ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶೀಘ್ರದಲ್ಲೇ ಅದ್ದೂರಿಯಾಗಿ ಮೂಡಿ ಬರಲಿದೆ ʼರಾಯರ ದರ್ಶನʼ ಆಲ್ಬಂ ಸಾಂಗ್

Rayara Darshan Album Song: ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿವೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗೆಗಿನ ಕೆಲವು ವಿಷಯಗಳನ್ನು ʼರಾಯರ ದರ್ಶನʼ ಆಲ್ಭಂನಲ್ಲಿ ತೋರಿಸಲಾಗುತ್ತಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಲಾಂಛನದಲ್ಲಿ ಸುಗುಣ ರಘು ಈ ಅಲ್ಭಂ ನಿರ್ಮಾಣ ಮಾಡಿದ್ದಾರೆ.

ʼರಾಯರ ದರ್ಶನʼ ಆಲ್ಬಂ ಸಾಂಗ್ ಶೀಘ್ರದಲ್ಲೇ  ಅನಾವರಣ

ಆಲ್ಬಂ ಸಾಂಗ್ ಬಿಡುಗಡೆ -

Profile
Pushpa Kumari Dec 13, 2025 7:16 PM

ಬೆಂಗಳೂರು, ಡಿ. 13: ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೇ ಖ್ಯಾತರಾದ ಮಂತ್ರಾಲಯ ಗುರು ಶ್ರೀರಾಘವೇಂದ್ರ ಸ್ವಾಮಿಗಳಿಗೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರಿದ್ದಾರೆ. ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿವೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಷಯಗಳನ್ನು ʼರಾಯರ ದರ್ಶನʼ ಆಲ್ಭಂನಲ್ಲಿ (Rayara Darshan Album Song) ತೋರಿಸಲಾಗುತ್ತಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಲಾಂಛನದಲ್ಲಿ ಸುಗುಣ ರಘು ಈ ಅಲ್ಭಂ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಮಾಧ್ಯಮದವರಿಗೆ ಕೊಡಮಾಡುವ ಟಿ.ಎನ್.ಐ.ಟಿ. ಪ್ರಶಸ್ತಿ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳಿಂದ ಗುರುತಿಸಿಕೊಂಡಿರುವ ರಘು ಭಟ್ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ಆಲ್ಬಂ ಸಾಂಗ್ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ನಟ ಜಗ್ಗೇಶ್, ಮಂತ್ರಾಲಯದ ಮಾಧ್ಯಮ ಪ್ರತಿನಿಧಿ ಶ್ರೀನಿಧಿ ಕರಣಂ, ರಘು ಭಟ್, ಸುಗುಣ ರಘು ಹಾಗೂ ಗೀತರಚನೆಕಾರ ನಾಗಾರ್ಜುನ ಶರ್ಮ ಉಪಸ್ಥಿತರಿದ್ದರು.

ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರ ಆಶೀರ್ವಾದದೊಂದಿಗೆ ಶ್ರೀಗುರು ರಾಘವೇಂದ್ರ ಸ್ವಾಮಿಗಳ ದಿವ್ಯ ಚರಿತ್ರೆಯನ್ನು ವಿಶ್ವದಾದ್ಯಂತ ಹರಡುವ ಧ್ಯೇಯ ದೊಂದಿಗೆ ʼರಾಯರ ದರ್ಶನʼ ಆಲ್ಬಂ ಸಾಂಗ್ ನಿರ್ಮಾಣವಾಗುತ್ತಿದೆ. ರಾಯರ ಕುರಿತು ಸಾಕಷ್ಟು ಗೀತೆಗಳು ಬಂದಿದೆಯಾದರೂ, ಈವರೆಗೂ ಯಾರು ಹೇಳಿರದ ಹಾಗೂ ತೋರಿಸಿರದ ರಾಯರ ಕುರಿತಾದ ಕೆಲವು ವಿಷಯಗಳು ಈ ಆಲ್ಬಂ ಸಾಂಗ್ ನಲ್ಲಿರಲ್ಲಿದೆ. ಡಿಸೆಂಬರ್ 23ರಿಂದ ಏಳು ದಿನಗಳ ಕಾಲ ಮಂತ್ರಾಲಯದಲ್ಲಿ ಶ್ರೀಗಳು ಚಿತ್ರೀಕರಣಕ್ಕಾಗಿ ಸಮಯ ನೀಡಿದ್ದಾರೆ. ರಾಯರ ಭಕ್ತರಾದ ಅನೇಕ ಸೆಲೆಬ್ರಿಟಿ ಕಲಾವಿದರು ಈ ಆಲ್ಬಂ ಸಾಂಗ್‌ನಲ್ಲಿ ಅಭಿನಯಿಸಲಿದ್ದಾರೆ. ನಾಗಾರ್ಜುನ ಶರ್ಮ ಗೀತರಚನೆ ಮಾಡುತ್ತಿದ್ದು, ಹೆಸರಾಂತ ಸಂಗೀತ ನಿರ್ದೇಶಕರಾದ ಸಿ.ಆರ್. ಬಾಬಿ ಹಾಗೂ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಲಿದ್ದಾರೆ. ಫೆಬ್ರವರಿಯಲ್ಲಿ ಮಂತ್ರಾಲಯದಲ್ಲೇ ಅದ್ದೂರಿಯಾಗಿ ʼರಾಯರ ದರ್ಶನʼ ಆಲ್ಬಂ ಸಾಂಗ್ ಅನಾವರಣವಾಗಲಿದೆ.

