Daily Horoscope: ಶುಕ್ರನಿಂದ ಈ ರಾಶಿಯವರಿಗೆ ಇಂದು ಅಂದುಕೊಂಡದ್ದೆಲ್ಲ ಸಿಗಲಿದೆ
ದಿನ ಭವಿಷ್ಯ: ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರದೃತು ಕಾರ್ತಿಕ ಮಾಸೆ ಶುಕ್ಲ ಪಕ್ಷದ ಸಪ್ತಮಿ ತಿಥಿ, ಪೂರ್ವಾಷಡ ನಕ್ಷತ್ರದ ಅಕ್ಟೋಬರ್ 28ನೇ ತಾರೀಖಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.
Daily Horoscope -
ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ
Oct 28, 2025 7:00 AM
ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ದಕ್ಷಿಣಾಯನ ವರ್ಷ ಶರದೃತು ಕಾರ್ತಿಕ ಮಾಸೆ ಶುಕ್ಲ ಪಕ್ಷದ ಪೂರ್ವಾಷಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ (Daily Horoscope) ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿಕೊಟಗಟಿದ್ದಾರೆ.
ಮೇಷ ರಾಶಿ: ಇಂದು ಪೂರ್ವಾಷಡ ನಕ್ಷತ್ರ ಇದ್ದು ಇದರ ಅಧಿಪತಿ ಶುಕ್ರ. ಹೀಗಾಗಿ ಎಲ್ಲ ರಾಶಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಉತ್ತಮ ದಿನ. ಮನಸ್ಸಿಗೆ ನೆಮ್ಮದಿ ಇದ್ದು, ಅದೃಷ್ಟ ಕೈ ಹಿಡಿಯಲಿದೆ. ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ತೊಂದರೆಗಳು ಮಾಯವಾಗಲಿದೆ.
ವೃಷಭ ರಾಶಿ: ವೃಷಭ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಇಂದು ಯಾವುದೇ ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೋಗಬೇಡಿ. ಮುಖ್ಯವಾದ ಮೀಟಿಂಗ್‌ನಲ್ಲಿ ಪಾಲ್ಗೊಳ್ಳಲು ಹೋಗಬೇಡಿ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಉತ್ತಮ ದಿನವಾಗಲಿದೆ. ಎಲ್ ರಿಂದಲೂ ಸಹಕಾರ ಸಿಗಲಿದ್ದು ಪಾರ್ಟ್ನರ್ ಶಿಪ್, ವ್ಯವಹಾರದಲ್ಲಿ ಯಶಸ್ಸು, ದಾಂಪತ್ಯದಲ್ಲೂ ಕೂಡ ನೆಮ್ಮದಿ ಸಿಗಲಿದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಯಶಸ್ಸು ಸಿಗಲಿದೆ. ಶತ್ರುಗಳು ಹಿಮ್ಮೆಟ್ಟಲಿದ್ದು ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಸಾಮಾಜಿಕ ವ್ಯವಹಾರದಲ್ಲೂ ಗೆಲುವು ನಿಮ್ಮದಾಗಲಿದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನ. ಇಂದು ಯಾವುದೇ ಮುಖ್ಯ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಅದೇ ರೀತಿ ಹಣಕಾಸಿನ ವಿಚಾರದಲ್ಲಿ ನಿಮಗೆ ಲಾಸ್ ಆಗುವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಎಚ್ಚರಿಕೆ ವಹಿಸಿ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮನೆಯ ವಿಚಾರವಾಗಿ, ತಾಯಿಯ ಆರೋಗ್ಯ ವಿಚಾರವಾಗಿ ಹೆಚ್ಚಿನ ಜವಾಬ್ದಾರಿ ಸಿಗಲಿದೆ. ಇಂದು ವೈಯಕ್ತಿಕ ವಿಚಾರಕ್ಕಿಂತಲೂ ಸಂಸಾರದ ಬಗ್ಗೆಯೇ ಹೆಚ್ಚಿನ ಗಮನ ನೀಡಬೇಕಾಗುತ್ತದೆ.
ಇದನ್ನು ಓದಿ:Vastu Tips: ಸಸ್ಯಗಳನ್ನು ಸರಿಯಾದ ದಿಕ್ಕಿನಲ್ಲಿ ನೆಡಬೇಕು ಯಾಕೆ ಗೊತ್ತೇ?
ತುಲಾ ರಾಶಿ: ತುಲಾ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಸಾಮಾಜಿಕ ವ್ಯವಹಾರದಲ್ಲಿ ಯಶಸ್ಸು ಸಿಗಲಿದ್ದು ಆತ್ಮವಿಶ್ವಾಸ ಚೆನ್ನಾಗಿರಲಿದೆ. ಸಹೋದರ- ಸಹೋದರಿಯರಿಂದ ಸಂತೋಷ ಸಿಗಬಹುದು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಸಾಂಸಾರಿಕ ತಾಪತ್ರಯ ಇಂದು ಕಾಡಬಹುದು. ಸಂಸಾರದ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ಹಾಗಾಗಿ ಮನೆಯವರ ಬಗ್ಗೆಯೇ ಹೆಚ್ಚು ಯೋಚನೆ ಮಾಡಬೇಕಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ನೋವು ಮಾಯವಾಗಲಿದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಆದರೆ ಮುಂದಿನ ದಿನಗಳಿಗೆ ಏನು ಮಾಡ ಬೇಕು, ಯಾವ ನಿರ್ಧಾರ ಕೈಗೊಳ್ಳಬೇಕು ಎನ್ನುವ ಅರಿವು ನಿಮ್ಮಲ್ಲಿ ಮೂಡಲಿದೆ.
ಕುಂಭರಾಶಿ: ಕುಂಭ ರಾಶಿಯವರಿಗೆ ಈ ದಿನ ಉತ್ತಮವಾಗಿದೆ. ಸಾಮಾಜಿಕ ಚಟುವಟಿಕೆ ಹಾಗೂ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮಿತ್ರರಿಂದ ಧನ ಆಗಮನ ಕೂಡ ಆಗಲಿದೆ.
ಮೀನ ರಾಶಿ: ಮೀನ ರಾಶಿ ಅವರಿಗೆ ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು ಜವಾಬ್ದಾರಿ ಹೆಚ್ಚಾಗಿರುತ್ತದೆ. ಆದರೆ ಸ್ತ್ರೀಯರಿಂದ ಸ್ವಲ್ಪ ದೂರ ಇರಬೇಕಾಗುತ್ತದೆ. ಹಾಗಾಗಿ ಬಹಳಷ್ಟು ವಿನಯತೆಯಿಂದ ನೀವು ಮಾತನಾಡಬೇಕಾಗುತ್ತದೆ.