ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಜುಲೈ 3, 2026: ಈ ರಾಶಿಗೆ ಇಂದು ಪ್ರತಿಷ್ಠೆ ಹೆಚ್ಚಾಗುವ ದಿನ!

Horoscope Today July 3rd: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ತೃತೀಯ ತಿಥಿ, ಶ್ರವಣ ನಕ್ಷತ್ರದ, ಜುಲೈ 3ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಈ ರಾಶಿಯವರಿಗೆ ಇಂದು ಆದಾಯದಲ್ಲಿ ಹೆಚ್ಚಳ!

ಇಂಟರ್ ನೆಟ್ ಚಿತ್ರ -

Profile
Pushpa Kumari Jul 3, 2026 6:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಶ್ರವಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದದಲ್ಲಿ ಯಶಸ್ಸು ಸಿಗಲಿದ್ದು ಎಲ್ಲದರಲ್ಲೂ ಜಯ ಕಾಣುತ್ತೀರಿ. ಉತ್ತಮ ಅನುಗ್ರಹವನ್ನು ನೀವು ಎಲ್ಲರಿಂದಲೂ ಪಡೆಯಬಹುದು‌.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ವಿಶೇಷವಾದ ಅನುಗ್ರಹ ನೀವು ಪಡೆಯಬಹುದು. ಇಂದು ಗೌರವ, ಪ್ರತಿಷ್ಠೆ ಹೆಚ್ಚಾಗುವ ದಿನ ನಿಮ್ಮದು ಆಗುತ್ತದೆ.

ಮಿಥುನ ರಾಶಿ: ಇಂದು ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ಬಹಳಷ್ಟು ಬೇಸರವಾಗುವ ದಿನ ನಿಮ್ಮದಾಗಬಹುದು. ಆದರೆ ಧ್ಯಾನದಿಗಳನ್ನು ಮಾಡಿ ಸಮಯ ಕಳೆಯಬೇಕಾಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಬಿಸೆನೆಸ್ ವ್ಯವಹಾರದಲ್ಲಿ ಲಾಭ ಸಿಗಬಹುದು. ಪ್ರೀತಿ ಪಾತ್ರರಿಂದ ದೊಡ್ಡದಾದ ಬೆಳವಣಿಗೆ ಹಾಗೂ ನೆಮ್ಮದಿಯನ್ನು ಕಾಣುತ್ತೀರಿ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ತೊಂದರೆ ಎದುರಾಗಬಹುದು. ಮುಖ್ಯವಾದ ಜನಗಳಿಂದ ನಿಮಗೆ ಬೇಸರ ಉಂಟಾಗಿ ಅವರನ್ನು ಎದುರುಹಾಕಿ ಕೊಳ್ಳಬೇಕಾಗಿ ಬರಬಹುದು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮಕ್ಕಳಿಗೆ ಉತ್ತಮವಾದ ದಿನವಾಗಿದೆ. ಆದರೆ ಬಿಸೆನೆಸ್ ವ್ಯವಹಾರದಲ್ಲಿ ಇಂದು ಹೂಡಿಕೆ ಮಾಡಲು ಹೋಗಬೇಡಿ‌

Vastu Tips: ಅಡುಗೆಮನೆಯ ಈ 5 ವಾಸ್ತು ನಿಯಮ ಪಾಲಿಸಿದರೆ ಮನೆಯಲ್ಲಿ ಹೆಚ್ಚಲಿದೆ ಸುಖ-ಸಮೃದ್ಧಿ

ತುಲಾ ರಾಶಿ: ತುಲಾ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಕೋರ್ಟ್ ,ಕಛೇರಿ ಹಾಗೂ ಆಸ್ತಿ ಪಾಸ್ತಿ ವಿಚಾರವಾಗಿ ಹೆಚ್ಚಿನ ಗಮನವನ್ನು ನೀಡಬೇಕಾಗಿ ಬರಬಹುದು.

ವೃಶ್ಚಿಕ ರಾಶಿ: ಈ ರಾಶಿಗೆ ಅತ್ಯುತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಹಾಗೂ ಪಾಲಿಟೆಕ್ನಿಕ್ ವ್ಯವಹಾರ ಮಾಡೋರಿಗೆ ಉತ್ತಮವಾದ ದಿನವಾಗಿದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಆದರೆ ಇಂದು ಅತೀಯಾದ ಭಾವುಕತೆ ಎದುರಿಸಬೇಕಾಗಿ ಬರಬಹುದು‌

ಮಕರ ರಾಶಿ: ಮಕರ ರಾಶಿಯವರಿಗೆ ಭಾಗ್ಯೋದಯವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನಗಳ ನೋವೆಲ್ಲ ಮಯವಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಕೆಲವೊಂದು ವಿಚಾರದಲ್ಲಿ ತೊಂದರೆ ಉಂಟಾಗಬಹುದು. ಮಿತ್ರತ್ವದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಅತೀ ಹೆಚ್ಚಿನ ಗೌರವ ಪ್ರಾಪ್ತಿಯಾಗಲಿದ್ದು ಧನ ಆಗಮನದ ಸೂಚನೆಗಳು ಇವೆ..