ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಸೆಪ್ಟೆಂಬರ್ 7, 2026: ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜೋಪಾನವಾಗಿರಿ!

Horoscope Today September 7th: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಕೃಷ್ಣೆಪಕ್ಷದ, ಏಕಾದಶಿ ತಿಥಿಯ ಸೆಪ್ಟೆಂಬರ್‌ 7ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಇಂಟರ್ ನೆಟ್ ಚಿತ್ರ

ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.

ಮೇಷ ರಾಶಿ: ಈ ರಾಶಿಗೆ ಅತೀ ಉತ್ತಮವಾದ ಗೋಚರ ಇದೆ. ಮಾತು ಹಾಗೂ ಬುದ್ದಿವಂತಿಕೆಯಿಂದ ಎಲ್ಲರನ್ನೂ ಇಂದು ಜಯಿಸುತ್ತೀರಿ‌. ಎಲ್ಲರನ್ನೂ ಮುನ್ನುಗ್ಗಿ ಮುಂದೆ ಹೋಗುತ್ತೀರಿ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟಕರವಾದ  ದಿನವಾಗಿದೆ. ಪ್ರೇಮ,ಪ್ರೀತಿ ವಿಚಾರ ಹಾಗೂ ಹಣಕಾಸಿನ ವಿಚಾರದಲ್ಲಿ ತೊಂದರೆ ಉಂಟಾಗಬಹುದು. ಮನೆಯ ವಿಚಾರದಲ್ಲಿ ಇಂದು ಸ್ವಲ್ಪ ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು‌.

ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು,ಅಭಿವೃದ್ಧಿಯನ್ನು ನೀವು ಕಾಣುತ್ತೀರಿ. ಧನ ಲಾಭ ಹಾಗೂ ಆಸ್ತಿ ಲಾಭದ ಸೂಚನೆಗಳು ಕೂಡ ಇಂದು ಇರುತ್ತವೆ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ತೃತೀಯದಲ್ಲಿ ಬುಧ ಇದ್ದಾನೆ‌. ಮಿತ್ರತ್ವದಲ್ಲಿ ಒಡಕು ಕಾಣುವ ಸಾಧ್ಯತೆ ಹೆಚ್ಚು ಇರುತ್ತದೆ. ಹಾಗಾಗಿ ಮಾತಿನಲ್ಲಿ ಹೆಚ್ಚಿನ ನಿಗಾ ಇದ್ದರೆ ಒಳ್ಳೆಯದು.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ದೊಡ್ಡದಾದ ಸಂಭ್ರಮದ ಕೆಲಸಗಳು ಇಂದು ನಡೆಯಲಿವೆ.‌ ಆರ್ಥಿಕವಾಗಿಯೂ ಇಂದು ಅಭಿವೃದ್ಧಿ ಕಾಣುತ್ತೀರಿ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ಗೋಚರ ಇಂದು ಇರುತ್ತದೆ. ಹೀಗಾಗಿ ಇಂದು ಮಾತಿನಿಂದ ತೊಂದರೆ ಹಾಗೂ ಇತರರ ಜೊತೆ ನಿಷ್ಠುರ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು ಇರುತ್ತದೆ.

ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕೆಲವೊಂದು ವಿಚಾರದಲ್ಲಿ ಸರಿಯಾದ ಪರಿಶೀಲನೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.

Vastu Tips: ಲಿವಿಂಗ್ ರೂಮ್ ವಾಸ್ತು: ಮನೆಗೆ ಸುಖ, ಸಮೃದ್ಧಿ ತರಲು ಪಾಲಿಸಬೇಕಾದ ಪ್ರಮುಖ ನಿಯಮಗಳು

ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಮುಖ್ಯವಾದ ಕೆಲಸ ಕಾರ್ಯದಲ್ಲಿ ಅತೀ ಹೆಚ್ಚಿನ ಲಾಭ ಸಿಗುತ್ತದೆ. ಅವಕಾಶಗಳು ಇಂದು ಹೆಚ್ಚಾಗಿ ಸಿಗುತ್ತವೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಬೇರೆಯವರಿಂದ ಸಹಕಾರ, ನೆಮ್ಮದಿ ನಿಮಗೆ ಸಿಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರದಿನವಾಗಿದೆ. ಅದೃಷ್ಟ ಪರೀಕ್ಷೆ ನಡೆಯುತ್ತಿದ್ದು ಹೆಚ್ಚಿನ ತೊಂದರೆಯನ್ನು ಎದುರಿಸಬೇಕಾಗುತ್ತದೆ.

‌ಕುಂಭ ರಾಶಿ: ಈ ರಾಶಿಗೆ ಇಂದು ಉತ್ತಮ ವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ಕಷ್ಟಗಳೆಲ್ಲಾ ದೂರವಾಗಲಿದೆ‌. ಕೆಲಸ ಕಾರ್ಯದಲ್ಲಿ ಬಾಸ್ ಗಳಿಂದ ಪ್ರಶಂಸೆ ಪ್ರಾಪ್ತಿಯಾಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ‌. ಕೋರ್ಟ್, ಕಛೇರಿ ವ್ಯವಹಾರದಲ್ಲಿ ಜಾಗೃತಿ ಅಗತ್ಯ‌. ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ತೊಂದರೆ ಎದುರಾಗಬಹುದು.