ದರ್ಶನ್‌ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ? ಸಹೋದರ ದಿನಕರ್ ಹೇಳಿದ್ದೇನು?

ನಾನು ದೆಹಲಿಯಲ್ಲಿದೆ. ಶ್ರೀಗಳು ಫೋನ್ ಮಾಡಿ ಈ ಪತ್ರಿಕಾಗೋಷ್ಠಿಗೆ ಹೋಗಲು ಆದೇಶಿಸಿದ್ದರು.‌ ರಾಯರ ಕೆಲಸ ಅಂದ ಮೇಲೆ ಆಗಲ್ಲ ಎನ್ನುವ ಮಾತೇ ಇಲ್ಲ. ಏಕೆಂದರೆ ನನ್ನ ಉಸಿರೆ ರಾಯರು ಎಂದು ಭಾವುಕರಾಗಿ ಮಾತನಾಡಿದ ನಟ ಜಗ್ಗೇಶ್, ತಮಗೆ ರಾಯರ ಮೇಲೆ ಭಕ್ತಿ ಬರಲು ಕಾರಣ ನಮ್ಮ ತಾಯಿ. ಅವರು 500 ರೂಪಾಯಿ ಕೊಟ್ಟು ನನ್ನನ್ನು ಮೊದಲ‌ ಬಾರಿಗೆ ಮಂತ್ರಾಲಯಕ್ಕೆ ಕಳುಹಿಸಿದರು. ರಾಯರಿದ್ದಾರೆ ಎಂದು ಮನದಲ್ಲಿ ಬಿತ್ತಿದ್ದರು. ಆನಂತರ ತಮ್ಮ ಜೀವನದಲ್ಲಾಗಿರುವ ರಾಯರ ಕರುಣೆಯನ್ನು ಮನದಾಳದ ಮಾತುಗಳ ಮೂಲಕ ತೆರೆದಿಟ್ಟಿರು ಜಗ್ಗೇಶ್. ʼರಾಯರ ದರ್ಶನʼ ಆಲ್ಬಂ ಸಾಂಗ್ ಗೆ ಶುಭ ಕೋರಿ, ಎಲ್ಲರೂ ರಘು ಭಟ್ ಅವರ ಕಾರ್ಯಕ್ಕೆ ಪ್ರೋತ್ಸಾಹ ನೀಡಿ ಎಂದರು.

ಮಂತ್ರಾಲಯದಿಂದ ಆಗಮಿಸಿದ್ದ ಶ್ರೀನಿಧಿ ಕರಣಂ ಶ್ರೀ ಗುರುರಾಯರ ಹಾಗೂ ಶ್ರೀ ಸುಬುಧೇಂದ್ರ ತೀರ್ಥರ ಕರುಣೆಯನ್ನು ನೆನೆದು ಭಾವುಕರಾದರು.‌ ರಘು ಭಟ್ ಅವರ ಈ ಪ್ರಯತ್ನಕ್ಕೆ ಶ್ರೀಗಳ ಸಂಪೂರ್ಣ ಅನುಗ್ರಹವಿದೆ ಎಂದರು. ರಾಯರ ಮಠದ ಮುಂದೆ ಇರುವಾಗಲೇ ʼರಾಯರ ದರ್ಶನʼದ ಹಾಡು ಬರೆಯಲು ರಘು ಭಟ್ ಅವರಿಂದ ಕರೆ ಬಂದ ವಿಷಯವನ್ನು ಗೀತರಚನೆಕಾರ ನಾಗಾರ್ಜುನ ಶರ್ಮ ತಿಳಿಸಿದರು. ನಿರ್ಮಾಪಕಿ ಸುಗುಣಾ ರಘು ಸ್ವಾಗತಿಸಿದರು.