ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಜುಲೈ 9, 2026: ಈ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ!

Horoscope Today July 9th ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ದಶಮಿ ತಿಥಿ, ಅಶ್ವಿನಿ ನಕ್ಷತ್ರದ, ಜುಲೈ 9ನೇ ತಾರೀಖಿನ ಗುರುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಈ ರಾಶಿಯವರಿಗೆ ಇಂದು ಒಲಿಯಲಿದೆ ಅದೃಷ್ಟ!

ಇಂಟರ್ ನೆಟ್ ಚಿತ್ರ -

Profile
Pushpa Kumari Jul 9, 2026 6:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಅಶ್ವಿನಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನಗಳವರೆಗೆ ಇದ್ದ ತೊಂದರೆ ಎಲ್ಲವೂ ಮಾಯವಾಗುತ್ತದೆ. ಮನಸ್ಸಿನಲ್ಲಿದ್ದ ನೋವೆಲ್ಲ ಮಾಯವಾಗಿ ಮಾರ್ಗದರ್ಶನ ಪ್ರಾಪ್ತಿಯಾಗುತ್ತದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಿತ್ರರು,ಬಂಧು ಬಾಂಧವರು ದೂರವಾದಂತೆ ನಿಮಗೆ ಅನುಭವವಾಗುತ್ತದೆ. ಯಾವುದೇ ಮುಖ್ಯ ನಿರ್ಧಾರ ಇಂದು ಕೈಗೊಳ್ಳುವುದು ಬೇಡ.

ಮಿಥುನ ರಾಶಿ: ಇಂದು ಈ ರಾಶಿಗೆ ಅತೀ ಉತ್ತಮವಾದ ದಿನವಾಗಿದೆ. ಮಿತ್ರರಿಂದ ಧನ ಆಗಮನವಾಗಲಿದ್ದು ಇಷ್ಟಾರ್ಥ ಸಿದ್ಧಿಯಾಗುತ್ತದೆ. ಗುಂಪು ಕೆಲಸದಿಂದ ಹೆಚ್ಚಿನ ಯಶಸ್ಸು ಸಿಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಬದಲಾವಣೆಯನ್ನು ನೀವು ಕಂಡುಕೊಳ್ಳಬಹುದು. ಅದೇ ರೀತಿ ಮನಸ್ಸಿಗೆ ಅತೀ ಹೆಚ್ಚಿನ ನೆಮ್ಮದಿ ಸಿಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದ್ದು ಭಾಗ್ಯೋದಯ ವಾಗುತ್ತದೆ. ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ವೈಮನಸ್ಸು ದೂರವಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ.ಹಾಗಾಗಿ ಧಾನ್ಯದಿಗಳನ್ನು ಮಾಡಿ ನೀವು ಸಮಯ ಕಳೆಯಬೇಕಾಗುತ್ತದೆ.

Vastu Tips: Vastu Tips: ಈ ವಾಸ್ತು ನಿಯಮಗಳನ್ನು ಪಾಲಿಸಿದ್ರೆ ಮನೆಯಲ್ಲಿ ಅತ್ತೆ-ಸೊಸೆ ಜಗಳವೇ ಇರೊಲ್ಲ!

ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಎಲ್ಲ ಕೆಲಸ ಕಾರ್ಯದಲ್ಲಿ ನಿಮಗೆ ಜಯ ಸಿಗುತ್ತದೆ. ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಯಶಸ್ಸು ಹಾಗೂ ದಾಂಪತ್ಯದಲ್ಲೂ ನೆಮ್ಮದಿ ಇರುತ್ತದೆ.

ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಇಂದು ಆತ್ಮವಿಶ್ವಾಸ ಹೆಚ್ಚಾಗಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಎಲ್ಲ ಕೆಲಸ ಕಾರ್ಯದಲ್ಲೂ ಜಯ ಸಿಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಹಾಗೂ ಬಿಸೆನೆಸ್ ವ್ಯವಹಾತದಲ್ಲಿ ಇರೋರಿಗೆ ತೊಂದರೆಯಾಗುತ್ತದೆ‌

ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಕೋರ್ಟ್, ವ್ಯವಹಾರದಲ್ಲಿ ತೊಂದರೆ. ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಕಂಡರೂ ಕೆಲಸ ಹೆಚ್ಚಾಗಬಹುದು.

ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನ ವಾಗಿದೆ..ಮಾಧ್ಯಮ, ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಉತ್ತಮವಾಗಿದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕುಟುಂಬದ ಜೊತೆ ಹೆಚ್ಚಿನ ಸಮಯ ನೀಡಿ ಅವರ ಖುಷಿಯಲ್ಲೂ ನೀವು ಪಾಲುದಾರರು ಆಗಬೇಕಾಗುತ್ತದೆ..