ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಆಗಸ್ಟ್‌ 16, 2026: ಇಂದು ಅಂದುಕೊಂಡ ಕೆಲಸದಲ್ಲಿ ಯಶಸ್ಸು

Horoscope Today August 16th: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಚತುರ್ಥಿ ತಿಥಿ , ಹಸ್ತ ನಕ್ಷತ್ರದ ಆಗಸ್ಟ್ 16ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಈ ರಾಶಿಯವರಿಗೆ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯತೆ

ಇಂಟರ್‌ನೆಟ್ ಚಿತ್ರ -

Profile
Pushpa Kumari Aug 16, 2026 6:02 AM

ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಹಸ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.

ಮೇಷ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಲ್ಲಿದ್ದು, ಕೆಲಸ ಕಾರ್ಯದಲ್ಲಿ ಯಶಸ್ಸು ಕಾಣುತ್ತೀರಿ. ಆರೋಗ್ಯದಲ್ಲೂ ಸುಧಾರಣೆ ಕಂಡು ಬರಲಿದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮುಖ್ಯವಾದ ಕೆಲಸ ಕಾರ್ಯದಲ್ಲಿ ಹಾಗೂ ಹಣಕಾಸಿನ ವಿಚಾರವಾಗಿ ತೊಂದರೆ ಎದುರಾಗಬಹುದು. ಅದೇ ರೀತಿ ಪ್ರೀತಿ- ಪ್ರೇಮ‌ ವಿಚಾರದಲ್ಲೂ ಬೇಸರ ಉಂಟಾಗಬಹುದು.

ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಆದರೆ ತಾಯಿಯ ಆರೋಗ್ಯ ಹಾಗೂ ಮನೆಯಲ್ಲಿನ ತೊಂದರೆಯ ಬಗ್ಗೆ ಯೋಚಿಸಬೇಕಾಗುತ್ತದೆ.

ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಲಾಭ ಕಂಡು ಬರಲಿದೆ. ಮುಖ್ಯವಾದ ಕೆಲಸದಲ್ಲಿ ಸಹಕಾರ ಪ್ರಾಪ್ತಿಯಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪ್ರೀತಿ ಪಾತ್ರರ ಸಹಕಾರ ಕೂಡ ಇಂದು ಪ್ರಾಪ್ತಿಯಾಗುತ್ತದೆ. ಮನೆಯಲ್ಲಿ ಕೂಡ ನೆಮ್ಮದಿಯ ವಾತಾವರಣ ಪ್ರಾಪ್ತಿಯಾಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಎಲ್ಲವೂ ಇಂದು ಬಗೆಹರಿಯುತ್ತದೆ. ಮುಂದಿನ ಕೆಲಸ ಕಾರ್ಯಕ್ಕೆ ಉತ್ತಮ ಮಾರ್ಗದರ್ಶನ ಕೂಡ ಪ್ರಾಪ್ತಿಯಾಗುತ್ತದೆ.

ಜೇಡ್‌ ಸಸ್ಯವನ್ನು ಈ ದಿಕ್ಕಿನಲ್ಲಿ ಇಟ್ಟರೆ ಸಂಪತ್ತು ವೃದ್ಧಿ!

ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮಿತ್ರತ್ವದಲ್ಲಿ ಹಾಗೂ ಮುಖ್ಯವಾದ ವಿಚಾರವಾಗಿ ಯಾರ ಸಹಕಾರ ಇರುವುದಿಲ್ಲ.

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಕೆಲಸ ಕಾರ್ಯದಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಸೋಷಿಯಲ್ ಮೀಡಿಯಾ, ವ್ಯವಹಾರದಲ್ಲಿ ಇರೋರಿಗೆ ಲಾಭವಾಗಲಿದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಅದೃಷ್ಟದ ದಿನವಾಗಲಿದೆ. ಇಂದು ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗಲಿದ್ದು, ಪ್ರಗತಿ ಕಾಣುತ್ತೀರಿ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ. ಆದೇ ರೀತಿ ಹಿರಿಯರ ಹಾಗೂ ಭಗವಂತನ ಆಶೀರ್ವಾದ ಪ್ರಾಪ್ತಿಯಾಗುತ್ತದೆ.

ಕುಂಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅದೇ ರೀತಿ ಪ್ರೀತಿ ಪಾತ್ರರಿಂದ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಸಹಕಾರ ಪ್ರಾಪ್ತಿಯಾಗುತ್ತದೆ. ಕೈ ಹಾಕಿದ ಎಲ್ಲ ಕೆಲಸದಲ್ಲೂ ಯಶಸ್ಸು ಸಿಗುತ್ತದೆ.