ದಿನ ಭವಿಷ್ಯ, ಜುಲೈ 29, 2026: ಇಂದು ಉದ್ಯೋಗದಲ್ಲಿ ಹೊಸ ಜವಾಬ್ದಾರಿ; ಹಳೆಯ ಹೂಡಿಕೆಯಿಂದ ಧನ ಲಾಭ
Horoscope Today July 29th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಡ ಮಾಸ, ಶುಕ್ಲ ಪಕ್ಷದ, ಪೂರ್ಣಿಮೆ ತಿಥಿ, ಉತ್ತರಾಷಾಢ ನಕ್ಷತ್ರದ, ಜುಲೈ 29ನೇ ತಾರೀಕಿನ ಈ ದಿನ ಕನ್ಯಾ ರಾಶಿಗೆ ಚಂದ್ರ ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಕೆಲವು ರಾಶಿಗಳ ಮೇಲೆ ಪರಿಣಾಮ ಬೀರಲಿದೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಉತ್ತರಾಷಾಡ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಹೆಗಲೇರಲಿದೆ. ಅದೇ ರೀತಿ ಕುಟುಂಬದ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಬೇಕಾಗುತ್ತದೆ. ತಾಯಿಯ ಆರೋಗ್ಯ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಧೈರ್ಯದಿಂದ ತೆಗೆದುಕೊಂಡ ನಿರ್ಧಾರಗಳಿಗೆ ಯಶಸ್ಸು ಸಿಗುತ್ತದೆ. ಸಹೋದರರು ಹಾಗೂ ಸ್ನೇಹಿತರಿಂದ ಸಹಕಾರ ದೊರೆಯುತ್ತದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಉತ್ತಮ ದಿನ. ಮಾತಿನ ಮೂಲಕ ಯಶಸ್ಸು ಸಿಗಲಿದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಹೆಚ್ಚಿನ ಪ್ರತಿಷ್ಠೆ ನಿಮಗೆ ಪ್ರಾಪ್ತಿಯಾಗಬಹುದು.
ಸಿಂಹ ರಾಶಿ: ಸಿಂಹ ರಾಶಿಯವರು ಇಂದು ಆತುರದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಇಂದು ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ವ್ಯವಹಾರದಲ್ಲಿ ಲಾಭ ಸಿಗಲಿದೆ. ಆದರೆ ಹಿರಿಯರ ಸಲಹೆಗಳನ್ನು ನೀವು ಪಾಲಿಸಬೇಕಾಗುತ್ತದೆ.
ಜೇಡ್ ಸಸ್ಯವನ್ನು ಈ ದಿಕ್ಕಿನಲ್ಲಿ ಇಟ್ಟರೆ ಸಂಪತ್ತು ವೃದ್ಧಿ
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹೊಸ ಅವಕಾಶಗಳು ಅರಸಿ ಬರಬಹುದು. ಹೂಡಿಕೆ ಮಾಡುವ ಮೊದಲು ಸರಿಯಾಗಿ ಪರಿಶೀಲನೆ ಮಾಡಿದರೆ ಉತ್ತಮ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ನಿಮ್ಮ ಪ್ರರಿಶ್ರಮಕ್ಕೆ ತಕ್ಕ ಪ್ರತಿಫಲಗಳು ಸಿಗುತ್ತವೆ. ಆದರೆ ಆರೋಗ್ಯ ಬಗ್ಗೆ ಜಾಗರೂಕರಾಗಿರಿ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹೊಸ ವ್ಯಕ್ತಿಗಳ ಪರಿಚಯ ನಿಮಗೆ ಲಾಭದಾಯಕವಾಗಬಹುದು. ಹಳೆಯ ಹೂಡಿಕೆಯಿಂದ ಧನ ಲಾಭ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕೆಲಸದಲ್ಲಿ ಒತ್ತಡ ಹೆಚ್ಚಾಗಬಹುದು. ಆದರೆ ಸಾಲ ವ್ಯವಹಾರಕ್ಕೆ ಸಂಬಂಧಿಸಿ ನೆಮ್ಮದಿ ಇರಲಿದೆ.
ಕುಂಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದ್ದು, ಇಷ್ಟಾರ್ಥ ಸಿದ್ಧಿಯಾಗಲಿದೆ. ಪ್ರೀತಿ, ದಾಂಪತ್ಯ, ಮಕ್ಕಳ ವಿಚಾರವಾಗಿ ನೆಮ್ಮದಿ ಸಿಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು, ಕುಟುಂಬದ ಜತೆ ಉತ್ತಮ ಸಮಯ ಕಳೆಯುತ್ತೀರಿ.