ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಹಸ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.
ಮೇಷ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಲ್ಲಿದ್ದು, ಕೆಲಸ ಕಾರ್ಯದಲ್ಲಿ ಯಶಸ್ಸು ಕಾಣುತ್ತೀರಿ. ಆರೋಗ್ಯದಲ್ಲೂ ಸುಧಾರಣೆ ಕಂಡು ಬರಲಿದೆ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಮುಖ್ಯವಾದ ಕೆಲಸ ಕಾರ್ಯದಲ್ಲಿ ಹಾಗೂ ಹಣಕಾಸಿನ ವಿಚಾರವಾಗಿ ತೊಂದರೆ ಎದುರಾಗಬಹುದು. ಅದೇ ರೀತಿ ಪ್ರೀತಿ- ಪ್ರೇಮ ವಿಚಾರದಲ್ಲೂ ಬೇಸರ ಉಂಟಾಗಬಹುದು.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಆದರೆ ತಾಯಿಯ ಆರೋಗ್ಯ ಹಾಗೂ ಮನೆಯಲ್ಲಿನ ತೊಂದರೆಯ ಬಗ್ಗೆ ಯೋಚಿಸಬೇಕಾಗುತ್ತದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಇರೋರಿಗೆ ಲಾಭ ಕಂಡು ಬರಲಿದೆ. ಮುಖ್ಯವಾದ ಕೆಲಸದಲ್ಲಿ ಸಹಕಾರ ಪ್ರಾಪ್ತಿಯಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪ್ರೀತಿ ಪಾತ್ರರ ಸಹಕಾರ ಕೂಡ ಇಂದು ಪ್ರಾಪ್ತಿಯಾಗುತ್ತದೆ. ಮನೆಯಲ್ಲಿ ಕೂಡ ನೆಮ್ಮದಿಯ ವಾತಾವರಣ ಪ್ರಾಪ್ತಿಯಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಎಲ್ಲವೂ ಇಂದು ಬಗೆಹರಿಯುತ್ತದೆ. ಮುಂದಿನ ಕೆಲಸ ಕಾರ್ಯಕ್ಕೆ ಉತ್ತಮ ಮಾರ್ಗದರ್ಶನ ಕೂಡ ಪ್ರಾಪ್ತಿಯಾಗುತ್ತದೆ.
ಜೇಡ್ ಸಸ್ಯವನ್ನು ಈ ದಿಕ್ಕಿನಲ್ಲಿ ಇಟ್ಟರೆ ಸಂಪತ್ತು ವೃದ್ಧಿ!
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮಿತ್ರತ್ವದಲ್ಲಿ ಹಾಗೂ ಮುಖ್ಯವಾದ ವಿಚಾರವಾಗಿ ಯಾರ ಸಹಕಾರ ಇರುವುದಿಲ್ಲ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಕೆಲಸ ಕಾರ್ಯದಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಸೋಷಿಯಲ್ ಮೀಡಿಯಾ, ವ್ಯವಹಾರದಲ್ಲಿ ಇರೋರಿಗೆ ಲಾಭವಾಗಲಿದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಅದೃಷ್ಟದ ದಿನವಾಗಲಿದೆ. ಇಂದು ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಸಿಗಲಿದ್ದು, ಪ್ರಗತಿ ಕಾಣುತ್ತೀರಿ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ. ಆದೇ ರೀತಿ ಹಿರಿಯರ ಹಾಗೂ ಭಗವಂತನ ಆಶೀರ್ವಾದ ಪ್ರಾಪ್ತಿಯಾಗುತ್ತದೆ.
ಕುಂಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅದೇ ರೀತಿ ಪ್ರೀತಿ ಪಾತ್ರರಿಂದ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಸಹಕಾರ ಪ್ರಾಪ್ತಿಯಾಗುತ್ತದೆ. ಕೈ ಹಾಕಿದ ಎಲ್ಲ ಕೆಲಸದಲ್ಲೂ ಯಶಸ್ಸು ಸಿಗುತ್ತದೆ.