ದಿನ ಭವಿಷ್ಯ, ಮಾರ್ಚ್ 25, 2026: ಈ ರಾಶಿಗೆ ಇಂದು ಹಣಕಾಸಿನ ವಿಚಾರದಲ್ಲಿ ಭಾರೀ ಲಾಭ
Horoscope Today March 25 : ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ, ಸಪ್ತಮಿ ತಿಥಿ, ಮೃಗಶಿರ ನಕ್ಷತ್ರದ ಮಾರ್ಚ್ 25ನೇ ತಾರೀಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ, ವಸಂತ ಋತು ಚೈತ್ರ ಮಾಸೆ, ಮೃಗಶಿರಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.
ಮೇಷ ರಾಶಿ: ಮೇಷ ರಾಶಿಯವರಿಗೆ ಶುಕ್ರ ನಿಮ್ಮ ರಾಶಿಯಲ್ಲೇ ಪ್ರವೇಶ ಮಾಡುತ್ತಿದ್ದಾನೆ. ಇದರಿಂದ ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ. ಶತ್ರುಗಳು ಕೂಡ ನಿಮ್ಮನ್ನು ಹಿಮ್ಮೆಟ್ಟಲಿದ್ದು ವೈಯಕ್ತಿಕ ವಿಚಾರದಲ್ಲಿ ಯಶಸ್ಸು ಸಿಗುತ್ತದೆ.
ವೃಷಭ ರಾಶಿ: ಇಂದು ವೃಷಭ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಮಿತ್ರತ್ವದಲ್ಲಿ ಒಡಕು ಉಂಟಾಗಬಹುದು.ಅದೇ ರೀತಿ ಹೆಂಗಸರಿಂದ ನಿಮಗೆ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಅತೀ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ನೆಮ್ಮದಿ ಪ್ರಾಪ್ತಿಯಾಗುತ್ತದೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕಾರ್ಯ ಕ್ಷೇತ್ರದಲ್ಲಿ ಅನೇಕ ರೀತಿಯ ತೊಂದರೆಯನ್ನು ಎದುರಿಸಬೇಕಾಗಿ ಬರಬಹುದು. ಮನೆಯಲ್ಲಿ ಕೂಡ ತೊಂದರೆಗಳು ಜಾಸ್ತಿಯಾಗುವ ಸಾಧ್ಯತೆ ಇರುತ್ತದೆ
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಭಾಗ್ಯೋದಯವಾದ ದಿನವಾಗಿದೆ. ಸಾಮಾಜಿಕವಾಗಿ ಯಶಸ್ಸು ಸಿಗುತ್ತದೆ. ಅದೇ ರೀತಿ ಎಲ್ಲ ಕೆಲಸದಲ್ಲೂ ಗೌರವ ಪ್ರಾಪ್ತಿಯಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಭಾಗ್ಯೋದಯವಾದ ದಿನ ನಿಮ್ಮದು ಆಗುತ್ತದೆ. ಹಿಂದಿನ ನೋವಿಗೆಲ್ಲ ಪರಿಹಾರ ಸಿಗುತ್ತದೆ
Vastu Tips: ಮನೆಯಲ್ಲಿ ಈ ಸಣ್ಣ ಬದಲಾವಣೆಗಳನ್ನು ಮಾಡಿದ್ರೆ ಸಾಕು, ಒತ್ತಡ ಮಾಯ!
ತುಲಾ ರಾಶಿ: ತುಲಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಬೇಡ. ಯಾರ ಸಹಕಾರ ಗಳು ಕೂಡ ನಿಮಗೆ ಸಿಗುವುದಿಲ್ಲ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಹೆಂಗಸರ ಮೂಲದಿಂದ ಸಮಸ್ಯೆ ಉಂಟಾಗಬಹುದು. ಮನೆಯಲ್ಲಿ ಕೂಡ ಸಮಸ್ಯೆ ಜಾಸ್ತಿಯಾಗಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಇತರರಿಂದ ವೈಮನಸ್ಸು ಉಂಟಾಗಬಹುದು. ಬಿಸೆನೆಸ್ ವ್ಯವಹಾರದಲ್ಲೂ ನಷ್ಟ ಆಗಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಬಿಸೆನೆಸ್ ವ್ಯವಹಾರದಲ್ಲಿ ಲಾಭದಾಯಕವಾಗಿದ್ದು ನೆಮ್ಮದಿಯಿಂದ ಇರುತ್ತೀರಿ
ಕುಂಭರಾಶಿ: ಈ ರಾಶಿಯವರಿಗೆ ಅತ್ಯುತ್ತಮವಾದ ದಿನವಾಗಿದೆ. ಸಹೋದರ- ಸಹೋದರಿಯರಿಂದ ನಿಮಗೆ ಒಳಿತು ಆಗುತ್ತದೆ.
ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಜೊತೆಗೆ ಧನ ಆಗಮನವಾಗುವ ಸಾಧ್ಯತೆ ಕೂಡ ಇರುತ್ತದೆ