ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಮೇ 17, 2026: ಈ ರಾಶಿಯವರಿಗೆ ಇಂದು ಸಾಮಾಜಿಕ ಚಟುವಟಿಕೆಯಲ್ಲಿ ಅತೀ ಹೆಚ್ಚಿನ ಯಶಸ್ಸು!

Horoscope Today May 17th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷದ, ಪ್ರತಿಭಾತಿಥಿ, ಕೃತಿಕಾ ನಕ್ಷತ್ರದ ಮೇ 17ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಈ ರಾಶಿಯವರಿಗೆ ಇಂದು ಶುಭದಾಯಕ ದಿನ!

ಇಂಟರ್‌ನೆಟ್ ಚಿತ್ರ -

Profile
Pushpa Kumari May 17, 2026 7:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಪ್ರತಿಭಾ ತಿಥಿ, ಕೃತಿಕಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಕೃತಿಕಾ ನಕ್ಷತ್ರದ ಅಧಿಪತಿ ರವಿ ಆಗಿದ್ದಾನೆ. ಹಾಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗಲಿದ್ದು ಎಲ್ಲ ಕೆಲಸ ಕಾರ್ಯದಲ್ಲಿ ಅತೀ ಹೆಚ್ಚಿನ ನೆಮ್ಮದಿ ಪ್ರಾಪ್ತಿಯಾಗುತ್ತದೆ.

ವೃಷಭ ರಾಶಿ: ಈ ರಾಶಿಗೆ ಇಂದು ಮಧ್ಯಾಹ್ನವರೆಗೂ ಕಷ್ಟಕರವಾದ ದಿನವಾಗಿದೆ. ಮಧ್ಯಾಹ್ನ ಮೇಲೆ ಎಲ್ಲರ ಸಹಕಾರ ಪ್ರಾಪ್ತಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುವ ದಿನವಾಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮಧ್ಯಾಹ್ನವರೆಗೂ ಇಷ್ಟಾರ್ಥ ಸಿದ್ದಿಯಾಗಲಿದೆ. ಆದರೆ ಮಧ್ಯಾಹ್ನ ಬಳಿಕ ಸಂಸಾರದ ವಿಚಾರದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ ಇರುತ್ತದೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದ ಜವಾಬ್ದಾರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಮಧ್ಯಾಹ್ನ ಬಳಿಕ ಇಷ್ಟಾರ್ಥ ಸಿದ್ದಿಯಾಗಲಿದ್ದು ಶುಭದಾಯಕ ಸುದ್ದಿ ಕೇಳಿ ಬರಬಹುದು‌.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮಧ್ಯಾಹ್ನವರೆಗೂ ಸ್ವಲ್ಪ ಅದೃಷ್ಟ ಪರೀಕ್ಷೆ ನಡೆಯುತ್ತಿರುತ್ತದೆ. ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದ ಜವಾಬ್ದಾರಿಗಳು ಹೆಚ್ಚಾಗುತ್ತವೆ‌.

Vastu Tips: ವಾಸ್ತು ಪ್ರಕಾರ ಮನೆಗೆ ಯಾವ ಬಣ್ಣ ಸೂಕ್ತ? ಜೀವನದಲ್ಲಿ ಬದಲಾವಣೆ ತರುವ ಬಣ್ಣಗಳು ಇವು!

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಮಧ್ಯಾಹ್ನವರೆಗೂ ಮನಸ್ಸಿಗೆ ಆತಂಕಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಮಧ್ಯಾಹ್ನ ಬಳಿಕ ಒಂದು ತಿರುವು ಪ್ರಾಪ್ತಿಯಾಗಿ ಭಾಗ್ಯೋದಯವಾದ ದಿನವಾಗುತ್ತದೆ.

ತುಲಾ ರಾಶಿ: ತುಲಾ ಅವರಿಗೆ ಮಧ್ಯಾಹ್ನವರೆಗೂ ಎಲ್ಲ ಕೆಲಸ ಕಾರ್ಯಗಳು ನಿಮ್ಮ ಇಷ್ಟದ ಪ್ರಕಾರ ನಡೆಯುತ್ತದೆ. ಮಧ್ಯಾಹ್ನ ಬಳಿಕ ತೊಂದರೆಗಳು ಹೆಚ್ಚು ಉದ್ಭವ ಆಗುವ ಸಾಧ್ಯತೆಗಳು ಇರುತ್ತದೆ‌

ವೃಶ್ಚಿಕ ರಾಶಿ: ಮಧ್ಯಾಹ್ನವರೆಗೆ ಸಾಮಾಜಿಕ ಚಟುವಟಿಕೆಯಲ್ಲಿ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿರುತ್ತದೆ. ಮಧ್ಯಾಹ್ನ ಬಳಿಕ ನಿಮ್ಮ ಪ್ರೀತಿ ಪಾತ್ರರ ಜೊತೆ ಸುಖಕರವಾದ ದಿನವನ್ನು ಕಳೆಯುತ್ತೀರಿ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಮಧ್ಯಾಹ್ನವರೆಗೂ ಹೂಡಿಕೆಯ ವಿಚಾರವಾಗಿ ಯೋಚನೆ ಮಾಡಬೇಕಾಗುತ್ತದೆ. ಮಧ್ಯಾಹ್ನ ಬಳಿಕ ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಕಾಣುತ್ತೀರಿ

ಮಕರ ರಾಶಿ: ಮಕರ ರಾಶಿಯವರಿಗೆ ಮಧ್ಯಾಹ್ನವರೆಗೂ ಆಸ್ತಿ ಪಾಸ್ತಿ ವಿಚಾರವಾಗಿ ಹಾಗೂ ತಾಯಿಯ ಆರೋಗ್ಯ ಬಗ್ಗೆ ಜವಾಬ್ದಾರಿ ವಹಿಸಬೇಕಾಗುತ್ತದೆ. ಮಧ್ಯಾಹ್ನ ನಂತರ ಕ್ರಿಯಾಶೀಲತೆಯಿಂದ ಜಯ ಕಾಣುತ್ತೀರಿ.

ಕುಂಭರಾಶಿ: ಈ ರಾಶಿಯವರಿಗೆ ಮಧ್ಯಾಹ್ ವರೆಗೂ ಖುಷಿ ಸಿಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ನಿಮ್ಮ ಸಹೋದರ ಸಹೋದರಿಯರ ಜೊತೆ ಸಮಯ ಕಳೆಯುತ್ತೀರಿ

ಮೀನ ರಾಶಿ: ಮೀನ ರಾಶಿಗೆ ಇಂದು ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಮಾತಿನ ಮೂಲಕ ಜಯ ಕಾಣುತ್ತೀರಿ. ಸಂಸಾರದ ಜೊತೆ ಉತ್ತಮ ಸಮಯ ಕಳೆಯಲಿದ್ದೀರಿ.