ದಿನ ಭವಿಷ್ಯ, ಸೆಪ್ಟೆಂಬರ್ 1, 2026: ಇಂದು ಜೀವನಕ್ಕೆ ಬಹುಮುಖ್ಯ ತಿರುವು ಸಿಗಲಿದೆ
Horoscope Today September 1st: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಪ್ರತಿಭಾ ತಿಥಿ, ಪೂರ್ವಭಾದ್ರಪ ನಕ್ಷತ್ರದ ಸೆಪ್ಟೆಂಬರ್ 1ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.
ಇಂಟರ್‌ನೆಟ್ ಚಿತ್ರ -
ಬೆಂಗಳೂರು: ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಪೂರ್ವಭಾದ್ರಪದ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಮಾಹಿತಿ ಇಲಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮಧ್ಯಾಹ್ನ ಬಳಿಕ ಕೆಲವೊಂದು ವಿಚಾರದಲ್ಲಿ ಮನಸ್ಸಿಗೆ ಕ್ಷೇಶ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮುಖ್ಯವಾದ ಕೆಲಸ ಕಾರ್ಯದಲ್ಲಿ ಯಶಸ್ಸು ಹಾಗೂ ಇಷ್ಟಾರ್ಥ ಸಿದ್ದಿಯಾಗುತ್ತದೆ. ಧನ ಲಾಭದ ಸೂಚನೆ ಇದೆ.
ಮಿಥುನ ರಾಶಿ: ಇಂದು ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ನಿಮ್ಮದಾಗುತ್ತದೆ. ಬಂಧು- ಬಳಗದಿಂದ ಸಂತೋಷ ನಿಮ್ಮದಾಗುತ್ತದೆ.
ಕಟಕ ರಾಶಿ: ಕಟಕ ರಾಶಿಯವರಿಗೆ ಹಿಂದಿನ ದಿನ ಇದ್ದ ನೋವೆಲ್ಲ ಪರಿಹಾರವಾಗುತ್ತದೆ. ಆದರೆ ಹಿರಿಯರ ಆಶೀರ್ವಾದ ಇಂದು ಬಹಳಷ್ಟು ಮುಖ್ಯ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಯಾವುದೇ ಮುಖ್ಯ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಸ್ನೇಹ- ಸಂಬಂಧವನ್ನು ಕಳೆದುಕೊಳ್ಳುವ ಸಂದರ್ಭ ಇಂದು ಒದಗಬಹುದು.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಮಧ್ಯಾಹ್ನವರೆಗೆ ಉತ್ತಮ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಕುಟುಂಬ ಹಾಗೂ ದಾಂಪತ್ಯದಲ್ಲಿ ಜೀವನದಲ್ಲಿ ಖುಷಿ ಇರಲಿದೆ.
ಕರ್ಪೂರದಿಂದ ಮನೆಯ ವಾಸ್ತು ದೋಷ ನಿವಾರಣೆ: ಆರ್ಥಿಕ ಸಮಸ್ಯೆ, ಕಲಹಗಳಿಗೆ ಇಲ್ಲಿದೆ ಪರಿಹಾರ
ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಲಿದೆ. ಶತ್ರುಗಳು ಹಿಮ್ಮೆಟ್ಟಲಿದ್ದು, ಅಂದುಕೊಂಡ ಕೆಲಸ ಕಾರ್ಯದಲ್ಲಿ ಯಶಸ್ಸು ಕಾಣುತ್ತೀರಿ.
ವೃಶ್ಚಿಕ ರಾಶಿ: ಈ ರಾಶಿಯವರಿಗೆ ಕೆಲಸ ಕಾರ್ಯದಲ್ಲಿ ತೊಂದರೆ ಎದುರಾಗಲಿದೆ. ಅದೇ ರೀತಿ ಹಣಕಾಸಿನ ವಿಚಾರದಲ್ಲೂ ತೊಂದರೆ ಎದುರಿಸಬೇಕಾಗುತ್ತದೆ. ಪೋಷಕರು ಮಕ್ಕಳ ಬಗ್ಗೆ ಗಮನ ನೀಡಬೇಕಾಗುತ್ತದೆ.
ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ವೈಯಕ್ತಿಕವಾಗಿ ಕೆಲವು ವಿಚಾರದಲ್ಲಿ ತೊಂದರೆ ಎದುರಾಗಬಹುದು.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಬಂಧು-ಬಾಂಧವರಿಂದ ಖುಷಿ ಸಿಗಲಿದೆ. ಆರ್ಥಿಕವಾಗಿಯೂ ಇಂದು ಅಭಿವೃದ್ಧಿ ಕಾಣುತ್ತೀರಿ.
ಕುಂಭ ರಾಶಿ: ಈ ರಾಶಿಯವರಿಗೆ ಇಂದು ಉತ್ತಮ ದಿನವಾಗಲಿದೆ. ಮನೆ ಹಾಗೂ ಕುಟುಂಬದ ವಿಚಾರದತ್ತ ಗಮನ ನೀಡಬೇಕಾಗುತ್ತದೆ.
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ದಿನ ಇದ್ದ ತೊಂದರೆ ಎಲ್ಲವೂ ಮಾಯವಾಗುತ್ತದೆ. ಕೆಲಸ ಕಾರ್ಯದಲ್ಲಿಯೂ ಅಭಿವೃದ್ಧಿ ನಿಮ್ಮದಾಗುತ್ತದೆ.