ಬೆಂಗಳೂರು, ಜೂ. 28: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಜೇಷ್ಠ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯಚರ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಪ್ರೀತಿ ಪಾತ್ರರ ಸಹಕಾರ ನಿಮಗೆ ಸಿಗದೇ ಇರಬಹುದು. ಅದೇ ರೀತಿ ಮನಸ್ಸಿಗೆ ಅಷ್ಟಾಗಿ ಖುಷಿಯಾದ ವಾತಾವರಣ ಇಂದು ಇರುವುದಿಲ್ಲ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಪಾರ್ಟನರ್ಶಿಪ್ ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಎಲ್ಲ ಕೆಲಸ ಕಾರ್ಯದಲ್ಲೂ ಜಯವನ್ನು ಕಾಣುತ್ತೀರಿ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ತೊಂದರೆ ಎದುರಾಗಬಹುದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ.
ಕಟಕ ರಾಶಿ: ಕಟಕ ರಾಶಿಯವರು ಬುದ್ದಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಆದರೆ ಪ್ರೀತಿ-ಪ್ರೇಮ ಪ್ರಕರಣದಲ್ಲಿ ನಿಮಗೆ ಬೇಸರವಾಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮನಸ್ಸಿಗೆ ಅಷ್ಟಾಗಿ ನೆಮ್ಮದಿ ಇರುವುದಿಲ್ಲ. ಇಂದು ನಾನಾ ರೀತಿಯ ತೊಂದರೆ ಎದುರಿಸಬೇಕಾಗಬಹುದು.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಸಂಸಾರದಲ್ಲಿ ನೆಮ್ಮದಿ ಸಿಗುತ್ತದೆ. ಅದೇ ರೀತಿ ಅತೀ ಹೆಚ್ಚಿನ ಆತ್ಮವಿಶ್ವಾಸದಿಂದ ಇಂದು ಯಶಸ್ಸು ಕಾಣುತ್ತೀರಿ.
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನೆಯವರ ಬಗ್ಗೆ ಯೋಚಿಸಿ ಅವರಿಗೆ ಹೆಚ್ಚಿನ ಸಮಯ ನೀಡಬೇಕಾಗುತ್ತದೆ. ಅವರಿಂದಲೇ ನಿಮಗೆ ಇಂದು ಸಂತೋಷ ಪ್ರಾಪ್ತಿಯಾಗುತ್ತದೆ.
ಅಡುಗೆಮನೆಯ ಈ 5 ವಾಸ್ತು ನಿಯಮ ಪಾಲಿಸಿದರೆ ಮನೆಯಲ್ಲಿ ಹೆಚ್ಚಲಿದೆ ಸುಖ-ಸಮೃದ್ಧಿ
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ.ಯಾವುದೇ ಮುಖ್ಯ ನಿರ್ಧಾರ ಇಂದು ಕೈಗೊಳ್ಳಲು ಹೋಗಬೇಡಿ. ಯಾರ ಸಹಕಾರ ನಿಮಗೆ ಸಿಗದೇ ಇರಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮುಖ್ಯವಾದ ಕೆಲಸ ಕಾರ್ಯದಲ್ಲಿ ತೊಂದರೆ ಉಂಟಾಗಬಹುದು. ಯಾವುದೇ ಮುಖ್ಯ ನಿರ್ಧಾರ ಎರಡು ದಿನಗಳವರೆಗೆ ಬೇಡ.
ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಅದೃಷ್ಟದ ದಿನವಾಗಲಿದೆ. ಮಿತ್ರರ ಒಡನಾಟದಿಂದ ನೆಮ್ಮದಿ ಸಿಗುತ್ತದೆ. ಅದೇ ರೀತಿ ಕೆಲಸ ಕಾರ್ಯದಲ್ಲೂ ಜಯ ಸಿಗುತ್ತದೆ.
ಕುಂಭ ರಾಶಿ: ಈ ರಾಶಿಯವರಿಗೆ ಅದೃಷ್ಟದ ದಿನವಾಗಲಿದೆ. ಇಂದು ಕೆಲಸಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಹಾಗೂ ಪ್ರತಿಷ್ಠೆ ಪ್ರಾಪ್ತಿಯಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮುಂದಿನ ದಿನಗಳಿಗೆ ಸರಿಯಾದ ಮಾರ್ಗದರ್ಶನ ಸಿಗುತ್ತದೆ. ಆದರೆ ಎಲ್ಲರ ಜತೆ ಇಂದು ನೀವು ವಿನಯದಿಂದ ವರ್ತಿಸುವುದು ಮುಖ್ಯ.