ದಿನ ಭವಿಷ್ಯ, ಜುಲೈ 26, 2026: ಈ ರಾಶಿಗೆ ಇಂದು ಹಣಕಾಸಿನ ವಿಚಾರವಾಗಿ ಜಾಗೃತಿ ಅಗತ್ಯ!
Horoscope Today July 26th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ದ್ವಾದಶಿ ತಿಥಿ, ಜೇಷ್ಠ ನಕ್ಷತ್ರದ, ಜುಲೈ 26ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ.
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಜೇಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಇಂದು ಮೀನ ರಾಶಿಯಲ್ಲಿ ಶನಿ ವಕ್ರಿಯಾಗುತ್ತಿದ್ದಾನೆ. ಹೀಗಾಗಿ ಹೆಚ್ಚಿನ ಜನರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದ್ದು ಕೆಲಸ ಕಾರ್ಯದಲ್ಲಿ ಅವಕಾಶಗಳು ಪ್ರಾಪ್ತಿಯಾಗುತ್ತದೆ. ಮಿತ್ರರಿಂದ ಹಾಗೂ ಪ್ರೀತಿ ಪಾತ್ರರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಪ್ರತಿಷ್ಠೆ ಹೆಚ್ಚಾಗಬಹುದು. ಆದರೆ ಒತ್ತಡಗಳು ಇಂದು ಹೆಚ್ಚಾಗುವ ಸಾಧ್ಯತೆ ಇದೆ.
ಮಿಥುನ ರಾಶಿ: ಇಂದು ಈ ರಾಶಿಗೆ ಭಾಗ್ಯ ಸ್ಥಾನಕ್ಕೆ ಶನಿ ಬರುತ್ತಿದ್ದಾನೆ. ತಂದೆಯೊಂದಿಗೆ ಅಥವಾ ಹಿರಿಯರೊಂದಿಗೆ ವೈಮನಸ್ಸು ಮೂಡಬಹುದು. ಹಾಗಾಗಿ ವಿನಯತೆಯಿಂದ ಮಾತನಾಡಿದರೆ ಒಳಿತು.
ಕಟಕ ರಾಶಿ: ಕಟಕ ರಾಶಿ ಅವರಿಗೆ ಹಳೆಯ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ತೊಂದರೆ ಎದುರಾಗಬಹುದು. ಹೀಗಾಗಿ ಜಾಗರೂಕತೆಯಿಂದ ಇರಬೇಕಾಗುತ್ತದೆ.
Vastu Tips: ಜೇಡ್ ಸಸ್ಯವನ್ನು ಈ ದಿಕ್ಕಿನಲ್ಲಿ ಇಟ್ಟರೆ ಸಂಪತ್ತು ವೃದ್ಧಿ! ಫೆಂಗ್ ಶೂಯಿ ಹೇಳುವ ವಾಸ್ತು ನಿಯಮ ಇದು
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಸಪ್ತಮದಲ್ಲಿ ಚಂದ್ರ ಬರುತ್ತಿದ್ದಾನೆ. ಬಿಸೆನೆಸ್ ವ್ಯವಹಾರ ಹಾಗೂ ಸ್ನೇಹ- ಸಂಬಂಧದಲ್ಲಿ ಒಡಕು ಕಾಣಬಹುದು. ಕೆಲವು ಸ್ನೇಹ ಸಂಬಂಧಗಳು ನಿಮ್ಮನ್ನು ಹೆಚ್ಚಾಗಿ ಕಾಡುವ ಸಾಧ್ಯತೆ ಇದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಶತ್ರುಗಳಿಂದ ತೊಂದರೆ ಇರುವುದಿಲ್ಲ. ಆದರೆ ಹಣಕಾಸಿನ ವಿಚಾರವಾಗಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ.
ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಪ್ರೀತಿ- ಪ್ರೇಮ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗಿ ಬರಬಹುದು. ಹಣಕಾಸಿನ ವಿಚಾರದಲ್ಲೂ ಜಾಗೃತಿ ಅಗತ್ಯ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಕಷ್ಟಕರ ದಿನವಾಗಿದೆ. ಕೋರ್ಟ್ ಕಛೇರಿ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು. ಅದೇ ರೀತಿ ದಾಂಪತ್ಯದಲ್ಲೂ ಒಡಕು ಕಾಣಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಗೆ ಉತ್ತಮ ದಿನವಾಗಿದೆ. ಇಂದು ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಪ್ರತಿಷ್ಠೆ ಹೆಚ್ಚಾಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯಕ್ಷೇತ್ರದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಆದರೆ ಮನೆಯ ಕುಟುಂಬದ ಬಗ್ಗೆಯೂ ಜವಾಬ್ದಾರಿ ಅಗತ್ಯ
ಕುಂಭರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಿದೆ. ವೈಯಕ್ತಿಕ ಬದಲಾವಣೆ ಇಂದು ಅಗತ್ಯವಾಗಿರುತ್ತದೆ. ವಾದ - ವಿವಾದದ ತೊಂದರೆ ಎದುರಾಗಬಹುದು.
ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮಿತ್ರರು ದೂರವಾಗಬಹುದು. ಹಣಕಾಸಿನ ವಿಚಾರದಲ್ಲೂ ಜಾಗೃತಿ ಇರುವುದು ಅವಶ್ಯಕ.