ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ ಫೆಬ್ರವರಿ 23, 2026: ಕುಜ ಕುಂಭ ರಾಶಿಗೆ ಪ್ರವೇಶ; ಯಾವ ರಾಶಿಗೆ ಅದೃಷ್ಟ?

Horoscope Today February 23: ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ, ಶರದ್ರುತು, ಫಾಲ್ಗುಣ ಮಾಸ, ಶುಕ್ಷ ಪಕ್ಷದ, ಷಷ್ಠಿ ತಿಥಿ, ಭರಣಿ ನಕ್ಷತ್ರದ ಫೆಬ್ರವರಿ 23ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಇಂಟರ್‌ನೆಟ್‌ ಚಿತ್ರ

ಬೆಂಗಳೂರು, ಫೆ. 23: ವಿಶ್ವವಸು ನಾಮ ಸಂವತ್ಸರದ ಉತ್ತರಾಯಣ, ಶರದ್ರುತು, ಫಾಲ್ಗುಣ ಮಾಸ, ಭರಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಇಂದು ಕುಜ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಇಂದು ಮೇಷ ರಾಶಿಯವರಿಗೆ ಉತ್ತಮವಾದ ದಿನವಾಗಲಿದೆ. ಮಿತ್ರರಿಂದ ಹೆಚ್ಚಿನ ಸಹಕಾರ ನಿಮಗೆ ಸಿಗಬಹುದು. ಧನಾಗಮನ ಆಗಲಿದೆ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗಲಿದೆ. ಎಲ್ಲದರಲ್ಲೂ ಜಯ ಪ್ರಾಪ್ತಿಯಾಗಿ ಅಂದುಕೊಂಡ ಕೆಲಸಗಳು ಪೂರ್ಣಗೊಳ್ಳುತ್ತವೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಕಷ್ಟದ ದಿನವಾಗಲಿದೆ. ತಂದೆಯ ಜತೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ.

ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟ ಗೋಚರವಾಗಲಿದೆ. ಅಷ್ಟಮಕ್ಕೆ ಕುಜ ಬಂದಿರುವುದರಿಂದ ಮನಸ್ಸಿಗೆ ವ್ಯಥೆ ಉಂಟಾಗುವ ಸಾಧ್ಯತೆ ಇದೆ. ಮಾನಸಿಕ ಯೋಚನೆಗಳು ಕೂಡ ಜಾಸ್ತಿಯಾಗಲಿದೆ.

ಸಿಂಹ ರಾಶಿ: ಸಿಂಹ ರಾಶಿಯವರು ಪಾರ್ಟನರ್‌ ಶಿಪ್ ವ್ಯವಹಾರದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಎಚ್ಚರಿಕೆಯಿಂದ ಇರುವುದು ಒಳಿತು.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸು ಸಿಗಲಿದ್ದು, ಕೆಲಸ ಕಾರ್ಯದಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಶತ್ರುಗಳ ಬಗ್ಗೆ ನೀವು ಎಚ್ಚರಿಕೆಯಿಂದ ಇರಬೇಕಾಗುತ್ತದೆ.

ಮನೆಯಲ್ಲಿ ಎಷ್ಟು ಮೆಟ್ಟಿಲುಗಳಿರಬೇಕು? ಸಮ ಸಂಖ್ಯೆ ಇದ್ದರೆ ಒಳ್ಳೆಯದೋ?

ತುಲಾ ರಾಶಿ: ತುಲಾ ರಾಶಿಯವರಿಗೆ ಪಾರ್ಟನರ್‌ ಶಿಪ್ ವ್ಯವಹಾರದಲ್ಲಿ ತೊಂದರೆಯಾಗಬಹುದು‌. ಪ್ರೇಮ, ಪ್ರೀತಿ ವಿಚಾರದಲ್ಲೂ ಬೇಸರ ಉಂಟಾಗುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಆಸ್ತಿ- ಪಾಸ್ತಿ ವಿಚಾರ, ತಾಯಿಯ ಆರೋಗ್ಯ ಬಗ್ಗೆ ಯೋಚನೆಗಳು ಹೆಚ್ಚಾಗಬಹುದು. ಆದ್ದರಿಂದ ಕಾರ್ಯಕ್ಷೇತ್ರದಲ್ಲಿ ಕೂಡ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಕೂಡ ಅದೃಷ್ಟದ ಬಾಗಿಲು ತೆರೆಯಲಿದೆ.‌ ಆರ್ಥಿಕವಾಗಿ ಲಾಭ ಗಳಿಸಲು ಸಾಧ್ಯವಾಗುತ್ತದೆ. ಅತಿ ಹೆಚ್ಚಿನ ಯಶಸ್ಸು ನಿಮ್ಮದಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಮನೆಯ ವಿಚಾರದಲ್ಲಿ ತೊಂದರೆಯಾಗಬಹುದು. ಹಣಕಾಸಿನ ವಿಚಾರವಾಗಿಯೂ ಕಷ್ಟವಾಗುವ ಸಾಧ್ಯತೆ ಇದೆ.

ಕುಂಭರಾಶಿ: ಈ ರಾಶಿಯವರಿಗೆ ಸಿಟ್ಟು ಹೆಚ್ಚಾಗಬಹುದು. ಬೇರೆಯವರಿಂದ ಟೀಕೆ ಜಾಸ್ತಿಯಾಗಬಹುದು. ಅತಿ ಯೋಚನೆ ಮಾಡಿ ನಿರ್ಧಾರ ಮಾಡಬೇಕಾಗುತ್ತದೆ.

ಮೀನ ರಾಶಿ: ಮೀನ ರಾಶಿಗೆ ಉತ್ತಮ ದಿನವಾಗಲಿದೆ. ಆಧ್ಯಾತ್ಮಿಕವಾಗಿ ಯಶಸ್ಸು ಕಾಣುತ್ತೀರಿ. ಹಾಗಾಗಿ ಧ್ಯಾನಾದಿಗಳನ್ನು ಮಾಡುವ ಮೂಲಕ ಸಮಯ ಕಳೆಯಬೇಕು.