ದಿನ ಭವಿಷ್ಯ, ಜೂನ್ 15, 2026: ನಿರುದ್ಯೋಗಿಗಳ ಅರಸಿ ಬರಲಿದೆ ಉದ್ಯೋಗಾವಕಾಶ; ಉದ್ಯಮಿಗಳಿಗೂ ಗುಡ್ ಡೇ
Horoscope Today June 15th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯ ತಿಥಿ, ಮೃಗಶಿರ ನಕ್ಷತ್ರದ, ಜೂನ್ 15ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು, ಜೂ. 15: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಮೃಗಶಿರನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಇಂದು ರವಿ ಮಿಥುನ ರಾಶಿಯನ್ನು ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನ ರಾಶಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ರಾಶಿಯವರಿಗೆ ಇಂದು ಉತ್ತಮ ಫಲ ಸಿಗಲಿದೆ. ಸೋಷಿಯಲ್ ಮೀಡಿಯಾ, ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಎಲ್ಲ ರೀತಿಯಿಂದಲೂ ನಿಮಗೆ ಸಹಕಾರ ಪ್ರಾಪ್ತಿಯಾಗುತ್ತದೆ.
ವೃಷಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಸಂಸಾರದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಚಾರವಾಗಿಯೂ ತೊಂದರೆ ಉಂಟಾಗಬಹುದು.
ಮಿಥುನ ರಾಶಿ: ಈ ರಾಶಿಗೆ ಇಂದು ರವಿ ಪ್ರವೇಶ ಮಾಡುವುದರಿಂದ ಸ್ವಲ್ಪ ಅಡಚಣೆ ಉಂಟಾಗಬಹುದು. ಇತರರಿಂದ ನೀವು ಟೀಕೆ ಕೇಳಬೇಕಾಗಿ ಬರಬಹುದು. ನಿಮ್ಮ ವ್ಯಕ್ತಿತ್ವದ ಬಗ್ಗೆ ಇಂದು ಅಪಹಾಸ್ಯ ಮಾಡಬಹುದು.
ಕಟಕ ರಾಶಿ: ಕಟಕ ರಾಶಿಯವರಿಗೆ ಸಾಕಷ್ಟು ಸಂಕಷ್ಟ ಎದುರಾಗಲಿದೆ. ಉದ್ಯೋಗಸ್ಥರಿಗೆ ಬಾಸ್‌ಗಳಿಂದ ತೊಂದರೆ ಉಂಟಾಗಬಹುದು. ವ್ಯವಹಾರದಲ್ಲೂ ತೊಂದರೆ ಕಾಣಿಸಿಕೊಳ್ಳಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಹೆಚ್ಚಾಗುತ್ತದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು, ಧನಾಗಮನದ ಸೂಚನೆ ಇದೆ. ಹೆಚ್ಚಿನ ಸ್ನೇಹ ಸಂಬಂಧಗಳು ಇಂದು ಬೆಳೆಯಬಹುದು.
ಮನೆಯಲ್ಲಿ ಕೀಲಿಕೈ ಎಲ್ಲಿಡಬೇಕು ಗೊತ್ತಾ? ಈ ತಪ್ಪುಗಳನ್ನು ಮಾಡಬೇಡಿ
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅದೃಷ್ಟದ ದಿನವಾಗಲಿದ್ದು, ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಉದ್ಯಮಿಗಳು ಪ್ರಗತಿ ಕಾಣಲಿದ್ದಾರೆ. ಹೆಚ್ಚಿನ ಅವಕಾಶಗಳು ಒದಗಿ ಬರಬಹುದು.
ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿರಿಯರ ದೇವರ ಆಶೀರ್ವಾದ ಇಂದು ಅಗತ್ಯ. ಇದರಿಂದ ನಿಮಗೆ ಹೆಚ್ಚಿನ ಪ್ರಶಂಸೆ ಒದಗಿ ಬರಬಹುದು.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ನಾನಾ ರೀತಿಯ ಯೋಚನೆಗಳು ಇಂದು ಕಾಡಬಹುದು. ದಾಂಪತ್ಯ ಹಾಗೂ ಪ್ರೀತಿ-ಪ್ರೇಮ ವಿಚಾರವಾಗಿ ಬೇಸರ ಉಂಟಾಗಬಹುದು.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಆದರೆ ಪ್ರೀತಿ ಪಾತ್ರರಿಂದ ಬೇಸರ ಆಗಬಹುದು. ಮುಖ್ಯವಾದ ಸ್ನೇಹದಲ್ಲಿ ತೊಡಕು ಉಂಟಾಗಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಶತ್ರುಗಳು ಹಿಮ್ಮೆಟ್ಟಬಹುದು. ಅತಿಯಾದ ಆತ್ಮವಿಶ್ವಾಸ ಇಟ್ಟುಕೊಳ್ಳಬೇಡಿ.
ಕುಂಭ ರಾಶಿ: ಈ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಬುದ್ದಿವಂತಿಕೆಯಿಂದ ಯಶಸ್ಸು ಕಾಣಬಹುದು. ಕ್ರಿಯಾತ್ಮಕ ಕೆಲಸದಲ್ಲಿ ಜಯ ಉಂಟಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಆಸ್ತಿ-ಪಾಸ್ತಿ ವಿಚಾರದತ್ತ ಗಮನ ನೀಡಬೇಕಾಗುತ್ತದೆ. ಮನೆಯಲ್ಲಿ ಸ್ವಲ್ಪ ತೊಂದರೆ ಉಂಟಾಗುವ ಸಾಧ್ಯತೆ ಇದೆ.