ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ತೃತೀಯ ತಿಥಿ, ಮೃಗಶಿರ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಈ ರಾಶಿಗೆ ಮಧ್ಯಾಹ್ನವರೆಗೂ ಸಂಸಾರದ ತಾಪತ್ರಯಗಳು ಜಾಸ್ತಿಯಾಗುತ್ತವೆ. ಮಧ್ಯಾಹ್ನ ಬಳಿಕ ನಿಮ್ಮ ಬಂಧು- ಬಾಂಧವರ ಜೊತೆ ಸುಗಮವಾದ ಸಮಯ ಕಳೆಯಲಿದ್ದು ನೆಮ್ಮದಿಯನ್ನು ಕಾಣುತ್ತೀರಿ.
ವೃಷಭ ರಾಶಿ: ಈ ರಾಶಿಯವರು ಮಧ್ಯಾಹ್ನವರೆಗೂ ವೈಯಕ್ತಿಕ ಕೆಲಸದ ಬಗ್ಗೆ ಯೋಚನೆ ಮಾಡುತ್ತೀರಿ. ಮಧ್ಯಾಹ್ನ ಬಳಿಕ ಮನೆಯ ಕೆಲಸ ಹಾಗೂ ವ್ಯವಹಾರದ ಬಗ್ಗೆ ಯೋಚಿಸುತ್ತೀರಿ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಮಧ್ಯಾಹ್ನ ವರೆಗೂ ನಾನಾ ರೀತಿಯ ತೊಂದರೆ ಉಂಟಾಗಬಹುದು. ಮಧ್ಯಾಹ್ನ ಬಳಿಕ ಮನಸ್ಸು ಬಹಳಷ್ಟು ತಿಳಿಯಾಗಿ ಖುಷಿಯಾದ ದಿನವನ್ನು ಕಳೆಯಲಿದ್ದೀರಿ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಮಧ್ಯಾಹ್ನವರೆಗೆ ಎಲ್ಲವೂ ನಿಮ್ಮ ಪರವಾಗಿ ನಡೆಯುತ್ತಿರುತ್ತದೆ. ಮಧ್ಯಾಹ್ನ ಬಳಿಕ ಕೆಲಸ ಕಾರ್ಯದಲ್ಲಿ ತೊಂದರೆ ಉಂಟಾಗಲಿದ್ದು ಬೇಸರ ಉಂಟಾಗುವ ಸಾಧ್ಯತೆ ಇರುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಮಧ್ಯಾಹ್ನವರೆಗೂ ಕಾರ್ಯಕ್ಷೇತ್ರದಲ್ಲಿ ತುಂಬಾನೇ ಚೆನ್ನಾಗಿ ಇರುತ್ತದೆ. ಮಧ್ಯಾಹ್ನ ಬಳಿಕ ಮಿತ್ರರ ಜೊತೆ ಖುಷಿಯಾದ ದಿನವನ್ನು ನೀವು ಕಳೆಯಲಿದ್ದೀರಿ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಮಧ್ಯಾಹ್ನವರೆಗೂ ಸ್ವಲ್ಪ ಅದೃಷ್ಟ ಪರೀಕ್ಷೆ ನಡೆಯುತ್ತಿರುತ್ತದೆ. ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ಒಮ್ಮೆಲೆ ಯಶಸ್ಸು ಸಿಗುವ ದಿನವಾಗಿದೆ.
ತುಲಾ ರಾಶಿ: ತುಲಾ ಅವರಿಗೆ ಮಧ್ಯಾಹ್ನವರೆಗೂ ನಾನಾ ರೀತಿಯ ತೊಂದರೆಗಳು ಕಾಡಬಹುದು. ಮಧ್ಯಾಹ್ನ ಬಳಿಕ ಕಾರ್ಯಕ್ಷೇತ್ರದಲ್ಲಿ ತಿರುವು ಕಂಡು ಬರಲಿದ್ದು ಯಶಸ್ಸು ಕಾಣುವ ಸಾಧ್ಯತೆ ಇರುತ್ತದೆ.
ವೃಶ್ಚಿಕ ರಾಶಿ: ಈ ರಾಶಿಗೆ ಮಧ್ಯಾಹ್ನವರೆಗೂ ಎಲ್ಲವೂ ಕೂಡ ನಿಮ್ಮ ಪರವಾಗಿ ನಡೆಯುತ್ತಿರುತ್ತದೆ. ಮಧ್ಯಾಹ್ನ ಬಳಿಕ ಎಲ್ಲವೂ ಬದಲಾಗಿ ವಿರುದ್ಧ ದಿಕ್ಕಿನಲ್ಲಿ ಎಲ್ಲರೂ ಪ್ರತಿಕ್ರಿಯೆ ನೀಡಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಗೆ ಮಧ್ಯಾಹ್ನ ವರೆಗೂ ಕಷ್ಟಕರವಾದ ದಿನವಾಗಿದೆ. ಮಧ್ಯಾಹ್ನ ಬಳಿಕ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ನೀವು ಅಂದುಕೊಂಡಂತೆ ಕೆಲಸ ಕಾರ್ಯಗಳು ನಡೆಯಲಿವೆ.
ಮಕರ ರಾಶಿ: ಮಕರ ರಾಶಿಯವರಿಗೆ ಮಧ್ಯಾಹ್ನವರೆಗೂ ತೊಂದರೆ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಹಾಗೂ ಪ್ರೇಮ ಪ್ರೀತಿ ವಿಚಾರವಾಗಿ ತೊಂದರೆ ಕಾಡಬಹುದು.
ಕುಂಭರಾಶಿ: ಈ ರಾಶಿಯವರಿಗೆ ಇಂದು ಮಧ್ಯಾಹ್ನವರೆಗೂ ಮನೆಯ ಜವಾಬ್ದಾರಿ ಜಾಸ್ತಿಯಾಗುತ್ತವೆ. ಮಧ್ಯಾಹ್ನ ಬಳಿಕ ಹೂಡಿಕೆ ಹಾಗೂ ಮಕ್ಕಳ ವಿಚಾರವಾಗಿ ಗಮನವನ್ನು ಹರಿಸಬಹುದು
ಮೀನ ರಾಶಿ: ಮೀನ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಅತೀ ಲಾಭದಾಯಕವಾಗಿದೆ..