ಬೆಂಗಳೂರು, ಮಾ. 4: ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ ಶರದೃತು, ಫಾಲ್ಗುಣ ಮಾಸದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರಿಗೆ ಹೇಗಿದೆ, ಅವರ ಭವಿಷ್ಯ ಯಾವ ರೀತಿ ಇರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಇಂದು ಉತ್ತರ ಫಾಲ್ಗುಣ ನಕ್ಷತ್ರ ಇದ್ದು, ಇದರ ಅಧಿಪತಿ ರವಿ. ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಮಧ್ಯಾಹ್ನ ಹಣಕಾಸಿನ ಸಮಸ್ಯೆಗಳು ಇರಬಹುದು. ಮಧ್ಯಾಹ್ನ ಬಳಿಕ ಇದು ಪರಿಹಾರವಾಗಲಿದೆ.
ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಮಧ್ಯಾಹ್ನವರೆಗೂ ಮನೆಯ ತಾಪತ್ರಯಗಳು ಹೆಚ್ಚಾಗಿ ಕಾಡುವ ಸಾಧ್ಯತೆ ಇದೆ. ತಾಯಿಯ ವಿಚಾರ ಹಾಗೂ ಆಸ್ತಿ ಪಾಸ್ತಿ ವಿಚಾರವಾಗಿ ಯೋಚನೆಗಳು ಕಾಡಬಹುದು. ಮಧ್ಯಾಹ್ನ ಬಳಿಕ ಕಾರ್ಯ ಕ್ಷೇತ್ರದಲ್ಲಿ ನೀವು ಬುದ್ಧಿವಂತಿಕೆಯನ್ನು ಬಳಸಿ ಯಶಸ್ಸು ಕಾಣಬಹುದು.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಮಧ್ಯಾಹ್ನವರೆಗೂ ಉತ್ತಮವಾಗಿದ್ದು ಎಲ್ಲ ಕೆಲಸ ಕಾರ್ಯದಲ್ಲಿ ಯಶಸ್ಸು ಕಾಣುತ್ತೀರಿ. ಮಧ್ಯಾಹ್ನ ಬಳಿಕ ನೆಮ್ಮದಿ ಇಲ್ಲದೆ ಬೇರೆಯವರಿಂದ ಕಿರುಕುಳ ಉಂಟಾಗಬಹುದು.
ಕಟಕ ರಾಶಿ: ಕಟಕ ರಾಶಿಯವರು ಮಧ್ಯಾಹ್ನವರೆಗೂ ಸಂಸಾರದ ತಾಪತ್ರಯ ಬಗ್ಗೆ ಗಮನ ನೀಡಬೇಕಾಗುತ್ತದೆ. ಮಧ್ಯಾಹ್ನ ಬಳಿಕ ನಿಮ್ಮ ಬಂಧು- ಬಳಗದವರ ಜತೆ ನೆಮ್ಮದಿಯಿಂದ ದಿನ ಕಳೆಯಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಅತ್ಯುತ್ತಮ ದಿನವಾಗಲಿದೆ. ಎಲ್ಲ ಕೆಲಸವೂ ನಿಮ್ಮ ಪರವಾಗಿ ನಡೆಯುತ್ತವೆ. ಮಧ್ಯಾಹ್ನ ಬಳಿಕ ನಿಮ್ಮ ಕುಟುಂಬದ ಜತೆ ಸಮಯ ಕಳೆಯುತ್ತೀರಿ.
ಕನ್ಯಾ ರಾಶಿ: ಕನ್ಯಾ ರಾಶಿಯವರ ಮನಸ್ಸಿಗೆ ಮಧ್ಯಾಹ್ನವರೆಗೂ ನೆಮ್ಮದಿ ಇರುವುದಿಲ್ಲ. ಆದರೆ ಮಧ್ಯಾಹ್ನ ಬಳಿಕ ಉತ್ತಮ ಮಾರ್ಗದರ್ಶನ ಸಿಗಲಿದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಮಧ್ಯಾಹ್ನವರೆಗೆ ಇಷ್ಟಾರ್ಥ ಸಿದ್ಧಿಯಾಗಲಿದೆ. ಆದರೆ ಮಧ್ಯಾಹ್ನ ಬಳಿಕ ಮುಖ್ಯವಾದ ಸಂಬಂಧದಲ್ಲಿ ಒಡಕು ಉಂಟಾಗುವ ಸಾಧ್ಯತೆ ಇದೆ.
ಲಕ್ಷ್ಮೀ ದೇವಿಯ ವಾಹನ ಗೂಬೆ: ಮನೆಯಲ್ಲಿ ವಿಗ್ರಹ ಇಟ್ಟರೆ ಶುಭವೇ?
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಜಾಸ್ತಿಯಾಗಿ ತಲೆಬಿಸಿಯಾಗಬಹುದು. ಮಧ್ಯಾಹ್ನ ಬಳಿಕ ಮನಸ್ಸಿಗೆ ನೆಮ್ಮದಿ ಇದ್ದು, ಇಷ್ಟಾರ್ಥ ಸಿದ್ಧಿಯಾಗಲಿದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಮಧ್ಯಾಹ್ನವರೆಗೂ ನಾನಾ ತೊಂದರೆಗಳು ಕಾಣಿಸಿಕೊಳ್ಳಬಹುದು. ಮಧ್ಯಾಹ್ನ ಬಳಿಕ ಕಾರ್ಯ ಕ್ಷೇತ್ರದಲ್ಲಿ ಜಯ ಕಾಣಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಮಧ್ಯಾಹ್ನವರೆಗೂ ನಾನಾ ತೊಂದರೆ ಕಾಡಬಹುದು. ಮಧ್ಯಾಹ್ನ ಅದೃಷ್ಟ ಕಂಡು ಬರಲಿದ್ದು, ಮನಸ್ಸಿಗೆ ನೆಮ್ಮದಿ ಇರಲಿದೆ.
ಕುಂಭರಾಶಿ: ಈ ರಾಶಿಯವರಿಗೆ ಮಧ್ಯಾಹ್ನವರೆಗೆ ಉತ್ತಮ ಪಲ ಗೋಚರವಾಗಲಿದೆ. ಮಧ್ಯಾಹ್ನ ಬಳಿಕ ಸ್ವಲ್ಪ ಕಿರಿ ಕಿರಿ ಉಂಟಾಗಬಹುದು.
ಮೀನ ರಾಶಿ: ಮೀನ ರಾಶಿಯವರಿಗೆ ಮಧ್ಯಾಹ್ನವರೆಗೆ ಯಾವುದೇ ಸಮಸ್ಯೆ ಎದುರಾಗಲಾರದು. ಮಧ್ಯಾಹ್ನ ಬಳಿಕ ಮನೆಯವರ ಜತೆ ಉತ್ತಮ ಸಮಯ ಕಳೆಯಲಿದ್ದೀರಿ.