ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜುಲೈ 8, 2026: ಅಂದುಕೊಂಡ ಕೆಲಸದಲ್ಲಿ ಯಶಸ್ಸು, ಇಷ್ಟಾರ್ಥ ಸಿದ್ಧಿ

Horoscope Today July 8th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಅಷ್ಟಮಿ ತಿಥಿ, ರೇವತಿ ನಕ್ಷತ್ರದ, ಜುಲೈ 8ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂಟರ್‌ನೆಟ್ ಚಿತ್ರ

ಬೆಂಗಳೂರು: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ರೇವತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ರೇವತಿ ನಕ್ಷತ್ರದಲ್ಲಿ ಚಂದ್ರ ಇರುವುದರಿಂದ ಎಲ್ಲ ರಾಶಿಯವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.‌ ಅದೇ ರೀತಿ ಗುರು ದೃಷ್ಟಿ ಚಂದ್ರನ ಮೇಲೆ ಬಂದಿರುವುದರಿಂದ ಕೆಲವೊಂದು ರಾಶಿಯವರಿಗೆ ಗಜಕೇಸರಿ ಯೋಗ ಇದೆ.‌ ಈ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಹಣ ವ್ಯಯವಾಗಲಿದ್ದು, ಹಿರಿಯರಿಂದ ಮನಸ್ತಾಪ ಉಂಟಾಗಬಹುದು‌.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದ್ದು, ಇಷ್ಟಾರ್ಥ ಸಿದ್ಧಿಯಾಗುತ್ತದೆ. ಎಲ್ಲರ ಸಹಕಾರ ನಿಮಗಿಂದು ಸಿಗಲಿದೆ.

ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ ಇದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಬದಲಾವಣೆ ಕಂಡು ಬರಲಿದ್ದು, ಯಶಸ್ಸು ಗಳಿಸುತ್ತೀರಿ.

ಕಟಕ ರಾಶಿ: ಕಟಕ ರಾಶಿಯವವರಿಗೆ ಉತ್ತಮ ದಿನವಾಗಲಿದೆ. ಹಿರಿಯರಿಂದ ಲಾಭದ ಜತೆಗೆ ಆರ್ಥಿಕವಾಗಿ ಯಶಸ್ಸು ಕಾಣುತ್ತೀರಿ. ಅಂದುಕೊಂಡ ಕೆಲಸ ಕಾರ್ಯಗಳು ನೆರವೇರುತ್ತವೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮನಸ್ಸಿಗೆ ಬಹಳಷ್ಟು ಕಸಿವಿಸಿ ಇರಲಿದ್ದು, ನೋವು ಉಂಟಾಗಬಹುದು. ಯಾವುದೇ ಮುಖ್ಯ ನಿರ್ಧಾರ ಇಂದು ಕೈಗೊಳ್ಳಲು ಹೋಗಬೇಡಿ‌.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದ್ದು, ಪಾರ್ಟನರ್ಶಿಪ್‌ ವ್ಯವಹಾರದಲ್ಲಿ ಯಶಸ್ಸು ಕಾಣುತ್ತೀರಿ. ಬೇರೆಯವರಿಗೆ ನಿಮ್ಮಿಂದ ಇಂದು ಒಳ್ಳೆದಾಯಗುತ್ತದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದ್ದರೂ ಶತ್ರುಗಳಿಗೆ ಮುನ್ನಡೆಯಾಗಬಹುದು. ಆದರೆ ಧರ್ಮ ಮಾರ್ಗದಲ್ಲಿ ನಡೆದರೆ ಯಾವುದೇ ಹಾನಿ ಸಂಭವಿಸುವುದಿಲ್ಲ.

ಮಲಗುವ ಕೋಣೆಯಲ್ಲಿ ಡ್ರೆಸ್ಸಿಂಗ್ ಟೇಬಲ್ ಎಲ್ಲಿರಬೇಕು? ದಾಂಪತ್ಯ ಸುಖಕ್ಕೆ ವಾಸ್ತು ಹೇಳುವ ನಿಯಮ ಇದು!

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕಲೆ, ಕ್ರಿಯಾತ್ಮಕ ಚಟುವಟಿಕೆಯಲ್ಲಿರುವ ಮಕ್ಕಳಿಗೆ ಒಳ್ಳೆಯದಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕೋರ್ಟ್, ಕಚೇರಿ ವ್ಯವಹಾರದಲ್ಲಿ ನಿಮ್ಮ ಪರವಾದ ಬೆಳವಣಿಗೆ ಕಂಡು ಬರಲಿದೆ. ಮನೆಯಲ್ಲಿ ಖುಷಿಯಾದ ವಾತಾವರಣವಿದ್ದು, ಹಿರಿಯರ ಆಶೀರ್ವಾದ ಸಿಗಲಿದೆ.

ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಸೋಷಿಯಲ್ ಮೀಡಿಯಾ ಹಾಗೂ ಮಾರ್ಕೆಟಿಂಗ್ ವ್ಯವಹಾರದಲ್ಲಿ ಇರೋರಿಗೆ ಯಶಸ್ಸು ಸಿಗುತ್ತದೆ. ಅತೀ ಹೆಚ್ಚಿನ ಲಾಭ ಇಂದು ಗಳಿಸುತ್ತೀರಿ.

ಕುಂಭ ರಾಶಿ: ಈ ರಾಶಿಯವರು ಕುಟುಂಬದ ಜತೆ ಸಮಯ ಕಳೆಯಲಿದ್ದೀರಿ. ‌ಹೆಚ್ಚಿನ ಸಂತೋಷ, ಖುಷಿ ಇಂದು ಸಿಗುತ್ತದೆ. ಕೆಲಸ ಕಾರ್ಯದಲ್ಲೂ ಸಮೃದ್ಧಿ ಕಾಣುತ್ತೀರಿ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮುಖ್ಯವಾದ ಕೆಲಸದಲ್ಲಿ ಬದಲಾವಣೆ ಕಂಡು ಬರಲಿದೆ. ಕೈ ಹಾಕಿದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.