ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Daily Horoscope: ಕಾರ್ತಿಕ ಸೋಮವಾರದ ಈ ದಿನ ಈ ರಾಶಿಯವರಿಗೆ ಧನ ಲಾಭದ ಜೊತೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು!

ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರದೃತು ಕಾರ್ತಿಕ ಮಾಸೆ ಶುಕ್ಲ ಪಕ್ಷದ ತ್ರಯೋದಶಿ ತಿಥಿ, ಉತ್ತರ ಭದ್ರಾಪದಾ ನಕ್ಷತ್ರದ ನವೆಂಬರ್ 3ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೀಗಿದೆ.

ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರದೃತು ಕಾರ್ತಿಕ ಮಾಸೆ ಶುಕ್ಲ ಪಕ್ಷದ ಉತ್ತರ ಭದ್ರಾಪದಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಮೇಷ ರಾಶಿ ಅವರಿಗೆ ಮಧ್ಯಾಹ್ನವರೆಗೂ ಕೂಡ ನೆಮ್ಮದಿ ಇರಲಿದೆ. ಆದರೆ ಮಧ್ಯಾಹ್ನ ಬಳಿಕ ಮನಸ್ಸಿಗೆ ಕ್ಲೇಷ ಉಂಟಾಗುವ ಸಾಧ್ಯತೆ ಇದೆ. ನಿಮ್ಮ ಮಿತೃತ್ವದಲ್ಲಿ ಕೂಡ ಒಡಕು ಕಾಣಿಸ ಬಹುದು. ಮುಖ್ಯವಾದ ಯಾವುದೇ ವ್ಯವಹಾರದಲ್ಲಿ ನಿರ್ಧಾರ ಮಾಡಲು ಇಂದು ಹೋಗಬೇಡಿ.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಮಧ್ಯಾಹ್ನದವರೆಗೂ ಕಾರ್ಯ ಕ್ಷೇತ್ರದಲ್ಲಿ ತಾಪತ್ರಯಗಳು ಇರುತ್ತವೆ. ಮಧ್ಯಾಹ್ನ ಬಳಿಕ ಇಷ್ಟಾರ್ಥ ಸಿದ್ದಿ ಮನಸ್ಸಿಗೆ ನೆಮ್ಮದಿ. ಮಿತ್ರ ರಿಂದ ಅತೀ ಹೆಚ್ಚಿನ ಸಂತೋಷ ಸಿಗಲಿದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮಧ್ಯಾಹ್ನ ವರೆಗೂ ಸ್ವಲ್ಪ ಅದೃಷ ಕಮ್ಮಿ ಇರುತ್ತದೆ. ಮಧ್ಯಾಹ್ನ ಬಳಿಕ ಕಾರ್ಯ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಕೂಡ ಸಿಗಲಿದೆ

ಕಟಕ ರಾಶಿ: ಕಟಕ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಅನೇಕ ರೀತಿಯ ಯೋಚನೆಗಳು ಕಾಡಬಹುದು. ಮಧ್ಯಾಹ್ನ ಬಳಿಕ‌ ಭಾಗ್ಯೋದಯವಾದ ದಿನವಾಗಿದ್ದು ಹಿರಿಯರಿಂದ ಆಶೀರ್ವಾದ ವನ್ನು ನೀವು ಪಡೆದುಕೊಳ್ಳಬೇಕಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮಧ್ಯಾಹ್ನ ವರೆಗೂ ಎಲ್ಲವೂ ನಿಮ್ಮ ಪರವಾಗಿ ನಡಿತಾ ಇರುತ್ತವೆ. ಮಧ್ಯಾಹ್ನ ಬಳಿಕ ನಿಮ್ಮ ಹತ್ತಿರದವರೆ ಅಂದರೆ ನಿಮಗೆ ಬೇಕಾದವರೆ ಹಿಮ್ಮೆಟ್ಟಬಹುದು.‌

ಕನ್ಯಾ ರಾಶಿ: ಕನ್ಯಾ ರಾಶಿ ಅವರಿಗೆ ಮಧ್ಯಾಹ್ನದವರೆಗೂ ಸಾಮಾಜಿಕ ವ್ಯವಹಾರದಲ್ಲಿ ನೆಮ್ಮದಿ.‌. ಮಧ್ಯಾಹ್ನ ಬಳಿಕ ದಾಂಪತ್ಯ, ಪಾರ್ಟ್ನರ್ ಶೀಪ್ ವ್ಯವಹಾರದಲ್ಲಿ ನೆಮ್ಮದಿ ಹಾಗೂ ಯಶಸ್ಸು ಸಿಗಲಿದೆ.

