ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ, ಹಸ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಗೆ ಇಂದು ಶತ್ರುಹಾಶ- ಹಾಗೂ ಧ್ವಂಸವಾಗಲಿದ್ದು ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ದೊಡ್ಡದಾದ ಯಶಸ್ಸು ಕಾಣುವ ದಿನವಾಗಿದೆ.
ವೃಷಭ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ವೈಯಕ್ತಿಕವಾಗಿ ಒತ್ತಡ ಕಾಣಬಹುದು. ನಿಮ್ಮ ಬುದ್ದಿವಂತಿಕೆಯ ಕೆಲಸದ ಮೂಲಕ ಮಾತ್ರ ಯಶಸ್ಸು ನಿಮ್ಮದಾಗಬಹುದು.
ಮಿಥುನ ರಾಶಿ: ಇಂದು ನೆಮ್ಮದಿ ತರುವ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗುತ್ತದೆ. ಕೋರ್ಟ್, ಕಛೇರಿ ವ್ಯವಹಾರದಲ್ಲಿ ಇರೋರಿಗೆ ಜಯ ಪ್ರಾಪ್ತಿಯಾಗುತ್ತದೆ.
ಕಟಕರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಕುಟುಂಬದಲ್ಲಿ ಒಡಕು ಕಾಣಬಹುದು. ನಿಮ್ಮ ಮಾತಿನ ಚಾಕಚಕ್ಯತೆಯಿಂದ ಎಲ್ಲರ ಮನವೊಲಿಸಲು ಪ್ರಯತ್ನಿಸಬಹುದು
ಸಿಂಹ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಎಲ್ಲವೂ ಮಾಯವಾಗುತ್ತದೆ. ಕುಟುಂಬದಲ್ಲಿ ಅಕ್ಕರೆ,ಪ್ರೀತಿ ಹೆಚ್ಚಾಗುತ್ತದೆ.
ಕನ್ಯಾ ರಾಶಿ: ಇಂದು ಉತ್ತಮವಾದ ದಿನವಾಗಿದ್ದು ಹಿಂದಿನ ಎರಡು ಮೂರು ದಿನಗಳ ತೊಂದರೆ ನಿವಾರಣೆಯಾಗುತ್ತದೆ. ಎಲ್ಲರ ಮಾರ್ಗದರ್ಶನ ಪ್ರಾಪ್ತಿಯಾಗುತ್ತದೆ.
Vastu Tips: ವೈವಾಹಿಕ ಜೀವನದಲ್ಲಿ ನೆಮ್ಮದಿ ಬೇಕಾ? ಬೆಡ್‌ರೂಂನಲ್ಲಿ ಹೀಗಿರಲಿ ವಾಸ್ತು
ತುಲಾ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ತೊಂದರೆ, ಹಾಗೂ ಸ್ನೇಹದಲ್ಲಿ ಒಡಕು. ಆದರೆ ವೈಯಕ್ತಿಕವಾಗಿ ಜಾಗರೂಕತೆಯಿಂದ ಇರಬೇಕಾಗುತ್ತದೆ.
ವೃಶ್ಚಿಕ ರಾಶಿ: ಇಂದು ಉತ್ತಮವಾದ ದಿನವಾಗಿದೆ ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು. ಗೌರವ ಹೆಚ್ಚಾಗಬಹುದು. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಧನು ರಾಶಿ: ಇಂದು ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದ ಲ್ಲಿ ಹೆಚ್ಚಿನ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಒಂದು ತಿಂಗಳಿನ ಹಿಂದೆ ಪಟ್ಟ ಕಷ್ಟಕ್ಕೆ ಪ್ರತಿಫಲ ಸಿಗುತ್ತದೆ.
ಮಕರ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಉಂಟಾಗಬಹುದು. ಆರ್ಥಿಕವಾಗಿ ಹೆಚ್ಚಿನ ಯಶಸ್ಸು
ಕುಂಭ ರಾಶಿ: ಇಂದು ಕಷ್ಟಕರವಾದ ದಿನವಾಗಿದೆ. ಮುಖ್ಯ ನಿರ್ಧಾರದಲ್ಲಿ ತೊಂದರೆ ಉಂಟಾಗಬಹುದು. ಹಾಗಾಗಿ ಯಾವುದೇ ಕೆಲಸಕ್ಕೆ ಕೈ ಹಾಕುವುದು ಒಳಿತಲ್ಲ.
ಮೀನ ರಾಶಿ: ಇಂದು ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು, ಎಲ್ಲರ ಸಹಕಾರ, ಯಶಸ್ಸು ನಿಮ್ಮದಾಗುತ್ತದೆ.