ದಿನ ಭವಿಷ್ಯ, ಜುಲೈ 25, 2026: ಈ ರಾಶಿಯವರು ಇಂದು ಮಾತಿನಲ್ಲಿ ಎಚ್ಚರಿಕೆ ವಹಿಸಬೇಕು!
Horoscope Today July 25h: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಏಕಾದಶಿ ತಿಥಿ, ಜೇಷ್ಠ ನಕ್ಷತ್ರದ, ಜುಲೈ 25ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಜೇಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಜೇಷ್ಠ ನಕ್ಷತ್ರದಲ್ಲಿ ಚಂದ್ರ ಇದ್ದಾನೆ. ಹೀಗಾಗಿ ಹೆಚ್ಚಿನ ಜನರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಉತ್ತಮವಾದ ದಿನವಾಗಿದ್ದು ಆಧ್ಯಾತ್ಮಿಕವಾಗಿ ಯಶಸ್ಸುಗಳಿಸುತ್ತೀರಿ. ಆದರೆ ಕೆಲವರಿಂದ ಕ್ಲೇಷ ಉಂಟಾಗುವ ಸಾಧ್ಯತೆ ಇದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಅತೀ ಹೆಚ್ಚಿನ ನೆಮ್ಮದಿಯನ್ನು ನೀವು ನೋಡಬಹುದು. ಬೇರೆಯವರಿಂದ ಸಹಕಾರ ಸಿಗಲಿದ್ದು ಯಶಸ್ಸನ್ನು ಕಾಣಬಹುದು.
ಮಿಥುನ ರಾಶಿ: ಇಂದು ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಶತ್ರು ನಾಶ ಹಾಗೂ ದ್ವಂಸವಾಗುತ್ತದೆ. ಮಾತಿನಿಂದ ನೀವು ಎಲ್ಲರನ್ನು ಗೆಲ್ಲುತ್ತೀರಿ. ಸಾಮಾಜಿಕ ಚಟುವಟಿಕೆಯಲ್ಲಿ ಯಾವುದೇ ರೀತಿಯ ತೊಂದರೆ ಇರುವುದಿಲ್ಲ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಪ್ರೀತಿ ವಿಚಾರ ಹಾಗೂ ಸ್ನೇಹಿತರಲ್ಲಿ ಒಡಕು ಕಾಣಬಹುದು. ಯಾವುದೇ ವಿಚಾರವಾಗಿ ಮನಸ್ತಾಪ ಉಂಟಾಗಬಹುದು. ಹಾಗಾಗಿ ತಿಳಿದು ಮಾತನಾಡುವುದು ಉತ್ತಮ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಮಾತುಕತೆ ಹಾಗೂ ಆಸ್ತಿ ಪಾಸ್ತಿ ವಿಚಾರವಾಗಿ ಗಮನ ಅವಶ್ಯಕವಾಗಿರುತ್ತದೆ. ಯಾವುದೇ ಡ್ಯಾಕುಮೆಂಟ್ ಕಳುಹಿಸುವ ಮೊದಲು ಜಾಗೃತಿ ವಹಿಸಿ.
Vastu Tips: ಲಿವಿಂಗ್ ರೂಮ್ ವಾಸ್ತು: ಮನೆಗೆ ಸುಖ, ಸಮೃದ್ಧಿ ತರಲು ಪಾಲಿಸಬೇಕಾದ ಪ್ರಮುಖ ನಿಯಮಗಳು
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಎಲ್ಲ ಕೆಲಸ ಕಾರ್ಯದಲ್ಲಿ ನೀವು ಜಯಗಳಿಸುತ್ತೀರಿ. ಬರವಣಿಗೆ ಹಾಗೂ ಮಾಧ್ಯಮದಲ್ಲಿ ಇರೋರಿಗೆ ಯಶಸ್ಸು
ತುಲಾ ರಾಶಿ: ತುಲಾ ರಾಶಿ ಅವರಿಗೆ ಮಾತಿನಿಂದ ತೊಂದರೆ ಎದುರಾಗಬಹುದು. ಹಾಗಾಗಿ ಯಾರ ಜೊತೆಗೂ ಸಂವಹನ ನಡೆಸುವಾಗ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ದಿನದಲ್ಲಿ ಇದ್ದ ತೊಂದರೆ ಮಾಯವಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಇಂದು ನಿಮಗೆ ವೈಯಕ್ತಿಕ ತೊಂದರೆ ಎದುರಾಗಬಹುದು. ಅದೇ ರೀತಿ ಸ್ನೇಹದಲ್ಲಿ ಒಡಕು ಕೂಡ ಕಾಣುತ್ತೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಕಾಣುತ್ತೀರಿ. ಆರ್ಥಿಕವಾಗಿಯೂ ಯಶಸ್ಸು ಇರುತ್ತದೆ.
ಕುಂಭರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಇರುತ್ತದೆ ಮಾತಿನಿಂದ ಜಯ ಸಿಗಬಹುದು.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಭಾಗ್ಯದಲ್ಲಿ ಚಂದ್ರ ಇದ್ದಾನೆ. ಆದರೆ ಯಾವುದೇ ಕೆಲಸ ಕಾರ್ಯದಲ್ಲಿ ಹಿರಿಯರ ಆಶೀರ್ವಾದ ಬೇಕಾಗುತ್ತದೆ.