ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಶತಭಿಷಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.
ಮೇಷ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದ್ದು ಹೊಸ ಅವಕಾಶಗಳು ಒದಗಿ ಬರಬಹುದು. ಜಂಟಿ ಹಣ ಹಾಗೂ ಸಾಲ ವ್ಯವಹಾರದಲ್ಲಿ ಲಾಭ, ಆದರೆ ಆರೋಗ್ಯದ ಬಗ್ಗೆ ಗಮನವಹಿಸುವುದು ಉತ್ತಮ.
ವೃಷಭ ರಾಶಿ: ಈ ರಾಶಿಯವರಿಗೆ ಇಂದು ಸಂಬಂಧದಲ್ಲಿ ಹಾಗೂ ಮನೆಯ ವಿಚಾರವಾಗಿ ಒತ್ತಡ ಇರಬಹುದು. ಆದರೆ ಆರ್ಥಿಕವಾಗಿ ಇಂದು ಕೆಲಸ ಕಾರ್ಯದಲ್ಲಿ ಯಶಸ್ಸು ಪಡೆಯುತ್ತೀರಿ.
ಮಿಥುನ ರಾಶಿ: ಇಂದು ಈ ರಾಶಿಗೆ ಉತ್ತಮವಾದ ದಿನವಾಗಿದೆ. ಹೊಸ ಪರಿಚಯದ ಮೂಲಕ ಅಭಿವೃದ್ಧಿ ಕಾಣುತ್ತೀರಿ. ಕೆಲಸ ಕಾರ್ಯದಲ್ಲಿ ಹೊಸ ಅವಕಾಶಗಳು ಸಿಗಬಹುದು.
ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಉತ್ತಮವಾದ ದಿನವಾಗಿದೆ. ಸೃಜನಾತ್ಮಕ ಕೆಲಸದಲ್ಲಿ ಹೆಚ್ಚಿನ ಯಶಸ್ಸು ಸಿಗಬಹುದು. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ತೆಗೆದು ಕೊಳ್ಳಬೇಕಾಗುತ್ತದೆ
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಇಂದು ಉದ್ಯೋಗದಲ್ಲಿ ನಿಮಗೆ ಪ್ರಗತಿ ಹೆಚ್ಚಲಿದೆ. ಆದರೆ ಹಿರಿಯರ ಆಶೀರ್ವಾದವೂ ಬಹಳಷ್ಟು ಪ್ರಮುಖವಾಗುತ್ತದೆ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಮನೆಯ ಜವಾಬ್ದಾರಿ ಹಾಗೂ ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕಾಗುತ್ತದೆ. ಬರವಣಿಗೆ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಇಂದು ಯಶಸ್ಸು ಸಿಗುತ್ತದೆ.
Vastu Tips: ಮಲಗುವ ಕೋಣೆಯಲ್ಲಿ ಡ್ರೆಸ್ಸಿಂಗ್ ಟೇಬಲ್ ಎಲ್ಲಿರಬೇಕು? ದಾಂಪತ್ಯ ಸುಖಕ್ಕೆ ವಾಸ್ತು ಹೇಳುವ ನಿಯಮ ಇದು!
ತುಲಾ ರಾಶಿ: ತುಲಾ ರಾಶಿ ಅವರಿಗೆ ದಾಂಪತ್ಯ ಹಾಗೂ ಸ್ನೇಹಿತರ ಜೊತೆ ಉತ್ತಮ ಸಮಯ ಕಳೆಯಲಿದ್ದೀರಿ. ಬಿಸೆನೆಸ್ ವ್ಯವಹಾರ ಹಾಗೂ ವ್ಯಾಪಾರಿಗಳಿಗೆ ಲಾಭದಾಯಕವಾಗಿದೆ.
ವೃಶ್ಚಿಕ ರಾಶಿ: ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಆತ್ಮವಿಶ್ವಾಸ ಚೆನ್ನಾಗಿ ಇರಲಿದ್ದು ಹೊಸ ಯೋಜನೆಗಳಿಗೆ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಉತ್ತಮ ದಿನವಾಗಿದೆ. ಹೊಸ ಕೆಲಸ ಹಾಗೂ ವ್ಯವಹಾರದಲ್ಲಿ ಯಶಸ್ಸು ಕಾಣುತ್ತೀರಿ. ಸ್ನೇಹಿತರ ಜೊತೆ ಇಂದು ಸಹಕಾರ ಸಿಗುತ್ತದೆ.
ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕೆಲಸ ಕಾರ್ಯದಲ್ಲಿ ಅಭಿವೃದ್ಧಿ ಕಾಣಲಿದ್ದು ಸ್ನೇಹಿತರಿಂದ ಲಾಭ ಸಿಗುತ್ತದೆ.
ಕುಂಭ ರಾಶಿ: ಈ ರಾಶಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಹಾಗೂ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಬಹುದು
ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಆತ್ಮವಿಶ್ವಾಸದಿಂದ ಕೈಗೊಂಡ ಕೆಲಸದಲ್ಲಿ ಯಶಸ್ಸು ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ.