ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜೂನ್ 23, 2026: ಈ ರಾಶಿಗೆ ಇಂದು ಮಾಡುವ ಎಲ್ಲ ಕೆಲಸದಲ್ಲೂ ಜಯ ಪ್ರಾಪ್ತಿ!

Horoscope Today June 23rd: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಹಸ್ತ ನಕ್ಷತ್ರದ, ಜೂನ್ 23ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಹಸ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದ್ದು ಶತ್ರು ನಾಶ ಹಾಗೂ ಶತ್ರು ಧ್ವಂಸವಾಗಲಿದೆ. ಇಂದು ಅತೀ ಹೆಚ್ಚಿನ ನೆಮ್ಮದಿ ನಿಮಗೆ ಸಿಗುತ್ತದೆ. ಹಾಗೂ ಮುಖ್ಯವಾದ ವಿಚಾರದಲ್ಲಿ ಇಂದು ಪ್ರಗತಿ ಸಿಗುತ್ತದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಪ್ರೇಮ ಪ್ರೀತಿ ವಿಚಾರವಾಗಿ ಹಾಗೂ ಹಣಕಾಸಿನ ವಿಚಾರವಾಗಿ ಕಷ್ಟಕರವಾಗಿದೆ.ಹಾಗಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ.

ಮಿಥುನ ರಾಶಿ: ಇಂದು ಈ ರಾಶಿಗೆ ಇಂದು ಅತೀ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮನೆಯಲ್ಲಿ ಸುಖ ಶಾಂತಿಯನ್ನು ಕಾಣುತ್ತೀರಿ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಅತ್ಯುತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಬಂಧು ಮಿತ್ರರಿಂದ ನಿಮಗೆ ಖುಷಿ ಸಿಗುತ್ತದೆ. ಹಾಗೂ ಕಾರ್ಯಕ್ಷೇತ್ರದ ವಿಚಾರದಲ್ಲಿ ನಿಮಗೆ ಯಶಸ್ಸು ಸಿಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟಕರವಾದ ಗೋಚರ ಇರಲಿದೆ. ಕುಟುಂಬದ ವಿಚಾರವಾಗಿ ಹೆಚ್ಚಿನ ಗಮನ ನೀವು ನೀಡಬೇಕಾಗುತ್ತದೆ. ಅದೇ ರೀತಿ ಹಣಕಾಸಿನ ವಿಚಾರವಾಗಿ ಜಾಗೃತಿ ಅವಶ್ಯಕ.

Vastu Tips: ವಾಸ್ತು ಪ್ರಕಾರ ಈ ಗಿಡಗಳನ್ನು ಗಿಫ್ಟ್ ಮಾಡಬೇಡಿ! ಅದೃಷ್ಟಕ್ಕಿಂತ ದುಷ್ಪರಿಣಾಮವೇ ಹೆಚ್ಚು?

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಚಂದ್ರ ನಿಮ್ಮ ರಾಶಿಗೆ ಪ್ರವೇಶ ಮಾಡುವುದರಿಂದ ಹಿಂದಿನ ಎರಡು ಮೂರು ದಿನಗಳ ತೊಂದರೆ ಇಂದು ಮಯವಾಗುತ್ತದೆ.

ತುಲಾ ರಾಶಿ: ತುಲಾ ರಾಶಿ ಅವರಿಗೆ ಮನಸ್ಸಿಗೆ ನೆಮ್ಮದಿ ಅಷ್ಟಾಗಿ ಇರುವುದಿಲ್ಲ. ಯಾರು ಕೂಡ ನಿಮ್ಮ ಪರವಾಗಿ ಇರುವುದಿಲ್ಲ. ಕೆಲವೊಂದು ವಿಚಾರದಲ್ಲಿ ಮನಸ್ಸಿಗೆ ನೋವು ಉಂಟಾಗಬಹುದು.

ವೃಶ್ಚಿಕ ರಾಶಿ: ಈ ರಾಶಿಗೆ ಅತ್ಯುತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮಿತ್ರರಿಂದಲೂ ನಿಮಗೆ ಖುಷಿ ಸಿಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಇಂದು ಜವಾಬ್ದಾರಿ ಹೆಚ್ಚಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಭಾಗ್ಯೋದಯವಾದ ದಿನವಾಗದೆ. ಮುಂದಿನ ದಿನಕ್ಕೆ ಉತ್ತಮ ಮಾರ್ಗದರ್ಶನ ಪ್ರಾಪ್ತಿಯಾಗಬಹುದು.

ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮಿತ್ರರಿಂದ ಹಾಗೂ ಪ್ರೀತಿ ಪಾತ್ರರಿಂದ ಖುಷಿ ಸಿಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಎಲ್ಲರ ಸಹಕಾರ ಸಿಗಲಿದ್ದು ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಹೆಚ್ಚಿನ ಯಶಸ್ಸು ನಿಮಗೆ ಸಿಗುತ್ತದೆ.