ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು ಚೈತ್ರ ಮಾಸೆ, ಉತ್ತರ ಫಾಲ್ಗುಣ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಉತ್ತರ ಫಾಲ್ಗುಣ ನಕ್ಷತ್ರದ ಅಧಿಪತಿ ರವಿ ಆಗಿದ್ದಾನೆ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮೇಷ ರಾಶಿಗೆ ಬಿಸೆನೆಸ್ ವ್ಯವಹಾರದಲ್ಲಿ ಸ್ವಲ್ಪ ತೊಂದರೆಯಾಗಬಹುದು. ಹಣ ಕಾಸಿನ ವಿಚಾರವಾಗಿಯೂ ನೀವ ಸ್ಪಲ್ಪ ಜಾಸ್ತಿ ಗಮನ ಕೊಡಬೇಕಾಗಿ ಬರಬಹುದು.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ತಾಯಿಯ ಜೊತೆ ಇಂದು ಜಗಳ ಉಂಟಾಗುವ ಸಾಧ್ಯತೆ ಇರುತ್ತದೆ. ಆಸ್ತಿ, ಕೋರ್ಟ್ ವಿಚಾರದಲ್ಲಿ ತೊಂದರೆಯಾಗುವ ಸಾಧ್ಯತೆಗಳು ಕೂಡ ಇರುತ್ತದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಲಾಭ ಉಂಟಾಗಲಿದೆ. ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಅತೀ ಹೆಚ್ಚಿನ ಪ್ರಗತಿ ಸಿಗುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಸಂಸಾರದ ತಾಪತ್ರಯಗಳು ಜಾಸ್ತಿಯಾಗುತ್ತವೆ. ನಿಮ್ಮ ಮನೆಯಲ್ಲಿ ಕೂಡ ಹೆಚ್ಚಿನ ಜವಾಬ್ದಾರಿಯನ್ನು ನೀವು ನೀಡಬೇಕಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ನಿಮ್ಮ ರಾಶಿಗೆ ಚಂದ್ರ ಬಂದಿರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ.ಹಿಂದಿನ ಎರಡು ಮೂರು ದಿನಗಳ ತೊಂದರೆ ಎಲ್ಲವೂ ಬಗೆಹರಿಯುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ನಿಮ್ಮ ಮನೆಯಲ್ಲಿ ಸ್ವಲ್ಪ ತೊಂದರೆ ಉಂಟಾಗಬಹುದು. ಬೇರೆಯವರು ನಿಮ್ಮೊಂದಿಗೆ ಯಾವುದೇ ಸಹಕಾರ ನೀಡದೇ ಇರಬಹುದು.
Vastu Tips: ಮನೆಯಲ್ಲಿ ಧನ, ಸಮೃದ್ಧಿ ಹಾಗೂ ಸಕಾರಾತ್ಮಕ ಶಕ್ತಿ ಹೆಚ್ಚಾಗಬೇಕಾ..?; ಹಾಗಾದ್ರೆ ಈ ವಾಸ್ತು ನಿಯಮ ಪಾಲಿಸಿ
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆದೇ ರೀತಿ ಮಿತ್ರರಿಂದ ಧನ ಆಗಮನ ಕೂಡ ಆಗುತ್ತದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಭಾಗ್ಯೋದಯವಾದ ದಿನವಾಗಿದೆ.. ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ.ಆದರೆ ಜವಾಬ್ದಾರಿಗಳು ಜಾಸ್ತಿಯಾಗುತ್ತವೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಮನಸ್ಸಿಗೆ ನೆಮ್ಮದಿ ಇದ್ದು ಭಾಗ್ಯೋದಯವಾದ ದಿನವಾಗಿದೆ. ಹಿರಿಯರ ಆಶೀರ್ವಾದ ಕೂಡ ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಆದರೆ ನಿಮ್ಮ ಮುಖ್ಯ ಸ್ನೇಹಿತರ ಜೊತೆ ಇರಿಸು ಕಾಣಬಹುದು. ಹಾಗಾಗಿ ಜಾಗರೂಕತೆಯಿಂದ ನಿರ್ಧಾರ ಕೈಗೊಳ್ಳಬೇಕು.
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ದಾಂಪತ್ಯದಲ್ಲಿ ,ಬಿಸೆನೆಸ್ ವ್ಯವಹಾರದಲ್ಲೂ ಯಶಸ್ಸು.
ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ.. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು, ಆತ್ಮವಿಶ್ವಾಸ ಕೂಡ ಚೆನ್ನಾಗಿ ಇರುತ್ತದೆ.