ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಆಗಸ್ಟ್‌ 18, 2026: ಇಂದು ಅಂದುಕೊಂಡ ಕೆಲಸದಲ್ಲಿ ಯಶಸ್ಸು, ಶತ್ರು ನಾಶ

Horoscope Today August 18th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಷಷ್ಠಿ ತಿಥಿ, ಚಿತ್ತ ನಕ್ಷತ್ರದ,ಆಗಸ್ಟ್ 18ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂದು ಯಾವುದೇ ಮುಖ್ಯ ನಿರ್ಧಾರ ತೆಗೆದುಕೊಳ್ಳಬೇಡಿ

ಇಂಟರ್‌ನೆಟ್ ಚಿತ್ರ -

Profile
Pushpa Kumari Aug 18, 2026 8:14 AM

ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಚಿತ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಯವರ ಭವಿಷ್ಯದ ಹೇಗಿರಲಿದೆ ಎನ್ನುವ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಇಂದು ಚಿತ್ತ ನಕ್ಷತ್ರ ಇದ್ದು, ಮಂಗಳ ಗೌರಿ ವೃತ. ಈ ರಾಶಿಗೆ ಇಂದು ಮನಸ್ಸಿಗೆ ನೆಮ್ಮದಿ ಇರುತ್ತದೆ. ಬಂಧು- ಮಿತ್ರರ ಉತ್ತಮ ಸಹಕಾರ ಪ್ರಾಪ್ತಿಯಾಗುತ್ತದೆ. ನೀವು ಅಂದುಕೊಂಡ ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಗಳಿಸಬಹುದು.

ವೃಷಭ ರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೂ ಸಂಸಾರದಲ್ಲಿ ಹಾಗೂ ಕಾರ್ಯಕ್ಷೇತ್ರದಲ್ಲಿ ತೊಂದರೆ ಎದುರಾಗುತ್ತದೆ. ಮಧ್ಯಾಹ್ನ ಬಳಿಕ ಶತ್ರು ನಾಶ .

ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಇಂದು ಮಧ್ಯಾಹ್ನವರೆಗೂ ನಾನಾ ರೀತಿಯ ಯೋಚನೆಗಳು ಇರುತ್ತವೆ. ಮಧ್ಯಾಹ್ನವರೆಗೂ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮಧ್ಯಾಹ್ನ ನಂತರ ಯಶಸ್ಸು ನೀವು ಕಾಣುತ್ತೀರಿ.

ಕಟಕ ರಾಶಿ: ಕಟಕ ರಾಶಿಯವರಿಗೆ ಮಧ್ಯಾಹ್ನವರೆಗೂ ಎಲ್ಲವೂ ಅವರ ಪರವಾಗಿ ಇರುತ್ತದೆ. ಮಧ್ಯಾಹ್ನ ಬಳಿಕ ಸಂಸಾರದ ತಾಪತ್ರಯಗಳು ಜಾಸ್ತಿಯಾಗುತ್ತವೆ. ಸ್ನೇಹಿತರ ಜತೆಗೆ ಒಡಕು ಕಾಣುವ ಸಾಧ್ಯತೆ ಕೂಡ ಇದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಮಧ್ಯಾಹ್ನವರೆಗೂ ಹಣಕಾಸಿನ ವಿಚಾರ ಹಾಗೂ ಸಂಸಾರದ ಬಗ್ಗೆ ಯೋಚನೆಗಳು ಹೆಚ್ಚಾಗುತ್ತವೆ. ಮಧ್ಯಾಹ್ನ ಬಳಿಕ ಸ್ನೇಹಿತರಿಂದ ಸಮಗಮ ಪ್ರಾಪ್ತಿಯಾಗುತ್ತದೆ. ಅದೇ ರೀತಿ ಆತ್ಮವಿಶ್ವಾಸ ಕೂಡ ಇಂದು ಹೆಚ್ಚಾಗುತ್ತದೆ.

ಕನ್ಯಾ ರಾಶಿ: ಮಧ್ಯಾಹ್ನವರೆಗೂ ಕನ್ಯಾ ರಾಶಿಯವರಿಗೆ ಉತ್ತಮ ಫಲ ದೊರೆಯಲಿದೆ. ಮಧ್ಯಾಹ್ನ ಬಳಿಕ ಕುಟುಂಬದ ಬಗ್ಗೆ ಆತಂಕ ಎದುರಾಗಬಹುದು. ಮುಖ್ಯವಾದ ವಿಚಾರದಲ್ಲಿ ಯಾರ ಸಹಕಾರ ಕೂಡ ನಿಮಗೆ ಪ್ರಾಪ್ತಿಯಾಗುವುದಿ‌ಲ್ಲ.

ದಕ್ಷಿಣ ದಿಕ್ಕಿನಲ್ಲಿ ಈ ಸಸ್ಯಗಳನ್ನು ನೆಟ್ಟರೆ ಆರ್ಥಿಕ ಸಂಕಷ್ಟ ಹೆಚ್ಚಾಗಬಹುದು!

ತುಲಾ ರಾಶಿ: ತುಲಾ ರಾಶಿಯವರಿಗೆ ಮಧ್ಯಾಹ್ನವರೆಗೂ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮಧ್ಯಾಹ್ನ ಬಳಿಕ ನೋವೆಲ್ಲ ಪರಿಹಾರವಾಗಿ ಮಾರ್ಗದರ್ಶನ ಪ್ರಾಪ್ತಿಯಾಗುತ್ತದೆ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೂ ಇಷ್ಟಾರ್ಥ ಸಿದ್ದಿಯಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಕೆಲಸ ಕಾರ್ಯದಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಮಧ್ಯಾಹ್ನ ಬಳಿಕ ಹೆಚ್ಚಿನ ಕ್ಷೇಶ ಉಂಟಾಗುವ ಸಾಧ್ಯತೆ ಇದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದ ಜವಾಬ್ದಾರಿ ಹೆಚ್ಚಾಗುತ್ತದೆ. ಮಧ್ಯಾಹ್ನ ಬಳಿಕ ಮಿತ್ರರ ಸಮಾಗಮವಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಮಧ್ಯಾಹ್ನವರೆಗೂ ಅದೃಷ್ಟ ಪರೀಕ್ಷೆ ನಡೆಯುತ್ತಿರುತ್ತದೆ. ಮಧ್ಯಾಹ್ನ ಬಳಿಕ ಇಷ್ಟಾರ್ಥ ಸಿದ್ಧಿ ಹಾಗೂ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ.

ಕುಂಭ ರಾಶಿ: ಈ ರಾಶಿಯವರಿಗೆ ಇಂದು ಮಧ್ಯಾಹ್ನವರೆಗೂ ಕಷ್ಟದ ದಿನವಾಗಲಿದೆ. ಮಧ್ಯಾಹ್ನ ನಂತರ ಮನಸ್ಸಿಗೆ ನೆಮ್ಮದಿ ಹಾಗೂ ಅಂದುಕೊಂಡ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರು ನಾಶವಾಗಲಿದೆ. ಮಧ್ಯಾಹ್ನ ಬಳಿಕ ಅಷ್ಟು ಅನುಕೂಲವಾದ ದಿನ ಆಗಿರುವುದಿಲ್ಲ.