ಬೆಂಗಳೂರು, ಜೂ. 24: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಸ್ವಾತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಪ್ರೀತಿ ಪಾತ್ರರ ಜತೆ ಬಹಳಷ್ಟು ವಿಶ್ವಾಸ ಇಂದು ಗಳಿಸುತ್ತೀರಿ. ಪಾರ್ಟ್‌ನರ್‌ಶಿಪ್ ವ್ಯವಹಾರದಲ್ಲಿ ಇಂದು ಹೆಚ್ಚಿನ ಲಾಭ ಗಳಿಸುತ್ತೀರಿ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಲಿದೆ. ಶತ್ರು ನಾಶ ಹಾಗೂ ಶತ್ರು ಧ್ವಂಸವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಕಂಡು ಬರಲಿದ್ದು, ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ.
ಮನೆಯಲ್ಲಿ ಮೆಣಸಿನ ಗಿಡ ನೆಡಬಹುದೇ? ವಾಸ್ತು ಶಾಸ್ತ್ರ ಏನು ಹೇಳುತ್ತದೆ ತಿಳಿಯಿರಿ!
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಹಣಕಾಸಿನ ವಿಚಾರವಾಗಿ ನಿಮಗೆ ತೊಂದರೆ ಎದುರಾಗುತ್ತದೆ. ಮನಸ್ಸಿನಲ್ಲಿ ನಾನಾ ರೀತಿಯ ಯೋಚನೆಗಳು ಕೂಡ ಕಾಡಬಹುದು. ಆದರೆ ಬುದ್ದಿವಂತಿಕೆ ಉಪಯೋಗಿಸಿ ಮಾಡುವ ಕೆಲಸದಲ್ಲಿ ಜಯ ಪ್ರಾಪ್ತಿಯಾಗುತ್ತದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ತಾಯಿಯ ಆರೋಗ್ಯ ಬಗ್ಗೆ ನೀವು ಗಮನ ಹರಿಸಬೇಕಾಗುತ್ತದೆ. ಮನೆಯ ಜವಾಬ್ದಾರಿಗಳು ಕೂಡ ಇಂದು ಹೆಚ್ಚಾಗಿ ಇರುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಅತ್ಯುತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇರುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಹಾಗೂ ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಲಾಭದಾಯಕ ದಿನವಾಗಲಿದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಮನೆಯ ಜವಾಬ್ದಾರಿ ಹೆಚ್ಚಾಗಿರುತ್ತದೆ. ಆರ್ಥಿಕವಾಗಿ ತೊಂದರೆ ಇರುತ್ತದೆ. ಆದರೆ ಕುಟುಂಬದ ಜತೆ ಸಂತೋಷದಿಂದ ದಿನ ಕಳೆಯುತ್ತೀರಿ.
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನಗಳ ತೊಂದರೆ ಬಗೆಹರಿಯುತ್ತದೆ. ಇಂದು ಆತ್ಮವಿಶ್ವಾಸ ಕೂಡ ಚೆನ್ನಾಗಿ ಇರುತ್ತದೆ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಮುಖ್ಯವಾದ ಯಾವುದೇ ನಿರ್ಧಾರ ಮಾಡಲು ಹೋಗಬೇಡಿ. ಕೆಲಸ ಕಾರ್ಯದಲ್ಲಿ ತೊಂದರೆ ಎದುರಾಗಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಉತ್ತಮ ದಿನವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಎಲ್ಲ ಕೆಲಸ ಕಾರ್ಯದಲ್ಲಿ ಜಯ ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಅದೃಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಇಂದು ಪ್ರತಿಷ್ಠೆ ಹೆಚ್ಚಾಗಬಹುದು.
ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ದಿನದಲ್ಲಿ ತೊಂದರೆ ಬಗೆಹರಿಯುತ್ತದೆ. ಮುಂದಿನ ದಿನಕ್ಕೆ ಸರಿಯಾದ ಮಾರ್ಗದರ್ಶನ ಸಿಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಬೇಡವಾದ ವಿಚಾರದಲ್ಲಿ ಪಾಲ್ಗೊಳ್ಳಲು ಹೋಗಬೇಡಿ. ಯಾವುದೇ ಕೆಲಸ ಕಾರ್ಯದಲ್ಲಿ ಬಹಳಷ್ಟು ಎಚ್ಚರಿಕೆ ಅಗತ್ಯ.