ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಜುಲೈ 19, 2026: ಇಂದು ಮನಸ್ಸಿಗೆ ನೆಮ್ಮದಿ, ಇಷ್ಟಾರ್ಥ ಸಿದ್ಧಿ

Horoscope Today July 19th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ, ಪಂಚಮಿ ತಿಥಿ, ಉತ್ತರ ಫಾಲ್ಗುಣಿ ನಕ್ಷತ್ರದ ಜುಲೈ 19ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಇಂಟರ್‌ನೆಟ್ ಚಿತ್ರ

ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಉತ್ತರ ಫಾಲ್ಗುಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಇಂದು ಗುರು ಪುಷ್ಯ ರಾಶಿಯನ್ನು ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನ ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಯವರಿಗೆ ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಆದರೆ ಸಂಸಾರದದಲ್ಲಿ ಹಾಗೂ ದಾಂಪತ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ವೃಷಭ ರಾಶಿ: ಈ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಆಸ್ತಿ ಪಾಸ್ತಿ ವಿಚಾರ ಹಾಗೂ ತಾಯಿಯ ಆರೋಗ್ಯ ಬಗ್ಗೆ ಗಮನ ನೀಡಬೇಕಾಗುತ್ತದೆ. ತೋಟಗಾರಿಗೆ, ಕೃಷಿಯಲ್ಲಿ ಕೆಲಸ ಮಾಡೋರಿಗೆ ಪ್ರಗತಿ.

ಮಿಥುನ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಲಾಭ ದೊರೆಯಲಿದೆ. ಸೇಲ್ಸ್ ಮಾರ್ಕೆಟಿಂಗ್ ಹಾಗೂ ಮಾತಿನ ಮೂಲಕ ಆರ್ಥಿಕ ಲಾಭ ಗಳಿಸುತ್ತೀರಿ.

ಕಟಕ ರಾಶಿ: ಕಟಕ ರಾಶಿಯವರಿಗೆ ಚಂದ್ರ ಬಂದಿರುವುದರಿಂದ ಸ್ವಲ್ಪ ತೊಂದರೆ ಕಾಡಬಹುದು. ವೈಯಕ್ತಿಕ ವಿಚಾರದಲ್ಲಿ ಕೆಲವೊಂದು ಸಮಸ್ಯೆ ಎದುರಾಗಬಹುದು.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ನಿಮ್ಮ ಸ್ನೇಹ ಸಂಬಂಧದಲ್ಲಿ ತೊಂದರೆ ಎದುರಾಗಬಹುದು.

ಮನೆ ಖರೀದಿಸುವ ಮುನ್ನ ಈ ವಾಸ್ತು ನಿಯಮಗಳನ್ನು ತಿಳಿಯಿರಿ

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಸಂಬಂಧದಲ್ಲಿ ಒಡಕು ಕಾಣುವ ಸಾಧ್ಯತೆ ಇದೆ. ಕೆಲಸ ಕಾರ್ಯದಲ್ಲೂ ತೊಂದರೆ ಎದುರಾಗಬಹುದು.

ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಬಹುದು ಹಾಗೂ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಅದೇ ರೀತಿ ಅಂದುಕೊಂಡ ಕೆಲಸದಲ್ಲಿ ಜಯ ಕಾಣುತ್ತೀರಿ. ಪ್ರಣಯ ಸಂಬಂಧದಲ್ಲಿ ಜಯ ಲಭಿಸುವುದಿಲ್ಲ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡ ಪ್ರಗತಿ ಕಾಣುತ್ತೀರಿ. ‌ಅದೇ ರೀತಿ ಆರ್ಥಿಕವಾಗಿ ಯಶಸ್ಸು ಗಳಿಸುತ್ತೀರಿ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ಧಿಯಾಗುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ, ಕಾರ್ಯಕ್ಷೇತ್ರದಲ್ಲಿ ತೊಂದರೆ ಎದುರಾಗಬಹುದು.

ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಹಾಗೂ ದಾಂಪತ್ಯದಲ್ಲಿ ನೆಮ್ಮದಿ ಸಿಗುತ್ತದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರುನಾಶವಾಗಲಿದೆ. ಕೆಲಸ ಕಾರ್ಯದಲ್ಲೂ ಯಶಸ್ಸು ಗಳಿಸುತ್ತೀರಿ.