ಮಾಡಿ; ಮನೆಯಲ್ಲಿ ಸಂಪತ್ತು, ಸಮೃದ್ಧಿ ಹೆಚ್ಚುತ್ತದೆ

ಕನ್ಯಾ ರಾಶಿ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಹಣದ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಜಾಸ್ತಿ ಖರ್ಚು ಮಾಡಬೇಡಿ.

ತುಲಾ ರಾಶಿ: ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಸಂತೋಷ ನೆಲೆಸಲಿದೆ. ನಿಮ್ಮ ರಾಶಿಗೂ ಶುಕ್ರನೇ ಅಧಿಪತಿ.

ವೃಶ್ಚಿಕ ರಾಶಿ: ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಬಹುದು. ಆದಾಯದ ಮೂಲಗಳು ಹೆಚ್ಚಾಗುವ ಸಾಧ್ಯತೆ ಇದೆ. ಅನಗತ್ಯ ವಾದಗಳಿಂದ ದೂರವಿರಿ. ಪ್ರಯಾಣದಲ್ಲಿ ಜಾಗ್ರತೆ ಇರಲಿ. ಇಂದು ನೀವು ತುಂಬಾ ಸೀರಿಯಸ್ ಆಗಿರ್ತೀರಿ. ಯಾರಿಗೂ ಜಾಸ್ತಿ ಮಾತಾಡಬೇಡಿ. ನಿಮ್ಮ ಕೆಲಸ ನೀವು ಮಾಡಿ.

ಧನು ರಾಶಿ: ಅಂದುಕೊಂಡ ಕೆಲಸಗಳು ಪೂರ್ಣಗೊಳ್ಳಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ.

ಮಕರ ರಾಶಿ: ವೃತ್ತಿ ಜೀವನದಲ್ಲಿ ಪ್ರಗತಿ ಕಂಡುಬರಲಿದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು. ಕುಟುಂಬದೊಂದಿಗೆ ಸಮಯ ಕಳೆಯುವ ಅವಕಾಶ ದೊರೆಯಲಿದೆ. ಖರ್ಚಿನ ಮೇಲೆ ನಿಯಂತ್ರಣ ಇರಲಿ. ಕೆಲಸದಲ್ಲಿ ಸ್ವಲ್ಪ ಒತ್ತಡ. ಸಂಜೆ ಹೊತ್ತಿಗೆ ಎಲ್ಲಾ ಸರಿ ಹೋಗುತ್ತೆ.

ಕುಂಭ ರಾಶಿ: ಹೊಸ ಕೆಲಸಗಳನ್ನು ಆರಂಭಿಸಲು ಉತ್ತಮ ದಿನ. ಸ್ನೇಹಿತರಿಂದ ಸಹಾಯ ದೊರೆಯಲಿದೆ. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ.

ಮೀನ ರಾಶಿ: ಆರ್ಥಿಕವಾಗಿ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು. ಉದ್ಯೋಗದಲ್ಲಿ ಯಶಸ್ಸು ದೊರೆಯಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳ ಚರ್ಚೆ ನಡೆಯಬಹುದು. ಮನಸ್ಸಿಗೆ ನೆಮ್ಮದಿ.

Ramesh Ballamoole

View all posts by this author