ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ರೋಹಿಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆಗೆ ಇಂದು ಉತ್ತಮ ದಿನವಾಗಲಿದೆ. ಖುಷಿಯಿಂದ ಇಂದು ಸಮಯ ಕಳೆಯುತ್ತೀರಿ. ಮನೆಯಲ್ಲಿ ಶುಭ- ಸಮಾರಂಭಗಳು ನಡೆಯುವ ಸಾಧ್ಯತೆ ಇದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಎಲ್ಲವೂ ಪರಿಹಾರವಾಗುತ್ತದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಹಾಗೂ ನೆಮ್ಮದಿ ಸಿಗಲಿದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮಾತಿನಲ್ಲಿ ಇಂದು ತೊಂದರೆ ಎದುರಾಗುವ ಸಾಧ್ಯತೆ ಇದೆ. ಮಿತ್ರತ್ವದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರಲಿದ್ದು, ಅಂದುಕೊಂಡ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ಮಿತ್ರರಿಂದ ಧನಾಗಮನ ಕೂಡ ಆಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಆದರೂ ಇಂದು ನಿಮ್ಮಲ್ಲಿ ಭಾವುಕತೆ ಹೆಚ್ಚಾಗಿತ್ತದೆ. ಹಾಗಾಗಿ ಸಮಾಧಾನದಿಂದ ನಿರ್ಧಾರವನ್ನು ತೆಗೆದು ಕೊಳ್ಳಬೇಕಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಬಹುದು. ಆದರೆ ಭಗವಂತನ ಆಶೀರ್ವಾದ ಇಲ್ಲದೆ ಏನೂ ಮಾಡಲು ಸಾಧ್ಯವಿಲ್ಲ. ಹಾಗಾಗಿ ವಿನಯತೆ, ಪ್ರಾರ್ಥನೆ ಅಗತ್ಯ.
ಮನೆಯ ಮುಖ್ಯ ಬಾಗಿಲು ಹೀಗಿದ್ದರೆ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ!
ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಕಷ್ಟಕದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ ಹಾಗೂ ದಾಂಪತ್ಯ ವಿಚಾರದಲ್ಲಿ ನೀವು ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಇಂದು ಹೆಚ್ಚಿನ ಯಶಸ್ಸು ಸಿಗುತ್ತದೆ. ಆರ್ಥಿಕವಾಗಿಯೂ ಲಾಭ ಗಳಿಸುತ್ತೀರಿ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಶತ್ರುಗಳನ್ನು ಹಿಮ್ಮೆಟ್ಟಬಹುದು. ಆದರೆ ಕೆಲವೊಂದು ನಿರ್ಧಾರದ ಬಗ್ಗೆ ಎಚ್ಚರವಾಗಿರಿ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಬುದ್ಧಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಜಯ ಕಾಣುತ್ತೀರಿ. ಸ್ನೇಹಿತರ ಜತೆ ವಿನಯತೆಯಿಂದ ವರ್ತಿಸಿ.
ಕುಂಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಆಸ್ತಿ ಪಾಸ್ತಿ ವಿಚಾರವಾಗಿ ತಲೆ ನೋವು ಇರುತ್ತದೆ. ನಿಮ್ಮ ರಾಶಿಗೆ ಚಂದ್ರ ಬಂದಿರುವುದರಿಂದ ನಾಲ್ಕೈದು ದಿನಗಳಿಂದ ಇದ್ದ ತೊಂದರೆ ನಿವಾರಣೆಯಾಗಬಹುದು.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಹೆಚ್ಚಿನ ಲಾಭ. ಅದರಲ್ಲೂ ಸೋಷಿಯಲ್ ಮೀಡಿಯಾ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ.