ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಜುಲೈ 17, 2026: ಇಂದು ತ್ರಿಗ್ರಹ ಸಂಚಾರ: ಅದ್ಭುತ ಯಶಸ್ಸು ನಿಮ್ಮದಾಗುವ ದಿನ

Horoscope Today July 17th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಷ ಪಕ್ಷದ, ಪುಬ್ಬಾ ನಕ್ಷತ್ರದ ಜುಲೈ 17ನೇ ತಾರೀಕಿನ  ಈ ದಿನ ಸಿಂಹ ರಾಶಿಯಲ್ಲಿ ಶುಕ್ರ, ಕೇತು ಹಾಗೂ ಚಂದ್ರನ ತ್ರಿಗ್ರಹದ ಸಂಚಾರ ಇದೆ. ಹೀಗಾಗಿ ಹೊಸ ಮನೆ ಖರೀದಿ, ಹೊಸ ಕೆಲಸ ಹಾಗೂ ಮದುವೆ ಮಾತುಕತೆಗೆ ಶುಭ ಕಾಲ.

ಇಂದು ಆದಾಯದ ಮೂಲಗಳು ಹೆಚ್ಚಾಗಲಿವೆ

ಇಂಟರ್‌ನೆಟ್ ಚಿತ್ರ -

Profile
Pushpa Kumari Jul 17, 2026 6:00 AM

ಬೆಂಗಳೂರು: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಶ್ರಾವಣಮಾಸ, ಶುಕ್ಲ ಪಕ್ಷದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಯವರ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.

ಮೇಷ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಜವಾಬ್ದಾರಿಗಳು ಹೆಚ್ಚಾಗಬಹುದು. ಆದರೆ ಹಣಕಾಸಿನ ವ್ಯವಹಾರದಲ್ಲಿ ನೀವು ಎಚ್ಚರಿಕೆ ವಹಿಸಬೇಕಾಗುತ್ತದೆ.

ವೃಷಭ ರಾಶಿ: ಈ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಬಹು ಸಮಯದಿಂದ ಕನಸು ಕಂಡ ಕೆಲಸಕ್ಕೆ ಇಂದು ನನಸಾಗಲಿದೆ. ವ್ಯಾಪಾರ ಹಾಗೂ ವ್ಯವಹಾರದಲ್ಲಿ ಯಶಸ್ಸು ಕಾಣುತ್ತೀರಿ.

ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಮಾತಿನ ಮೂಲಕವೇ ಯಶಸ್ಸು ಸಿಗಬಹುದು. ಸ್ನೇಹ ಸಂಬಂಧದಲ್ಲಿ ಹೆಚ್ಚಿನ ಸಹಕಾರ ಸಿಗಲಿದೆ. ಆದರೆ ಅನಗತ್ಯ ಖರ್ಚು ತಪ್ಪಿಸಿ.

ಕಟಕ ರಾಶಿ: ಕಟಕ ರಾಶಿಯವರು ಇಂದು ಉದ್ಯೋಗದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಅದೇ ರೀತಿ ಕುಟುಂಬದಲ್ಲೂ ನೆಮ್ಮದಿ ಇರಲಿದ್ದು ಖುಷಿಯಿಂದ ದಿನ ಕಳೆಯುತ್ತೀರಿ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ವ್ಯವಹಾರದಲ್ಲಿ ಲಾಭ ಸಿಗುತ್ತದೆ‌. ಆದರೆ ಇಂದು ಹೂಡಿಕೆ ಮಾಡುವ ಮುನ್ನ ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನವಾಗಿದ್ದು ಯಶಸ್ಸು ಕಾಣುತ್ತೀರಿ‌.

ಜೇಡ್‌ ಸಸ್ಯವನ್ನು ಈ ದಿಕ್ಕಿನಲ್ಲಿ ಇಟ್ಟರೆ ಸಂಪತ್ತು ವೃದ್ಧಿ! ವಾಸ್ತು ನಿಯಮ ಇದು

ತುಲಾ ರಾಶಿ: ಈ ರಾಶಿಯವರಿಗೆ ಇಂದು ಹೊಸ ವ್ಯವಹಾರದಲ್ಲಿ ಲಾಭ ಉಂಟಾಗುವ ಸಾಧ್ಯತೆ ಇದೆ. ಕುಟುಂಬದಲ್ಲೂ ಶುಭ- ಸಮಾರಂಭಗಳು ನಡೆಯಲಿದೆ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉದ್ಯೋಗದಲ್ಲಿ ಹೊಸ ಸವಾಲು ಎದುರಾಗಬಹುದು. ಆದರೆ ಆತ್ಮವಿಶ್ವಾಸ ಇದ್ದರೆ ಗೆಲುವು ನಿಮ್ಮದಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ವೃತ್ತಿ ಹಾಗೂ ವ್ಯವಹಾರದಲ್ಲಿ ಯಶಸ್ಸು ಕಾಣುತ್ತೀರಿ. ಆದರೆ ಹಿರಿಯರ ಸಲಹೆ ಪಡೆಯಲು ಮರೆಯದಿರಿ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಉದ್ಯೋಗದಲ್ಲಿ ಪ್ರಗತಿ ಹಾಗೂ ಕುಟುಂಬ ಸದಸ್ಯರ ಸಹಕಾರ ಸಿಗಲಿದೆ.

ಕುಂಭ ರಾಶಿ: ಇಂದು ಉತ್ತಮವಾದ ದಿನವಾಗಲಿದೆ. ಸೃಜನಶೀಲ ಕೆಲಸದಲ್ಲಿ ನಿಮಗೆ ಯಶಸ್ಸು ಸಿಗುತ್ತದೆ. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.

ಮೀನ ರಾಶಿ: ಮೀನ ರಾಶಿಯವರಿಗೆ ಇಂದು  ನೆಮ್ಮದಿ ಸಿಗಲಿದ್ದು ಉದ್ಯೋಗ ಹಾಗೂ ವ್ಯವಹಾರದಲ್ಲಿ ಯಶಸ್ಸು ಕಾಣುತ್ತೀರಿ. ಕುಟುಂಬದಲ್ಲಿ ಖುಷಿ ಹಾಗೂ ನೆಮ್ಮದಿ ಸಿಗುತ್ತದೆ.