ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಂತ್ರಾಲಯದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ 14ನೇ ಚಾತುರ್ಮಾಸ್ಯ ದೀಕ್ಷೆ ಆರಂಭ

: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಮಂತ್ರಾಲಯದಲ್ಲಿ ತಮ್ಮ 14ನೇ ಚಾತುರ್ಮಾಸ್ಯ ದೀಕ್ಷೆಯನ್ನು ಭಕ್ತಿಪೂರ್ವಕವಾಗಿ ಆರಂಭಿಸಿದರು. ಚಾತುರ್ಮಾಸ್ಯ ಅವಧಿಯಲ್ಲಿ ಮಂತ್ರಾಲಯದ ಶ್ರೀಮಠದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮಂತ್ರಾಲಯದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ 14ನೇ ಚಾತುರ್ಮಾಸ್ಯ ದೀಕ್ಷೆ ಆರಂಭ

ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಮಂತ್ರಾಲಯದಲ್ಲಿ ತಮ್ಮ 14ನೇ ಚಾತುರ್ಮಾಸ್ಯ ದೀಕ್ಷೆಯನ್ನು ಭಕ್ತಿಪೂರ್ವಕವಾಗಿ ಆರಂಭಿಸಿದರು. ಈ ಪವಿತ್ರ ಸಂದರ್ಭದಲ್ಲಿ ಶ್ರೀ ಸ್ವಾಮೀಜಿಯವರು ಸಾಂಪ್ರದಾಯಿಕ ಚಾತುರ್ಮಾಸ್ಯ ದೀಕ್ಷೆಯ ವಿಧಿ-ವಿಧಾನಗಳನ್ನು ನೆರವೇರಿಸಿ, ಶ್ರೀ ರಾಘವೇಂದ್ರ ಸ್ವಾಮಿಗಳವರು, ಶ್ರೀ ವಾದೀಂದ್ರ ತೀರ್ಥರು ಹಾಗೂ ಮಠದಲ್ಲಿರುವ ಎಲ್ಲಾ ಬೃಂದಾವನಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚಾತುರ್ಮಾಸ್ಯ ಅವಧಿಯಲ್ಲಿ ಮಂತ್ರಾಲಯದ ಶ್ರೀಮಠದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳು ಭಕ್ತರಲ್ಲಿ ಧಾರ್ಮಿಕ ಭಾವನೆ, ಆಧ್ಯಾತ್ಮಿಕ ಚಿಂತನೆ ಹಾಗೂ ಸೇವಾ ಮನೋಭಾವವನ್ನು ಹೆಚ್ಚಿಸುವುದರ ಜೊತೆಗೆ ಮಂತ್ರಾಲಯದ ಭಕ್ತಿಮಯ ವಾತಾವರಣವನ್ನು ಮತ್ತಷ್ಟು ಶ್ರೀಮಂತಗೊಳಿಸಲಿವೆ.

WhatsApp Image 2026-08-10 at 7.28.46 AM

ಶ್ರೀ ರಾಘವೇಂದ್ರ ಸ್ವಾಮಿ ಮಂತ್ರಾಲಯ ಶಾಖಾ ಮಠ ನಿರ್ಮಾಣಕ್ಕೆ ಉಚಿತ ಜಾಗ ನೀಡಿದ ದಂಪತಿ

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಭಕ್ತರನ್ನು ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದರು. ಭಕ್ತರಿಗೆ ಆಶೀರ್ವಚನ ನೀಡಿ, ಚಾತುರ್ಮಾಸ್ಯದ ಮಹತ್ವ ಹಾಗೂ ಆಧ್ಯಾತ್ಮಿಕ ಆಚರಣೆಗಳ ಕುರಿತು ಸಂದೇಶ ನೀಡಿದರು. ಚಾತುರ್ಮಾಸ್ಯ ದೀಕ್ಷೆಯ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಆಗಮಿಸಿದ ಭಕ್ತರು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.

Vishakha Bhat Heggar

View all posts by this author