Horoscope Today February 8th: ಈ ರಾಶಿಯವರಿಗೆ ಇಂದು ಇಷ್ಟಾರ್ಥ ಸಿದ್ದಿಯ ಜೊತೆಗೆ ದಾಂಪತ್ಯದಲ್ಲಿ ನೆಮ್ಮದಿ!
ನಿತ್ಯ ಭವಿಷ್ಯ ಫೆಬ್ರವರಿ 8, 2026: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು ಮಘೆ ಮಾಸೆ, ಕೃಷ್ಣೆ ಪಕ್ಷದ, ಸಪ್ತಮಿ ತಿಥಿ, ಸ್ವಾತಿ ನಕ್ಷತ್ರದ ಫೆಬ್ರವರಿ 8ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.
ಸಂಗ್ರಹ ಚಿತ್ರ -
ಬೆಂಗಳೂರು: ಇಂದು ವಿಶ್ವವಸು ನಾಮ ಸಂವತ್ಸರದ ಉತ್ತರಾಯನ ಶಿರದೃತು, ಮಘೆ ಮಾಸೆ, ಕೃಷ್ಣೆ ಪಕ್ಷದ, ಸ್ವಾತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಇಂದು ಸ್ವಾತಿ ನಕ್ಷತ್ರ ಇದ್ದು ಅಧಿಪತಿ ರಾಹು ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ದಾಂಪತ್ಯದಲ್ಲಿ ನೆಯ ನೆಮ್ಮದಿ ಕಾಣುತ್ತೀರಿ. ಪ್ರೇಮ, ಪ್ರೀತಿಯಲ್ಲಿ ಕೂಡ ಸಂತೋಷ ಕಾಣುತ್ತೀರಿ.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಸಿಗಲಿದ್ದು ಶತ್ರುಗಳನ್ನು ಹಿಮ್ಮೆಟ್ಟಬಹುದು. ಆರೋಗ್ಯದಲ್ಲಿ ಕೂಡ ಸುಧಾರಣೆ ಕಾಣುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಷ್ಟಕರವಾದ ದಿನವಾಗಿದೆ. ಪ್ರೇಮ, ಪ್ರೀತಿಯಲ್ಲಿ ಇದ್ದವರು ಬಹಳ ಹುಷಾರಾಗಿ ಇರಬೇಕು. ಏನೋ ಒಂದು ನಿಮಗೆ ಗೊತ್ತಿಲ್ಲದ ವಿಚಾರ ನಡಿತಾ ಇರಬಹುದು. ಹಾಗಾಗಿ ಜಾಗೃತರಾಗಿರಿ. ಮೋಸ ಹೋಗುವ ಸಾಧ್ಯತೆ ಕೂಡ ಇದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಕ್ಲಿಷ್ಟಕರವಾದ ದಿನವಾಗಿದೆ. ತಾಯಿಯ ಆರೋಗ್ಯದ ಬಗ್ಗೆ ಹೆಚ್ಚು ತಲೆಕಡೆಸಿಕೊಳ್ಳುವ ದಿನವಾಗಬಹುದು. ಕೋರ್ಟ್, ಕಛೇರಿ ಯಾವುದೇ ವ್ಯವಹಾರ ಇಂದು ಬೇಡ.
Vastu Tips: ಕುಬೇರ ದಿಕ್ಕು ಅಥವಾ ಅಗ್ನಿ ಮೂಲೆ- ಅಡುಗೆ ಮನೆ ಎಲ್ಲಿದ್ದರೆ ಒಳ್ಳೆಯದು? ಇಲ್ಲಿದೆ ಉತ್ತರ
ಸಿಂಹ ರಾಶಿ: ಸಿಂಹ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮಾಧ್ಯಮ, ಮಾರ್ಕೆಟಿಂಗ್ ವ್ಯವಹಾರದಲ್ಲಿ ಲಾಭದಾಯಕ ವಾಗಲಿದೆ. ಸಹೋದರರಿಂದ ಸಂತೋಷ ನಿಮಗೆ ಸಿಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ನಿಮ್ಮ ಕುಟುಂಬದ ವಿಚಾರದ ಬಗ್ಗೆ ಹೆಚ್ಚಿನ ಗಮನ ನೀಡ ಬೇಕಾಗುತ್ತದೆ. ಆದರೂ ಎಲ್ಲವನ್ನು ನೀವು ಚೆನ್ನಾಗಿ ನಿಭಾಯಿಸುತ್ತೀರಿ.
ತುಲಾ ರಾಶಿ: ತುಲಾ ರಾಶಿಗೆ ಉತ್ತಮವಾದ ದಿನವಾಗಿದ್ದು ಮನ ನೆಮ್ಮದಿ ಸಿಗುತ್ತದೆ. ಅತೀ ಹೆಚ್ಚಿನ ನಿರಾಳತೆ ನಿಮಗೆ ಪ್ರಾಪ್ತಿಯಾಗುತ್ತದೆ.ದೊಡ್ಡದಾದ ತೊಂದರೆಯೊಂದು ಬಗೆಹರಿಯಬಹುದು.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯ ನಿರ್ಧಾರಗಳು ಯಾವುದೇ ಬೇಡ. ಹಣಕಾಸಿನ ವೆಚ್ಚಗಳು ಜಾಸ್ತಿಯಾಗಬಹುದು.
ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಮಿತ್ರರಿಂದ ಅತೀ ಹೆಚ್ಚಿನ ಸಂತೋಷ ನಿಮಗೆ ಪ್ರಾಪ್ತಿ ಯಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ಬಹಳಷ್ಟು ನೆಮ್ಮದಿ ಇದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಕಾಣುತ್ತೀರಿ. ಹೆಚ್ಚಿನ ಗೌರವ ನಿಮಗೆ ಪ್ರಾಪ್ತಿ ಯಾಗುತ್ತದೆ.
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ಎರಡು ಮೂರು ದಿನಗಳ ನೋವು ಎಲ್ಲವೂ ಮಾಯವಾಗುತ್ತದೆ.
ಮೀನ ರಾಶಿ: ಮೀನ ರಾಶಿ ಅವರಿಗೆ ಉತ್ತಮ ದಿನವಾಗಿದೆ. ಆದರೂ ಕೂಡ ನೀವು ಆತಂಕಕ್ಕೆ ಒಳಗಾಗುವ ಸಾಧ್ಯತೆಗಳು ಹೆಚ್ಚು ಇರುತ್ತದೆ. ಧ್ಯಾನಧಿಗಳನ್ನು ಮಾಡಿ ಸಮಯ ಕಳೆಯಬೇಕು.