ದಿನ ಭವಿಷ್ಯ, ಸೆಪ್ಟೆಂಬರ್ 8, 2026: ಇಂದು ಗಜಕೇಸರಿ ಯೋಗ; ಮುಟ್ಟಿದ್ದೆಲ್ಲ ಚಿನ್ನವಾಗುವ ದಿನ
Horoscope Today September 8th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಕೃಷ್ಣೆಪಕ್ಷದ, ದ್ವಾದಶಿ ತಿಥಿಯ, ಪುಷ್ಯ ನಕ್ಷತ್ರದ ಸೆಪ್ಟೆಂಬರ್ 8ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನೆ ಆಸ್ತಿ-ಪಾಸ್ತಿ ವಿಚಾರವಾಗಿ ಇಂದು ಯಶಸ್ಸು ನಿಮ್ಮದಾಗುತ್ತದೆ. ಕೆಲಸ ಕಾರ್ಯದಲ್ಲೂ ಹೆಚ್ಚಿನ ಜಯ ನೀವು ಕಾಣುತ್ತೀರಿ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಪ್ರೀತಿ ವಿಚಾರದಲ್ಲಿ ನೆಮ್ಮದಿ ಸಿಗುತ್ತದೆ. ಸೋಷಿಯಲ್ ಮೀಡಿಯಾ ಹಾಗೂ ಮಾರ್ಕೆಟಿಂಗ್ ವ್ಯವಹಾರದಲ್ಲಿ ಹೆಚ್ಚಿನ ಲಾಭ ಸಿಗಲಿದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ಆದರೆ ಮನೆಯ ವಿಚಾರವಾಗಿ ಕೆಲವು ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮವಾದ ದಿನವಾಗಿದ್ದು, ಗಜಕೇಸರಿ ಯೋಗ ಇರಲಿದೆ. ದೊಡ್ಡದಾದ ಜವಾಬ್ದಾರಿಯನ್ನು ನೀವಿಂದು ತೆಗೆದುಕೊಳ್ಳುಬೇಕಾದ ಅನಿವಾರ್ಯತೆ ಇದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ವ್ಯಯದಲ್ಲಿ ಚಂದ್ರ ಹಾಗೂ ಗುರು ಇದ್ದಾನೆ. ಹೀಗಾಗಿ ಪಾರ್ಟನರ್‌ಶಿಪ್ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು. ಸ್ನೇಹಿತರ ಜತೆ ಇಂದು ಒಡಕು ಉಂಟಾಗುವ ಸಾಧ್ಯತೆ ಇದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರ ಇಷ್ಟಾರ್ಥ ಸಿದ್ದಿಯಾಗಲಿದ್ದು ನಿಮಗೆ ಬೇಕಾದ ನಿರ್ಧಾರವನ್ನು ಇಂದು ಕೈಗೊಳ್ಳಬಹುದು. ನಿಮ್ಮ ಪ್ರತಿಷ್ಠೆ ಹಾಗೂ ಗೌರವ ಹೆಚ್ಚಾಗಬಹುದು.
ವೈವಾಹಿಕ ಜೀವನದಲ್ಲಿ ನೆಮ್ಮದಿ ಬೇಕಾ? ಬೆಡ್‌ರೂಂನಲ್ಲಿ ಹೀಗಿರಲಿ ವಾಸ್ತು
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕೆಲವೊಂದು ವಿಚಾರದಲ್ಲಿ ನೀವು ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು. ಹಾಗಾಗಿ ಬಹಳ ಎಚ್ಚರಿಕೆಯಿಂದ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಭಾಗ್ಯ ಸ್ಥಾನದಲ್ಲಿ ಗುರು ಇದ್ದಾನೆ. ಹೀಗಾಗಿ ಮುಖ್ಯವಾದ ಕೆಲಸ ಕಾರ್ಯದಲ್ಲಿ ಲಾಭ ಸಿಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಅಷ್ಟಮದಲ್ಲಿ ಗುರು ಹಾಗೂ ಚಂದ್ರ ಇದ್ದಾನೆ. ಕಾರ್ಯಕ್ಷೇತ್ರದಲ್ಲಿ ತೊಂದರೆ ಹಾಗೂ ಸೋಲು ಎದುರಾಗಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ತಿರುವು ಹಾಗೂ ಯಶಸ್ಸು ಸಿಗುತ್ತದೆ.
ಕುಂಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ಕಷ್ಟಗಳೆಲ್ಲಾ ದೂರವಾಗಲಿದೆ. ಶತ್ರುನಾಶವಾಗಲಿದೆ.
ಮೀನ ರಾಶಿ: ಮೀನ ರಾಶಿಯವರಿಗೆ ಪಂಚಮದಲ್ಲಿ ಗುರುವಿದ್ದಾನೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಯಶಸ್ಸು ಸಿಗುತ್ತದೆ. ಆದರೆ ಭಾವುಕತೆಯನ್ನು ಇಂದು ಹತೋಟಿಯಲ್ಲಿಡಬೇಕಾಗುತ್ತದೆ.