ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಪೂರ್ವಾಷಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಪೂರ್ವಾಷಡ ನಕ್ಷತ್ರದ ಅಧಿಪತಿ ಶುಕ್ರ ಆಗಿದ್ದಾನೆ. ಹೀಗಾಗಿ ಹೆಚ್ಚಿನ ಜನರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದ್ದು ಬಂಧು- ಬಾಂಧವ ರಿಂದ ನೆಮ್ಮದಿ ಸಿಗುತ್ತದೆ. ಅದೇ ರೀತಿ ಹಿರಿಯರಿಂದಲೂ ಆಶೀರ್ವಾದ ಇಂದು ಪ್ರಾಪ್ತಿಯಾಗುತ್ತದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಿತ್ರರಿಂದ ಬೇಸರ ಉಂಟಾಗಬಹುದು. ಅದೇ ರೀತಿ ಮುಖ್ಯವಾದ ಕೆಲಸ ಕಾರ್ಯದಲ್ಲಿ ಹೆಚ್ಚಿನ ಒಡಕುಗಳು ಕಾಣಬಹುದು.
ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಪ್ರೀತಿ ಪಾತ್ರರಿಂದ ನೆಮ್ಮದಿ. ಬಿಸೆನೆಸ್ ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲೂ ನಿಮಗೆ ಯಶಸ್ಸು ಸಿಗುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಸಾಮಾಜಿಕ ಚಟುವಟಿಕೆಯಲ್ಲಿ ತೊಂದರೆ ಎದುರಾಗಬಹುದು. ಸೋಷಿಯಲ್ ಮೀಡಿಯಾ ವ್ಯವಹಾರದಲ್ಲಿ ಒಡಕುಗಳನ್ನು ಕಾಣಬೇಕಾಗಿ ಬರಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಬಿಸೆನೆಸ್ ವ್ಯವಹಾರದಲ್ಲಿ ತೊಂದರೆ ಉಂಟಾಗಬಹುದು. ಹಣಕಾಸಿನ ವಿಚಾರದಲ್ಲೂ ನಷ್ಟ ಉಂಟಾಗುವ ಸಾಧ್ಯತೆ ಇದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಆಸ್ತಿ ಪಾಸ್ತಿ ವಿಚಾರವಾಗಿ ಹೆಚ್ಚಿನ ಹೋರಾಟವನ್ನು ಇಂದು ಮಾಡಬೇಕಾಗುತ್ತದೆ. ತಾಯಿಯ ಬಗ್ಗೆಯೂ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ.
Vastu Tips: ಸಾಕುಪ್ರಾಣಿಗಳಿಗೂ ವಾಸ್ತು ಇದೆ! ಯಾವ ಪ್ರಾಣಿಗೆ ಯಾವ ದಿಕ್ಕು ಶುಭ ಗೊತ್ತಾ?
ತುಲಾ ರಾಶಿ: ತುಲಾ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಬರವಣಿಗೆ, ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಲಾಭದಾಯಕವಾಗಿದೆ. ಮಾತಿನ ಮೂಲಕವೇ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುತ್ತೀರಿ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಹೆಚ್ಚಿನ ಧನ ಆಗಮನದ ಸೂಚನೆಗಳು ಕೂಡ ಇವೆ. ಕೆಲಸ ಕಾರ್ಯದಲ್ಲೂ ಯಶಸ್ಸು ಕಾಣುತ್ತೀರಿ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಉತ್ತಮ ದಿನವಾಗಿದೆ. ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ತೊಂದರೆ ಬಗೆಹರಿದು ಯಶಸ್ಸು ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ತೊಂದರೆ ಎದುರಾಗಬಹುದು. ಆರೋಗ್ಯದಲ್ಲಿಯೂ ಸಮಸ್ಯೆ ಉಂಟಾಗುತ್ತದೆ.
ಕುಂಭ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ ಇಷ್ಟಾರ್ಥ ಸಿದ್ದಿಯಾಗಲಿದ್ದು ಸ್ನೇಹಿತರಿಂದ ನೆಮ್ಮದಿ ಹಾಗೂ ಖುಷಿ ಸಿಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಹಾಗೂ ಆತ್ಮವಿಶ್ವಾಸ ಇಂದು ಹೆಚ್ಚಾಗುತ್ತದೆ..