ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಭರಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯ ಹೇಗಿರಲಿದೆ? ಇಲ್ಲಿದೆ ವಿವರ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಸ್ತ್ರೀಯರ ವಿಚಾರದಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ. ಕಾರ್ಯಕ್ಷೇತ್ರದಲ್ಲೂ ತೊಂದರೆ ಎದುರಾಗಬಹುದು. ನಿಮ್ಮ ಅಭಿಮಾನ ಹಾಗೂ ಗೌರವಕ್ಕೆ ದಕ್ಕೆ ತರದಂತೆ ನೋಡಿಕೊಳ್ಳಬೇಕು.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ವೈಯಕ್ತಿಕ ವಿಚಾರದಲ್ಲಿ ತೊಂದರೆಗಳು ಎದುರಾಗಬಹುದು. ಸಾಮಾಜಿಕ ಚಟುವಟಿಕೆಯಲ್ಲಿ ಸ್ತ್ರೀಯರಿಂದ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪ್ರೇಮ, ಪ್ರೀತಿ ವಿಚಾರದಲ್ಲಿ ಯಶಸ್ಸು ಹಾಗೂ ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಾಣುತ್ತೀರಿ.
ಕಟಕ ರಾಶಿ: ಕಟಕ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಆಸ್ತಿ ಪಾಸ್ತಿ ವಿಚಾರವಾಗಿ ಹಾಗೂ ಕೋರ್ಟ್, ಕಚೇರಿಯಲ್ಲಿ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕೆಲಸದಲ್ಲಿ ಹಾಗೂ ವೈಯಕ್ತಿಕ ವಿಚಾರದಲ್ಲಿ ಯಶಸ್ಸು ಸಿಗುತ್ತದೆ. ಸೋಷಿಯಲ್ ಮೀಡಿಯಾ ಹಾಗೂ ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಲಾಭದ ದಿನವಾಗಲಿದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಂಸಾರದಲ್ಲಿ ಅತೀ ಹೆಚ್ಚಿನ ಖುಷಿ ಸಿಗುತ್ತದೆ. ಧನಾಗಮನದ ಸೂಚನೆಗಳಿವೆ.
ಸಾಕುಪ್ರಾಣಿಗಳಿಗೂ ವಾಸ್ತು ಇದೆ! ಯಾವ ಪ್ರಾಣಿಗೆ ಯಾವ ದಿಕ್ಕು ಶುಭ ಗೊತ್ತಾ?
ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಶತ್ರು ನಾಶ ಖಂಡಿತ. ಅತೀ ಹೆಚ್ಚಿನ ಆತ್ಮವಿಶ್ವಾಸ ಕೂಡ ಇರುತ್ತದೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಧನಾಗಮನದ ಸೂಚನೆಗಳು ಕೂಡ ಇರುತ್ತವೆ. ಆದರೆ ಮಿತ್ರತ್ವದಲ್ಲಿ ಒಡಕು ಕಾಣುವ ಸಾಧ್ಯತೆಗಳು ಹೆಚ್ಚು.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮಾನಸಿಕವಾಗಿ ನೆಮ್ಮದಿ ಇದ್ದು ಗುಂಪು ಕೆಲಸದಲ್ಲಿ ಯಶಸ್ಸು ಕಾಣುತ್ತೀರಿ. ಆರ್ಥಿಕವಾಗಿಯೂ ಲಾಭ ನಿಮ್ಮದಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಗೌರವ ಪ್ರಾಪ್ತಿಯಾಗುತ್ತದೆ. ಪ್ರೀತಿ ಪಾತ್ರರಿಂದ ಸಹಕಾರವೂ ಸಿಗುತ್ತದೆ.
ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ನಿಮ್ಮ ಗೌರವ ಕೂಡ ಇಂದು ಹೆಚ್ಚಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳಲ್ಲಿದ್ದ ತೊಂದರೆ ಮಾಯವಾಗುತ್ತದೆ. ಯಾರು ನಿಮ್ಮನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೋ ಅವರಿಗೂ ನಿಮ್ಮ ಒಳ್ಳೆಯತನ ಅರಿವಾಗುತ್ತದೆ.