ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಿನ ಭವಿಷ್ಯ, ಮಾರ್ಚ್ 1, 2026: ಬುಧನ‌ ಕೃಪೆಯಿಂದ ಇಂದು ವೃತ್ತಿ, ಆರ್ಥಿಕ, ವೈಯಕ್ತಿಕ ಜೀವನದಲ್ಲಿ ನೆಮ್ಮದಿ

Horoscope Today March 1: ಇಂದು ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಶರದೃತು ಫಾಲ್ಗುಣ ಮಾಸೆ, ಶುಕ್ಷ ಪಕ್ಷ, ಚತುರ್ದಶಿ ತಿಥಿ, ಆಶ್ಲೇಷಾ ನಕ್ಷತ್ರದ ಮಾರ್ಚ್ 1ನೇ ತಾರೀಖಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಇಂಟರ್‌ನೆಟ್ ಚಿತ್ರ

ಬೆಂಗಳೂರು, ಮಾರ್ಚ್‌ 1: ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಆಶ್ಲೇಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯ ಹೇಗಿದೆ? ಯಾರಿಗೆ ಶುಭಫಲ ಸಿಗಲಿದೆ? ಯಾರು ಎಚ್ಚರಿಕೆ ವಹಿಸಬೇಕು? ಎನ್ನುವುದರ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ಇಂದು ಆಶ್ಲೇಷಾ ನಕ್ಷತ್ರ ಇದ್ದು, ಅಧಿಪತಿ ಬುಧ.‌ ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂದು ಮೇಷ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ತಾಯಿಯ ಆರೋಗ್ಯ ಹಾಗೂ ಆಸ್ತಿ ಪಾಸ್ತಿ ವಿಚಾರವಾಗಿ ತೊಂದರೆಯಾಗಬಹುದು.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಇರೋರಿಗೆ ಲಾಭ ದೊರೆಯಲಿದೆ.‌ ಸೇಲ್ಸ್, ಮಾರ್ಕೆಟಿಂಗ್ ವ್ಯವಹಾರದಲ್ಲೂ ಲಾಭ ಗಳಿಸುತ್ತೀರಿ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಮನೆಯಲ್ಲಿ ನೆಮ್ಮದಿ ಇರುತ್ತದೆ. ಮನೆಯವರ ಜತೆ ಇಂದು ನೀವು ಸರಿಯಾಗಿ ನಡೆದುಕೊಂಡರೆ ಖುಷಿಯಾಗಿ ದಿನವನ್ನು ಕಳೆಯಬಹುದು.

ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದ್ದು, ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ಮನಸ್ಸಿನ ನೋವಿಗೆ ಪರಿಹಾರ ದೊರೆಯಲಿದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.

ತಪ್ಪಿಯೂ ಅಡುಗೆಮನೆಯಲ್ಲಿ ಇಂತಹ ಕೆಲಸ ಮಾಡಬೇಡಿ

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಎಲ್ಲ ಕಡೆಯಿಂದ ನೆಮ್ಮದಿ ಕಾಣಬಹುದು.

ತುಲಾ ರಾಶಿ: ತುಲಾ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಬಹುದು. ಆದರೆ ಜವಾಬ್ದಾರಿಗಳು ಹೆಚ್ಚಾಗಬಹುದು.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ಫಲ ಗೋಚರವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ಆದ್ದರಿಂದ ಇಂದು ನಿಮ್ಮ ಪ್ರತಿಷ್ಠೆ ಹೆಚ್ಚಾಗಬಹುದು.

ಧನಸ್ಸು ರಾಶಿ: ಧನಸ್ಸು ರಾಶಿ ಅವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ಕೆಲಸ ಕಾರ್ಯಗಳು ಇಂದು ಬೇಡ. ನಿಮ್ಮ ಸ್ನೇಹಿತರು ನಿಮಗೆ ಸಹಕಾರ ನೀಡದೆ ಇರಬಹುದು.

ಮಕರ ರಾಶಿ: ಮಕರ ರಾಶಿಯವರಿಗೆ ಅತ್ಯುತ್ತಮ ಫಲ ಗೋಚರವಾಗಲಿದೆ. ಎಲ್ಲ ರೀತಿಯಲ್ಲೂ ನೆಮ್ಮದಿ. ದಾಂಪತ್ಯದಲ್ಲಿ ಖುಷಿ ಸಿಗಲಿದೆ.

ಕುಂಭರಾಶಿ: ಈ ರಾಶಿಯವರಿಗೆ ನೆಮ್ಮದಿ ಇದ್ದು ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗಲಿದೆ. ಕೆಲಸ ಕಾರ್ಯದಲ್ಲಿ ಪ್ರತಿಷ್ಠೆ ಗಳಿಸುತ್ತೀರಿ.

ಮೀನ ರಾಶಿ: ಮೀನ ರಾಶಿಗೆ ಇಂದು ಬುದ್ದಿವಂತಿಕೆಯಿಂದ ಕೆಲಸ ಮಾಡಿದರೆ ಉತ್ತಮ ಫಲ ದೊರೆಯಲಿದೆ. ಆದರೆ ಇಂದು ನಿಮ್ಮ‌ ಭಾವುಕತೆ ಹೆಚ್ಚಾಗಬಹುದು.