ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಭರಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಭರಣಿ ನಕ್ಷತ್ರದ ಅಧಿಪತಿ ಶುಕ್ರ ಆಗಿದ್ದಾನೆ. ಹೀಗಾಗಿ ಹೆಚ್ಚಿನ ರಾಶಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಮಿತ್ರತ್ವದಲ್ಲಿ ಖುಷಿ ಹಾಗೂ ನೆಮ್ಮದಿ ಸಿಗುತ್ತದೆ. ಕೆಲಸ ಕಾರ್ಯದಲ್ಲೂ ಯಶಸ್ಸು ಪಡೆಯುತ್ತೀರಿ
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಮುಖ್ಯವಾದ ಸಂಬಂಧದಲ್ಲಿ ಅಥವಾ ಹೆಂಗಸರಿಂದ ತೊಂದರೆಗಳು ಉಂಟಾಗಬಹುದು. ಹಾಗಾಗಿ ಜಾಗರೂಕತೆಯಿಂದ ಇರಬೇಕಾಗುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಗೆ ಅತೀ ಉತ್ತಮವಾದ ದಿನವಾಗಿದೆ. ಹೆಂಗಸರ ಮೂಲದಿಂದ ಅನುಕೂಲಕರವಾಗಿ ಇರುತ್ತದೆ. ಎಲ್ಲರಲ್ಲೂ ಗೌರವ ಪೂರ್ವಕವಾಗಿ ಮಾತನಾಡಿದರೆ ಒಳ್ಳೆಯದು.
ಕಟಕ ರಾಶಿ: ಕಟಕ ರಾಶಿ ಅವರಿಗೆ ಸ್ವಲ ಕಷ್ಟಕರವಾದ ದಿನವಾಗಿದೆ.. ಆದರೆ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಹೆಚ್ಚಾಗಬಹುದು. ಕೆಲವೊಂದು ತೊಂದರೆಗಳನ್ನು ಎದುರಿಸಬೇಕಾಗಿ ಬರಬಹುದು. ಹೆಚ್ಚಿನ ಮಾತುಕತೆಗಳು ಅಗತ್ಯವಲ್ಲ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದ್ದು ಭಾಗ್ಯೋದಯವಾಗುತ್ತದೆ. ದೇವರ ಹಾಗೂ ಹಿರಿಯರ ಆಶೀರ್ವಾದ ಇಂದು ನಿಮಗೆ ಸಿಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಸ್ನೇಹ- ಸಂಬಂಧದಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ.
ತುಲಾ ರಾಶಿ: ತುಲಾ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಎಲ್ಲ ವಹಿವಾಟಿನಲ್ಲಿ ನೆಮ್ಮದಿ ಹಾಗೂ ಖುಷಿ ಸಿಗುತ್ತದೆ. ಕೆಲಸ ಕಾರ್ಯದಲ್ಲೂ ಹೆಚ್ಚು ಯಶಸ್ಸು ಪ್ರಾಪ್ತಿಯಾಗುತ್ತದೆ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಇಂದು ಆತ್ಮವಿಶ್ವಾಸ ಹೆಚ್ಚಾಗಿ ಇದ್ದು ಶತ್ರುಗಳನ್ನು ಹಿಮ್ಮೆಟ್ಟಬಹುದು. ಆದರೆ ಯಾರ ಜೊತೆಗೂ ವೈಮನನ್ಸು ಬರದಂತೆ ನೋಡಿಕೊಳ್ಳಬೇಕು.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಆದರೆ ಹಣಕಾಸಿನ ವಿಚಾರದಲ್ಲಿ ಹಾಗೂ ವೈಯಕ್ತಿಕ ವಿಚಾರದಲ್ಲಿ ಬೇಸರ ಉಂಟಾಗಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಕೋರ್ಟ್, ವ್ಯವಹಾರದಲ್ಲಿ ತೊಂದರೆ. ಹಾಗೂ ಸಂಸಾರದ ವಿಚಾರದಲ್ಲಿ ತಲೆಬಿಸಿ ಉಂಟಾಗಬಹುದು.
ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮಾಧ್ಯಮ, ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಉತ್ತಮವಾಗಿದೆ. ಮಾತಿನ ಮೂಲಕ ಗೆಲುವು ಪಡೆಯಬಹುದು.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕುಟುಂಬದ ಜೊತೆ ಹೆಚ್ಚಿನ ಸಮಯ ಕಳೆಯಲಿದ್ದು ನೆಮ್ಮದಿ ಪ್ರಾಪ್ತಿಯಾಗುತ್ತದೆ.