ಇದನ್ನು ಓದಿ:Vastu Tips: ಮನೆ ಸ್ವಚ್ಛಗೊಳಿಸುವಾಗ ಪಾಲಿಸಬೇಕು ಕೆಲವು ನಿಯಮ

ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಮಧ್ಯಾಹ್ನದವರೆಗೂ ಮನಸ್ಸಿಗೆ ನೆಮ್ಮದಿ ಸಿಗುವ ದಿನವಾಗಿದೆ. ಮಧ್ಯಾಹ್ನ ಬಳಿಕವೂ ಎಲ್ಲ ಕೆಲಸ ಕಾರ್ಯದಲ್ಲಿ ಜಯ ಪ್ರಾಪ್ತಿ ಯಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಮಧ್ಯಾಹ್ನದವರೆಗೂ ಸಂಸಾರ ದಲ್ಲಿ ತಾಪತ್ರಯಗಳು ಕಾಡುತ್ತಿರುತ್ತವೆ. ಮಧ್ಯಾಹ್ನ ಬಳಿಕ ನಿಮ್ಮ ಬುದ್ದಿ ಶಕ್ತಿಯನ್ನು ಉಪಯೋಗಿಸಿಕೊಂಡು ಕಾರ್ಯ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ನೀಡಬೇಕಾಗುತ್ತದೆ

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಇಂದು ಮಧ್ಯಾಹ್ನ ವರೆಗೂ ಎಲ್ಲ ಸಹಕಾರ ಪ್ರಾಪ್ತಿ ಯಾಗುತ್ತದೆ. ಬಂಧು- ಮಿತ್ರರಿಂದ ಮತ್ತು ನೆರೆಹೊರೆಯವರಿಂದ ಅತೀ ಹೆಚ್ಚಿನ ನೆಮ್ಮದಿಯನ್ನು ಕಾಣುತ್ತೀರಿ. ಮಧ್ಯಾಹ್ನ ಬಳಿಕ ನಾನಾ ರೀತಿಯ ಯೋಚನೆಗಳು ಕಾಡಬಹುದು. ಸಂಸಾರದ ತಾಪತ್ರಯಗಳು ಹೆಚ್ಚಬಹುದು...

ಮಕರ ರಾಶಿ: ಮಕರ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಸಂಸಾರದ ಬಗ್ಗೆ ಕ್ಷೇಷ ಉಂಟುಮಾಡಬಹುದು..‌ಮಧ್ಯಾಹ್ನ ಬಳಿಕ ಅತೀ ಹೆಚ್ಚಿನ ಯಶಸ್ಸು.. ಸಾಮಾಜಿಕ ವ್ಯವಹಾರದಲ್ಲಿ ಮತ್ತು ಬಂಧು- ಮಿತ್ರರಿಂದ ಅತೀ ಹೆಚ್ಚಿನ ಸಹಕಾರ ಸಿಗಲಿದೆ.

ಕುಂಭರಾಶಿ: ಕುಂಭ ರಾಶಿ ಅವರಿಗೆ ಇಂದು ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಮುಂದಿನ ದಿನದ ಬಗ್ಗೆ ಉತ್ತಮ ಮಾರ್ಗದರ್ಶನ ನಿಮಗೆ ಸಿಗಲಿದೆ.‌

ಮೀನ ರಾಶಿ: ಮೀನ ರಾಶಿ ಅವರಿಗೆ ಮಧ್ಯಾಹ್ನ ವರೆಗೂ ಸ್ವಲ್ಪ ಕ್ಲೇಷ ಇರಲಿದ್ದು ಮನಸ್ಸಿಗೆ ನಾನಾ ರೀತಿಯ ಯೋಚನೆಗಳು ಬರ ಬಹುದು.‌ಮಧ್ಯಾಹ್ನ ಬಳಿಕ ಭಾಗ್ಯೋದಯವಾದ ದಿನವಾಗಿದ್ದು ಆರೋಗ್ಯದಲ್ಲಿಯೂ ಸುಧಾರಣೆ ಕಂಡು ಬರಲಿದೆ.