ದಿನ ಭವಿಷ್ಯ, ಏಪ್ರಿಲ್ 23, 2026: ಇಂದು ಯಾವುದೇ ಕೆಲಸದಲ್ಲಿ ಯಶಸ್ಸು ದೊರೆಯುವುದಿಲ್ಲ
Horoscope April 23: ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರದ ಏಪ್ರಿಲ್ 23ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು, ಏ. 23: ಪರಾಭವನಾಮ ಸಂವತ್ಸರದ ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಪುನರ್ವಸು ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಮೇಷ ರಾಶಿ: ಮೇಷ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಂಸಾರದ ವಿಚಾರ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ರಿಯಲ್ ಎಸ್ಟೇಟ್, ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸುತ್ತೀರಿ.
ವೃಷಭ ರಾಶಿ: ವೃಷಭ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸೋಷಿಯಲ್ ಮೀಡಿಯಾ, ಮಾರ್ಕೆಟಿಂಗ್ ವ್ಯವಹಾರ ಮಾಡೋರಿಗೆ ಲಾಭ ಸಿಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದೆ.
ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರು ಇಂದು ಮನೆಯ ಬಗ್ಗೆ ಹೆಚ್ಚಿನ ಯೋಚನೆ ಮಾಡಬೇಕಾಗುತ್ತದೆ. ಮನೆಯಲ್ಲಿ ನೀವಿಂದು ಮುಖ್ಯ ನಿರ್ಧಾರ ತೆಗೆದುಕೊಂಡು ಜವಾಬ್ದಾರಿ ಹೊರ ಬೇಕಾಗುತ್ತದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ದಿನಗಳಲ್ಲಿ ಇದ್ದಂತಹ ನೋವಿಗೆ ಪರಿಹಾರ ಸಿಗಲಿದೆ. ನೆಮ್ಮದಿಯಿಂದ ನೀವು ದಿನವನ್ನು ಕಳೆಯಬಹುದು.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಯಾವುದೇ ಕೆಲಸ ಕಾರ್ಯಗಳು ಇಂದು ನಿಮ್ಮ ಪರವಾಗಿ ನಡೆಯುವುದಿಲ್ಲ.
ಸ್ನಾನದ ನಂತರ ಈ ತಪ್ಪುಗಳನ್ನು ಮಾಡಬೇಡಿ ಅನ್ನುತ್ತದೆ ವಾಸ್ತು ಶಾಸ್ತ್ರ
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತೀ ಉತ್ತಮ ದಿನವಾಗಲಿದೆ. ಯಶಸ್ಸು ನಿಮಗೆ ಇಂದು ಸಿಗಬಹುದು. ಮಿತ್ರರಿಂದ ಧನಾಗಮನವಾಗಲಿದೆ.
ತುಲಾ ರಾಶಿ: ತುಲಾ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಜಾಸ್ತಿಯಾಗಲಿದೆ. ಮನೆಯಲ್ಲೂ ನಿಮ್ಮ ಪಾತ್ರ ಮುಖ್ಯವಾಗಿದ್ದು ಎಲ್ಲವನ್ನು ಸರಿಯಾಗಿ ನಿಭಾಯಿಸಬೇಕಾಗುತ್ತದೆ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಅದೃಷ್ಟದ ದಿನವಾಗಲಿದೆ. ಆದರೂ ಹಿರಿಯರ ಹಾಗೂ ಭಗವಂತನ ಆಶೀರ್ವಾದ ನಿಮಗೆ ಮುಖ್ಯವಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಯಾವುದೇ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುವುದಿಲ್ಲ. ಮನಸ್ಸಿಗೆ ಬೇಸರ ಕಾಡುವ ಸಾಧ್ಯತೆ ಇದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಬಹುದು. ಪ್ರೀತಿ ಪಾತ್ರರಿಂದ ಸಹಕಾರ ಪ್ರಾಪ್ತಿಯಾಗುತ್ತದೆ.
ಕುಂಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗುತ್ತದೆ. ಯಶಸ್ಸು ನಿಮ್ಮದಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಆದರೆ ಮಕ್ಕಳ ವಿಚಾರದಲ್ಲಿ ನಿಮಗೆ ಕಿರಿಕಿರಿಯಾಗುವ ಸಾಧ್ಯತೆ ಹೆಚ್ಚು ಇದೆ.