ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಕೃತಿಕಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಚಂದ್ರ ಇಂದು ವೃಷಭ ರಾಶಿಗೆ ಪ್ರವೇಶ ಮಾಡುತ್ತಿದ್ದಾನೆ. ಹಾಗಾಗಿ ಹೆಚ್ಚಿನ ಜನರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಯವರು ನಿಮ್ಮ ಕುಟುಂಬದ ಬಗ್ಗೆ ಇಂದು ಸಕಾರಾತ್ಮಕ ಪರಿಣಾಮವನ್ನು ಕಾಣುತ್ತೀರಿ.ಅದೇ ರೀತಿ ಎಲ್ಲ ಕೆಲಸ ಕಾರ್ಯದಲ್ಲಿ ಜಯವನ್ನು ಕಾಣುತ್ತೀರಿ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಹಿಂದಿನ ಎರಡು ಮೂರು ದಿನಗಳಲ್ಲಿ ಇದ್ದ ನೋವೆಲ್ಲ ಮಯವಾಗುವ ದಿನ ನಿಮ್ಮದಾಗುತ್ತದೆ. ಮುಂದೇನು ಮಾಡಬೇಕು ಎನ್ನುವ ಮಾರ್ಗದರ್ಶನ ಕೂಡ ಪ್ರಾಪ್ತಿಯಾಗುತ್ತದೆ.
ಮಿಥುನ ರಾಶಿ: ಈ ರಾಶಿಗೆ ಇಂದು ಕಷ್ಟಕರವಾದ ದಿನವಾಗಿದೆ. ಅತೀ ಭಾವುಕತೆ ಕಾಡುವ ದಿನ ನಿಮ್ಮದಾಗುತ್ತದೆ. ಮುಖ್ಯವಾದ ಸಂಬಂಧದಲ್ಲಿ ಇಂದು ಒಡಕು ಉಂಟಾಗಬಹುದು. ಹಾಗಾಗಿ ಧ್ಯಾನದಿಗಳನ್ನು ಮಾಡಿ ಸಮಯ ಕಳೆಯಬೇಕಾಗುತ್ತದೆ
ಕಟಕ ರಾಶಿ: ಕಟಕ ರಾಶಿ ಅವರಿಗೆ ಅತ್ಯುತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮಿತ್ರತ್ವದಲ್ಲಿ ಅತೀ ಹೆಚ್ಚಿನ ಲಾಭ ಹಾಗೂ ಖುಷಿ ಸಿಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ಬದಲಾವಣೆ ಇಂದು ಕಂಡು ಬರಬಹುದು. ಮನಸ್ಸಿಗೆ ಬೇಸರವಾದರೂ ಪರಿಸ್ಥಿತಿ ನಿಭಾಯಿಸಿಕೊಂಡು ಬದುಕಬೇಕಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಹಿಂದಿನ ಎರಡು ಮೂರು ದಿನಗಳ ಸಮಸ್ಯೆ ಎಲ್ಲವೂ ಬಗೆಹರಿದು ತೊಂದರೆಗಳಿಗೆ ಕೊನೆ ಸಿಗುತ್ತದೆ.
Vastu Tips: ಮನೆಗೆ ಶುಭ ತರೋ ಲಿವಿಂಗ್ ರೂಮ್ ವಾಸ್ತು ಹೇಗಿರಬೇಕು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ
ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಪ್ರೀತಿ ಪಾತ್ರರ ಯಾರ ಸಹಕಾರ ಕೂಡ ನಿಮಗೆ ಇರುವುದಿಲ್ಲ. ಆರೋಗ್ಯದಲ್ಲೂ ತೊಂದರೆ ಉಂಟಾಗಬಹುದು.
ವೃಶ್ಚಿಕ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ನಿಮ್ಮ ದಾಂಪತ್ಯದಲ್ಲಿ ಹಾಗೂ ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಹೆಚ್ಚಿನ ಯಶಸ್ಸು ಸಿಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಮಿಶ್ರ ಫಲವಾಗಿರುತ್ತದೆ. ಶತ್ರುಗಳನ್ನು ನೀವು ಹಿಮ್ಮೆಟ್ಟಬಹುದು. ಆದರೆ ಮನಸ್ಸಿಗೆ ನೆಮ್ಮದಿ ಅಷ್ಟಾಗಿ ಇರುವುದಿಲ್ಲ.
ಮಕರ ರಾಶಿ: ಮಕರ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಇಂದು ಯಶಸ್ಸು ಸಿಗುತ್ತದೆ. ಪೋಷಕರಿಗೆ ಮಕ್ಕಳಿಂದ ತೊಂದರೆ ಉಂಟಾಗಬಹುದು.
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ನಿಮಗೆ ಕುಟುಂಬದ ಜವಾಬ್ದಾರಿ ಹೆಚ್ಚಾಗುತ್ತದೆ.ಅದೇ ರೀತಿ ವೈಯಕ್ತಿಕ ಸಮಸ್ಯೆಗಳು ಇಂದು ನಿವಾರಣೆಯಾಗುತ್ತದೆ.
ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಮಾಧ್ಯಮ ಹಾಗೂ ಸೇಲ್ಸ್ ಮಾರ್ಕೆಟಿಂಗ್ ವ್ಯವಹಾರದಲ್ಲಿ ನಿಮಗೆ ಹೆಚ್ಚಿನ ಯಶಸ್ಸು ಸಿಗುತ್ತದೆ..