ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಕೃತಿಕಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಮಧ್ಯಾಹ್ನವರೆಗೂ ನಿಮ್ಮ ಕುಟುಂಬಕ್ಕೆ ಸಮಯ ನೀಡುತ್ತೀರಿ. ಮಧ್ಯಾಹ್ನ ಬಳಿಕವೂ ವೈಯಕ್ತಿಕ ವಿಚಾರದಲ್ಲಿ ಖುಷಿ ಸಿಗುತ್ತದೆ.
ವೃಷಭ ರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೂ ಕ್ಲಿಷ್ಟಕರವಾದ ದಿನವಾಗಿದೆ. ಮಧ್ಯಾಹ್ನ ಬಳಿಕ ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಗೆ ಮಧ್ಯಾಹ್ನವರೆಗೂ ಎಲ್ಲವೂ ನಿಮ್ಮ ಪರವಾಗಿ ನಡೆ ಯುತ್ತಿರುತ್ತದೆ. ಆದರೆ ಮಧ್ಯಾಹ್ನ ಬಳಿಕ ಮುಖ್ಯವಾದ ಸಂಬಂಧದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇರುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಹೆಚ್ಚಾಗುತ್ತವೆ.ಮಧ್ಯಾಹ್ನ ಬಳಿಕ ಇಷ್ಟಾರ್ಥ ಸಿದ್ದಿಯಾಗಲಿದ್ದು ಸ್ನೇಹಿತರ ಜೊತೆ ಉತ್ತಮ ಸಮಯ ಕಳೆಯಲಿದ್ದೀರಿ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮಧ್ಯಾಹ್ನ ವರೆಗೂ ಭಾಗ್ಯದಲ್ಲಿ ಏರುಪೇರು ಆಗಬಹುದು. ಆದರೆ ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ಒಮ್ಮೆಲೆ ಯಶಸ್ಸು ಕಾಣಬಹುದು.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮಧ್ಯಾಹ್ನವರೆಗೂ ಮನಸ್ಸಿಗೆ ನೋವು ಉಂಟಾಗುವ ಸಾಧ್ಯತೆ ಇದೆ. ಮಧ್ಯಾಹ್ನ ಬಳಿಕ ಭಾಗ್ಯೋದಯವಾಗಲಿದ್ದು ಎಲ್ಲರೂ ನಿಮ್ಮ ಪರ ಇರುತ್ತಾರೆ. ನಿಮ್ಮ ಅವಶ್ಯಕತೆ ಹೆಚ್ಚಿನವರಿಗೆ ಇಂದು ಇರುತ್ತದೆ
ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಮಧ್ಯಾಹ್ನವರೆಗೂ ನಿಮ್ಮ ಮಾತುಗಳೇ ಸರಿ, ನೀವು ಮಾಡಿದ್ದೇ ಸರಿ ಎನ್ನುವ ಭಾವನೆ ಬರಬಹುದು. ಆದರೆ ಮಧ್ಯಾಹ್ನ ಬಳಿಕ ನಿಮ್ಮ ಸಂಸಾರ ಅಥವಾ ಮುಖ್ಯ ಸಂಬಂಧದಲ್ಲಿ ಒಡಕು ಕಾಣುವ ಸಾಧ್ಯತೆ ಹೆಚ್ಚು ಇರುತ್ತದೆ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮಧ್ಯಾಹ್ನ ಬಳಿಕವೂ ನಿಮ್ಮ ಪ್ರೀತಿ ಪಾತ್ರರಿಂದ ಅಕ್ಕರೆ ಯಶಸ್ಸು ಎಲ್ಲವೂ ಸಿಗುತ್ತದೆ. ಅದೇ ರೀತಿ ಕಾರ್ಯಕ್ಷೇತ್ರದಲ್ಲಿಯೂ ಯಶಸ್ಸು ಸಿಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತ ದಿನವಾಗಿದೆ. ಮಧ್ಯಾಹ್ನ ನಂತರ ಶತ್ರುಗಳನ್ನು ಹಿಮ್ಮೆಟ್ಟಬಹುದು. ಮನಸ್ಸಿಗೆ ನೆಮ್ಮದಿ ಇದ್ದು ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣುತ್ತೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಮಧ್ಯಾಹ್ನ ಬಳಿಕ ಮನಸ್ಸಿಗೆ ಸ್ವಲ್ಪ ನೆಮ್ಮದಿ ಸಿಗುತ್ತದೆ. ಆದರೆ ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕತೆ ಅವಶ್ಯಕ
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಸಂಸಾರದದಲ್ಲಿ ನೆಮ್ಮದಿ ಹಾಗೂ ತಾಯಿಯ ಬಗ್ಗೆ ಜವಾಬ್ದಾರಿ ನೀಡಬೇಕು.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಸಾಮಾಜಿಕ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಜಯ ಕಾಣುತ್ತೀರಿ.ಹಣಕಾಸಿನ ವಿಚಾರದಲ್ಲೂ ಲಾಭಗಳಿಸುತ್ತೀರಿ.