ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜೂನ್ 18, 2026: ಇಂದು ಸಂಪತ್ತಿನ ಮಹಾಯೋಗ; ಮುಟ್ಟಿದ್ದಲ್ಲ ಚಿನ್ನವಾಗುವ ದಿನ

Horoscope Today June 18th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಚತುರ್ಥಿ ತಿಥಿ, ಪುಷ್ಯ ನಕ್ಷತ್ರದ, ಜೂನ್ 18ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂಟರ್‌ನೆಟ್‌ ಚಿತ್ರ

ಬೆಂಗಳೂರು, ಜೂ. 17: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಪುಷ್ಯ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಈ ರಾಶಿಯವರಿಗೆ ಇಂದು ಆಸ್ತಿ-ಪಾಸ್ತಿ ಹಾಗೂ ಮನೆಯ ವಿಚಾರದತ್ತ ಗಮನ ಹರಿಸಬೇಕಾಗುತ್ತದೆ. ಆದರೆ ಗಜಕೇಸರಿಯೋಗ ಮುಂದುವರಿಯುದರಿಂದ ಪ್ರತಿಷ್ಠಿತ ಸ್ಥಾನಮಾನ ನಿಮಗೆ ಸಿಗಬಹುದು.

ವೃಷಭ ರಾಶಿ: ಈ ರಾಶಿಯವರ ಮನಸ್ಸಿಗೆ ನೆಮ್ಮದಿ ಸಿಗಲಿದ್ದು, ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಮಾಧ್ಯಮದಲ್ಲಿ ಇರೋರಿಗೆ, ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಲಾಭದ ದಿನವಾಗಲಿದೆ.

ಮಿಥುನ ರಾಶಿ: ಇಂದು ಈ ರಾಶಿಯವರ ಮನೆಯಲ್ಲಿ ಶುಭ ಸಮಾರಂಭ ನಡೆಯಬಹುದು. ಹಣಕಾಸಿನ ವಿಚಾರವಾಗಿ ಅನುಕೂಲವಾಗಲಿದೆ. ನಿಮ್ಮ ಸಮಯ ಇಂದು ಬಹಳ ಚೆನ್ನಾಗಿದೆ.

ಕಟಕ ರಾಶಿ: ಕಟಕ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ವೈಯಕ್ತಿಕವಾಗಿ ಕೆಲವು ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ವ್ಯಕ್ತಿತ್ವದಲ್ಲಿ ಕೆಲವೊಂದಿಷ್ಟು ಬದಲಾವಣೆಯನ್ನು ನೀವು ಮಾಡಿಕೊಳ್ಳಬೇಕಾಗುತ್ತದೆ.

ಕರ್ಪೂರದಿಂದ ಮನೆಯ ವಾಸ್ತು ದೋಷ ನಿವಾರಣೆ

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಎಲ್ಲರೂ ಕೂಡ ನಿಮ್ಮನ್ನು ಬಿಟ್ಟು ಹೋಗಲಿದ್ದಾರೆ. ತಾನು ಒಬ್ಬಂಟಿಯಾದೆ ಎನ್ನುವ ಭಾವನೆ ನಿಮ್ಮಲ್ಲಿ ಬರಬಹುದು. ಅದೇ ರೀತಿ ಮುಖ್ಯವಾದ ಸ್ನೇಹ ಸಂಬಂಧದಲ್ಲಿ ಒಡಕು ಉಂಟಾಗಬಹುದು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅದೃಷ್ಟದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಇಷ್ಟಾರ್ಥ ಸಿದ್ಧಿಯಾಗಲಿದ್ದು ಮಿತ್ರರಿಂದ ಧನಾಗಮನವಾಗಲಿದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಯಶಸ್ಸು ಸಿಗಲಿದೆ. ಆದರೆ ಇಂದು ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ.. ಮನಸ್ಸಿಗೆ ನೆಮ್ಮದಿ ಇದ್ದು ಗಜಕೇಸರಿ ಯೋಗದ ಫಲ ನಿಮಗೆ ಇರಲಿದೆ. ಹೆಜ್ಜೆ ಇಟ್ಟಲೆಲ್ಲ ಯಶಸ್ಸು ಕಾಣುತ್ತೀರಿ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ಸಂಬಂಧದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಎಲ್ಲರ ಸಹಕಾರ ಸಿಗುತ್ತದೆ‌. ಪಾರ್ಟನರ್‌ ಶಿಪ್ ವ್ಯವಹಾರದಲ್ಲಿ ಯಶಸ್ಸು.

ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಗಜ‌ಕೇಸರಿ ಯೋಗ ನಿಮಗೆ ಇರಲಿದ್ದು ಶತ್ರುಗಳು ಹಿಮ್ಮೆಟ್ಟಬಹುದು.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮಕ್ಕಳು ಪ್ರಗತಿ ಕಾಣುತ್ತಾರೆ. ಪ್ರೇಮ ಪ್ರಕರಣದಲ್ಲಿ ನೆಮ್ಮದಿ ಸಿಗಲಿದೆ.