Horoscope Today February 5th: ಹಣಕಾಸಿನ ವಿಚಾರದಲ್ಲಿ ತೊಂದರೆಯಾಗಲಿದೆ; ಎಚ್ಚರ!
ನಿತ್ಯ ಭವಿಷ್ಯ ಫೆಬ್ರವರಿ 5, 2026: ವಿಶ್ವವಸು ನಾಮ ಸಂವತ್ಸರದ ಉತ್ತರಾಯನ, ಶರದೃತು, ಮಘೆ ಮಾಸೆ, ಕೃಷ್ಣೆ ಪಕ್ಷ, ಚತುರ್ಥಿ ತಿಥಿ, ಉತ್ತರ ಫಾಲ್ಗುಣಿ ನಕ್ಷತ್ರದ ಫೆಬ್ರವರಿ 5ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು, ಫೆ. 5: ವಿಶ್ವವಸು ನಾಮ ಸಂವತ್ಸರದ ಉತ್ತರಾಯನ, ಶರದೃತು, ಮಘೆ ಮಾಸೆ, ಕೃಷ್ಣೆ ಪಕ್ಷ, ಉತ್ತರ ಫಾಲ್ಗುಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಇಂದು ಕುಂಭ ರಾಶಿಗೆ ಶುಕ್ರ ಪ್ರವೇಶ ಮಾಡುತ್ತಿದ್ದಾನೆ. ಹಾಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು, ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮಿತ್ರರಿಂದ ಧನಾಗಮನವಾಗಲಿದೆ.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಸ್ತ್ರೀಯರಿಂದ ತೊಂದರೆ ಆಗಬಹುದು. ನಿಮ್ಮ ಅಭಿಮಾನವನ್ನು ಹಾಳುಗೆಡವದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿಯರುವವರಿಗೆ ಅದೃಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ಎರಡು ಮೂರು ತಿಂಗಳಿನಲ್ಲಿ ಇದ್ದ ಕ್ಷೇಷ ಮಾಯವಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಸ್ತ್ರೀಯರ ಜತೆ ಸಮಾಧಾನದಿಂದ ವ್ಯವಹಾರ ಮಾಡ ಬೇಕಾಗುತ್ತದೆ. ನಿಮ್ಮ ಗೌರವಕ್ಕೆ ದಕ್ಕೆ ಬಾರದಂತೆ ವ್ಯವಹಾರವನ್ನು ಮಾಡಿಕೊಳ್ಳುವುದು ಮುಖ್ಯ.
ಮನೆಯಲ್ಲಿರುವ ಈ ವಸ್ತುಗಳು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು ಎನ್ನುತ್ತದೆ ವಾಸ್ತು ಶಾಸ್ತ್ರ
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಸ್ತ್ರೀಯರ ಜತೆ ಮನಸ್ಸಿಗೆ ಕ್ಷೇಷ ಉಂಟಾಗಬಹುದು. ಸಾಮಾಜಿಕ ಸ್ಥಾನಮಾನದಲ್ಲಿ ಕುಂದು ಕೊರತೆಗಳು ಉಂಟಾಗಬಹುದು.
ತುಲಾ ರಾಶಿ: ತುಲಾ ರಾಶಿಗೆ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ಧಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಇರುತ್ತದೆ. ಆದರೂ ಕೂಡ ಬೇರೆಯವರ ಮನಸ್ಸನ್ನು ನೀವು ಅರ್ಥೈಸಿ ಕೊಳ್ಳಬೇಕಾಗುತ್ತದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕುಟುಂಬದ ವಿಚಾರದಲ್ಲಿಯೂ ಸಮಾಧಾನ ಹೊಂದಲಿದ್ದೀರಿ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಬಂಧು- ಬಾಂಧವರಿಂದ ಹಾಗೂ ಸಾಮಾಜಿಕ ಚಟುವಟಿಕೆಯಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುತ್ತೀರಿ. ಮಾಧ್ಯಮ, ಟಿವಿ ರೇಡಿಯೊದಲ್ಲಿ ಲಾಭ ಗಳಿಸುತ್ತೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ಬಹಳಷ್ಟು ನೆಮ್ಮದಿ ಇದ್ದು ಕುಟುಂಬದಲ್ಲಿ ಉತ್ತಮ ವಾತಾವರಣ ಕಂಡು ಬರುತ್ತದೆ.
ಕುಂಭರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶುಕ್ರ ನಿಮ್ಮ ರಾಶಿಗೆ ಬರಲಿದ್ದು, ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಶತ್ರುಗಳು ನೀವು ಹಿಮ್ಮೆಟ್ಟಿಸಬಹುದು. ಇಂದು ನಿಮ್ಮ ಆತ್ಮವಿಶ್ವಾಸ ತುಂಬ ಹೆಚ್ಚಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ಮಿತ್ರತ್ವದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ತೊಂದರೆ ಆಗಬಹುದು.