ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಎಪ್ರಿಲ್ 16, 2026: ಈ ರಾಶಿಯವರಿಗೆ ಇಂದು ನಿಮ್ಮ ಸಹೋದ್ಯೋಗಿಯಿಂದ ಗೌರವ ಸಿಗುವ ದಿನ!

Horoscope Today April 16: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ, ಚತುರ್ದಶಿ ತಿಥಿ, ಉತ್ರವಭಾದ್ರಾಪದ ನಕ್ಷತ್ರದ ಎಪ್ರಿಲ್ 16ನೇ ತಾರೀಖಿನ ಗುರುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು ಚೈತ್ರ ಮಾಸೆ, ಉತ್ತರಭಾದ್ರಪದ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ಮೇಷ ರಾಶಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಕೆಲವು ವಿಚಾರದಲ್ಲಿ ಸೋಲು ನಿಮಗೆ ಪ್ರಾಪ್ತಿಯಾಗಬಹುದು. ಆದ್ದರಿಂದ ಮೀಟಿಂಗ್, ಮುಖ್ಯವಾದ ಡ್ಯಾಕುಮೆಂಟ್ ಗಳ ಕೆಲಸ ಇಂದು ಮಾಡುವುದು ಒಳಿತಲ್ಲ.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಅನುಕೂಲಕರವಾದ ದಿನ ಇಂದಾಗಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು, ಗೌರವ ನಿಮಗೆ ಸಿಗುತ್ತದೆ. ಎಲ್ಲರ ನೆಚ್ಚಿನ ವ್ಯಕ್ತಿ ಕೂಡ ನೀವಾಗುತ್ತೀರಿ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮಧ್ಯಾಹ್ನ ನಂತರ ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಯಶಸ್ಸು ಮೂಡಬಹುದು. ಇಷ್ಟು ದಿನ ಮಾಡಿದ ಕೆಲಸ ಕಾರ್ಯಕ್ಕೆ ತಕ್ಕದಾದ ಪ್ರತಿಫಲ ನಿಮಗೆ ಸಿಗುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ನಾನಾ ರೀತಿಯ ಬೇಸರ ಉಂಟಾಗುವ ಸಾಧ್ಯತೆ ಇರುತ್ತದೆ‌. ಮಧ್ಯಾಹ್ನ ಬಳಿಕ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುವ ಸಾಧ್ಯತೆ ಇರುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮಧ್ಯಾಹ್ನವರೆಗೂ ಬಹಳನೇ ಉತ್ತಮವಾಗಿದೆ. ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಸಿಗಬಹುದು. ಆದರೆ ಮಧ್ಯಾಹ್ನ ಬಳಿಕ ಬೇರೆಯವರ ಸಹಕಾರ ನೀವು ಕಳೆದುಕೊಳ್ಳಬಹುದು.

ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ ದಿನ ಭವಿಷ್ಯ:



Vastu Tips: ಮನೆಯ ಸಂತೋಷ, ಸಂಪತ್ತು ವೃದ್ಧಿಯಾಗಬೇಕಾ? ಅರಿಶಿನವನ್ನು ಹೀಗೆ ಬಳಸಿ

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಶತ್ರುಗಳನ್ನು ನೀವು ಹಿಮ್ಮೆಟ್ಟಬಹುದು. ದಾಂಪತ್ಯದಲ್ಲಿ ನೆಮ್ಮದಿ ಇದ್ದು ಎಲ್ಲರಿಂದಲೂ ಅಕ್ಕರೆ ಪ್ರಾಪ್ತಿಯಾಗುತ್ತದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಮಧ್ಯಾಹ್ನ ವರೆಗೂ ಅನೇಕ ರೀತಿಯ ಟೀಕೆಗಳು ಕೇಳಿಬರಬಹುದು. ಮಧ್ಯಾಹ್ನ ಬಳಿಕ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿ ಇರಲಿದ್ದು ಬಂದ ಸಮಸ್ಯೆಗೆ ಪರಿಹಾರ ಸಿಗಬಹುದು.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಸಮಸ್ಯೆಗಳು ಸೃಷ್ಟಿಯಾಗಬಹುದು. ಮಧ್ಯಾಹ್ನ ಬಳಿಕ ನಿಮ್ಮ ಮನಸ್ಸಿನ ಗೊಂದಲಗಳಿಗೆ ಪರಿಹಾರ ಸಿಕ್ಕಂತೆ ಆಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಮಧ್ಯಾಹ್ನವರೆಗೂ ನೀವು ಹೇಳಿದ್ದೆಲ್ಲವೂ ನಡೆಯುತ್ತದೆ. ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದ ಜವಾಬ್ದಾರಿಗಳು ಹಾಗೂ ಮನೆಯ ಜವಾಬ್ದಾರಿ ಜಾಸ್ತಿಯಾಗಬಹುದು.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಕಾಣಬಹುದು. ಎಲ್ಲರಿಂದಲೂ ಗೌರವ ಪ್ರಾಪ್ತಿಯಾಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನೆಯವರ ಜೊತೆ ಉತ್ತಮ ನಡವಳಿಕೆಯನ್ನು ಇಂದು ಹೊಂದಿಸಿಕೊಳ್ಳಬೇಕಾಗುತ್ತದೆ‌.

ಮೀನ ರಾಶಿ: ಮೀನ ರಾಶಿಗೆ ಮಧ್ಯಾಹ್ನ ವರೆಗೂ ಕಿರಿ ಕಿರಿ ಇರುತ್ತದೆ. ಆದರೆ ಚಂದ್ರ ನಿಮ್ಮ ರಾಶಿಯಲ್ಲಿ ಇರುವುದರಿಂದ ಎಲ್ಲ ಸಮಸ್ಯೆಗೂ ಪರಿಹಾರ ಸಿಗುವಂತೆ ಆಗುತ್ತದೆ